Asianet Suvarna News Asianet Suvarna News

ಶ್ರೀ ದೇವೀರಮ್ಮ ಜಾತ್ರಾ ಮಹೋತ್ಸವ: ಇಂದು ಮಧ್ಯರಾತ್ರಿಯಿಂದ ಬೆಟ್ಟವನ್ನೇರಿ ಹರಕೆ ತೀರಿಸುವ ಭಕ್ತರು

ಇಷ್ಟಾರ್ಥ ಸಿದ್ಧಿಗಾಗಿ ಭಕ್ತರು ನಾನಾ ರೀತಿಯಲ್ಲಿ ದೇವರ ಮೊರೆ ಹೋಗ್ತಾರೆ. ಆದ್ರೆ, ಚಿಕ್ಕಮಗಳೂರಿನ ದೇವಿರಮ್ಮನ ಭಕ್ತರು ತಮ್ಮ ಬೇಡಿಕೆ ಈಡೇರಿಕೆಗಾಗಿ ದೇವರೆದುರು ದೇಹವನ್ನು ದಂಡಿಸಿಸ್ತಾರೆ. ಬರಿಗಾಲಲ್ಲೇ 3,000 ಅಡಿ ಎತ್ತರದ ಬೆಟ್ಟವನ್ನೇರಿ ಹರಕೆ ತೀರಿಸ್ತಾರೆ. 

Sri Deviramma Jatra Mahotsava at Chikkamagaluru gvd
Author
First Published Nov 11, 2023, 9:03 PM IST

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು (ನ.11): ಇಷ್ಟಾರ್ಥ ಸಿದ್ಧಿಗಾಗಿ ಭಕ್ತರು ನಾನಾ ರೀತಿಯಲ್ಲಿ ದೇವರ ಮೊರೆ ಹೋಗ್ತಾರೆ. ಆದ್ರೆ, ಚಿಕ್ಕಮಗಳೂರಿನ ದೇವಿರಮ್ಮನ ಭಕ್ತರು ತಮ್ಮ ಬೇಡಿಕೆ ಈಡೇರಿಕೆಗಾಗಿ ದೇವರೆದುರು ದೇಹವನ್ನು ದಂಡಿಸಿಸ್ತಾರೆ. ಬರಿಗಾಲಲ್ಲೇ 3,000 ಅಡಿ ಎತ್ತರದ ಬೆಟ್ಟವನ್ನೇರಿ ಹರಕೆ ತೀರಿಸ್ತಾರೆ. ಇಂದು ರಾತ್ರಿ ನಾಳೆ ಬೆಳಗ್ಗೆ ಬೆಟ್ಟವನ್ನೇರಿ ಲಕ್ಷಾಂತರ ಮಂದಿ ದೇವಿ ದರ್ಶನವನ್ನು ಪಡೆಯುತ್ತಾರೆ. ವರ್ಷಕ್ಕೊಮ್ಮೆ ನಡೆಯೋ ಜಾತ್ರಾ ಮಹೋತ್ಸವದಲ್ಲಿ ಈ ಬಾರಿ ಲಕ್ಷಕ್ಕೂ ಅಧಿಕ ಭಕ್ತರು ಪಾಲ್ಗೊಳ್ಳೋ ನಿರೀಕ್ಷೆ ಇದೆ.ಇಂದು ರಾತ್ರಿ ನಾಳೆ ಬೆಳಗ್ಗಿನ ಜಾವ ಬೆಟ್ಟ ಹತ್ತೋ ಲಕ್ಷಕ್ಕೂ ಅಧಿಕ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ದೇವಾಲಯದ ಆಡಳಿತ ಮಂಡಳಿ ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿದೆ. 

ವರ್ಷಗೊಮ್ಮೆ ದರ್ಶನ ನೀಡೋ ದೇವಿರಮ್ಮ : ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದಲ್ಲಿರೋ ಬಿಂಡಿಗ ದೇವಿರಮ್ಮ ದೇವಾಲಯ. ದೀಪಾವಳಿ ಅಂಗವಾಗಿ ಮೂರು ದಿನಗಳ ಕಾಲ ಈ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತೇ.  3000 ಅಡಿಗಳಷ್ಟು ಎತ್ತರ ಗುಡ್ಡದಲ್ಲಿರೋ ದೇವಿರಮ್ಮ ವರ್ಷಗೊಮ್ಮೆ ಮಾತ್ರ ಜನರಿಗೆ ದರ್ಶನ ನೀಡೋದು. ಮತ್ತೊಂದು ವಿಶೇಷ ಅಂದ್ರೆ 3000 ಅಡಿ ಎತ್ತರವಿರೋ ಈ ಬೆಟ್ಟವನ್ನ ಭಕ್ತಾಧಿಗಳ ಬರಿಗಾಲಲ್ಲೇ ಬೆಟ್ಟವೇರೋದು. ಮೂರು ದಿನಗಳ ಕಾಲ ನಡೆಯೋ ದೇವರಮ್ಮ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ದತೆ ನಡೆಸಲಾಗಿದೆ. 

ಶೃಂಗೇರಿಯಲ್ಲಿ ಲೋಕಾರ್ಪಣೆಗೊಂಡ ಶಂಕರ ಪ್ರತಿಮೆ: ಉಭಯ ಜಗದ್ಗುರುಗಳಿಂದ ಪೂಜೆ

ನರಕ ಚತುರ್ದಶಿಯಂದು ದೇವಿರಮ್ಮನ ಬೆಟ್ಟದಲ್ಲಿ ವಿಶೇಷ ಪೂಜೆ, ಹೋಮ ಹವನಗಳನ್ನ ದೇವಿಗೆ ಸಲ್ಲಿಸಿ ಬೆಳಗಿನ ಜಾವ 4 ಗಂಟೆಯಿಂದ ಸಾರ್ವಜನಿಕರ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತೆ. ನರಕ ಚತುದರ್ಶಿಯಂದು ಕಾಲಿಗೆ ಚಪ್ಪಲಿಯನ್ನು ಹಾಕದೆ ಕಾಡು, ಬೆಟ್ಟ-ಗುಡ್ಡದ ಕಲ್ಲಿನ ಹಾದಿ, ಕಲ್ಲು-ಮುಳ್ಳುಗಳ ನಡುವೆ ಬೆಟ್ಟವನ್ನೇರಿ ದೇವಿಯ ದರ್ಶನ ಪಡೆದು ಭಕ್ತರು ಪುನೀತರಾಗ್ತಾರೆ. ಈ ಜಾತ್ರೆಯಲ್ಲಿ ಪಾಲ್ಗೊಂಡು, ಬೆಟ್ಟವನ್ನೇರಿ ಪೂಜೆ ಮಾಡಿಸಿದ್ರೆ ಭಕ್ತರ ಇಷ್ಟಾರ್ಥ ಸಿದ್ಧಿಸೋದ್ರಿಂದ ಭಕ್ತರು ಜಾತ್ರೆಯಂದು ದೇಹವನ್ನ ದಂಡಿಸೋದ್ರ ಮೂಲಕ ತಮ್ಮ ಕಾರ್ಯ, ಬಯಕೆಯನ್ನ ಸಿದ್ಧಿಸಿಕೊಳ್ತಾರೆ.

ಇಂದು ಮಧ್ಯರಾತ್ರಿಯಿಂದ ಬೆಟ್ಟವನ್ನೇರಿ ಹರೆಕೆ ತೀರಿಸುವ ಭಕ್ತರು: ಸಮುದ್ರಮಟ್ಟದಿಂದ ಸುಮಾರು 3000 ಅಡಿ ಎತ್ತದಲ್ಲಿರೋ ದೇವಿರಮ್ಮನ ಬೆಟ್ಟದಲ್ಲಿ ವರ್ಷದಲ್ಲಿ ಒಮ್ಮೆ ಮಾತ್ರ ಪೂಜೆ ನಡೆಯೋದು. ಈ ಬೆಟ್ಟಕ್ಕೆ ಯಾವುದೇ ರಸ್ತೆ ಸಂಪರ್ಕವೂ ಇಲ್ಲ. ಇದರಿಂದಾಗಿ ಬೆಟ್ಟಗುಡ್ಡಗಳನ್ನು ಅಲೆದಾಡಿಕೊಂಡೆ ಬರಬೇಕು. ಜೊತೆಗೆ ಬೆಟ್ಟ ಏರುವಾಗ ಯಾವುದೇ ಆಹಾರವನ್ನು ಸ್ವೀಕರಿಸುವಂತಿಲ್ಲ. ಕಾಲಿಗೆ ಚಪ್ಪಲಿಯನ್ನು ಹಾಕುವಂತಿಲ್ಲ. ದೇವರಿಗೆ ಪೂಜೆ ಸಲ್ಲಿಸಿದ ನಂತರ ಈ ಬೆಟ್ಟದಲ್ಲಿ ಸಂಜೆ ದೀಪ ಬೆಳಗಿದ ನಂತರವೇ ಊಟ. ರಾಜ್ಯ ಹೊರರಾಜ್ಯಗಳಿಂದ ಆಗಮಿಸೋ ಭಕ್ತಾಧಿಗಳಿಗೆ ಸಕಲ ಸಿದ್ದತೆಯನ್ನ ಜಿಲ್ಲಾಡಳಿತ ಹಾಗೂ ದೇವಾಲಯ ಸಮಿತಿ ವ್ಯವಸ್ಥೆಯನ್ನ ನಿರ್ಮಿಸಿಕೊಂಡಿದ್ದಾರೆ. 

ಪ್ರಧಾನಿ ಮೋದಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಲಿ: ಸಚಿವ ಎಂ.ಸಿ.ಸುಧಾಕರ್

ಈ ಬಾರಿ ಲಕ್ಷಕ್ಕೂ ಅಧಿಕ ಸಂಖ್ಯೆಯ ಭಕ್ತರು ಬೆಟ್ಟವನ್ನೆರೋ ನಿರೀಕ್ಷೆಯಿ ಇದ್ದು  ಒಟ್ಟಾರೆ, ದೀಪಾವಳಿಯ ದಿನದಂದು ಆರಂಭಗೊಳ್ಳೋ ದೇವಿರಮ್ಮ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೇ ಆರಂಭಗೊಂಡಿದೆ. ಕಾಫಿನಾಡಲ್ಲಿ ನೆಲೆಸಿರುವ ಮಲ್ಲೇನಹಳ್ಳಿ ಬಿಂಡಿಗ ದೇವಿರಮ್ಮ ಅಗಣಿತ ಮಂದಿ ಭಕ್ತರ ಪಾಲಿಗೆ ಬೇಡಿಕೆಯನ್ನೆಲ್ಲಾ ಈಡೇರಿಸೋ ಕರುಣಾಳು ಅಂದ್ರೆ ತಪ್ಪಲ್ಲ. ಜನರು ತಮ್ಮ ಆಸೆ, ಆಶೋತ್ತರಗಳನ್ನು ಈಡೇರಿಸುವ ದೇವಿಯಾಗಿ ದೇವಿರಮ್ಮನನ್ನು ನಂಬಿ ವರ್ಷಕ್ಕೊಂದು ಭಾರಿ ನಿಷ್ಕಲ್ಮಷ ಮನಸ್ಸಿನಿಂದ ತಮ್ಮ ಕೈಲಾದಷ್ಟು ಮಟ್ಟಿಗೆ ಭಕ್ತಿ ಸಮರ್ಪಿಸಿ ಪಾವನರಾಗ್ತಾರೆ.

Follow Us:
Download App:
  • android
  • ios