Peach Fruitನಲ್ಲಿ ವಿಟಮಿನ್ ಸಿ ಮತ್ತು ಎ ಅಧಿಕವಾಗಿದೆ. ಇದು ಚರ್ಮದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಕೊಲಾಜನ್ ಉತ್ಪತ್ತಿ, ಚರ್ಮದ ತೇವಾಂಶ ಕಾಪಾಡುವುದು ಮತ್ತು ಯುವಿ ಕಿರಣಗಳಿಂದ ರಕ್ಷಣೆ ನೀಡಲು ಇದು ಸಹಾಯ ಮಾಡುತ್ತದೆ. ಅದರಲ್ಲಿಯೂ ರಸಭರಿತವಾದ ಈ ಹಣ್ಣು ತಿಂದರೆ ಬೇಸಿಗೆಯಲ್ಲಿ ಬಾಯಾರಿಕೆ ಕಡಿಮೆ ಆಗುವುದಲ್ಲದೇ, ದೇಹಕ್ಕೆ ಬೇಕಾಗುವ ಪೌಷ್ಠಿಕ ಆಂಶಗಳು ಸುಲಭವಾಗಿ ಸಿಗುವಂತಾಗುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತೆ ಹಣ್ಣು.

Peach Fruit ಪೋಷಕಾಂಶಗಳಿಂದ ತುಂಬಿದ, ಆದ್ರೆ ಕಡಿಮೆ ಕ್ಯಾಲೋರಿ ಇರುವ ಹಣ್ಣು. ಇದರಲ್ಲಿ ಫೈಬರ್, ಪೊಟ್ಯಾಶಿಯಂ, ವಿಟಮಿನ್ ಎ ಮತ್ತು ಸಿ ಹೇರಳವಾಗಿದೆ. ಕ್ಯಾರೊಟಿನಾಯ್ಡ್ಸ್ ಮತ್ತು ಪಾಲಿಫಿನಾಲ್‌ಗಳಂತಹ ಆ್ಯಂಟಿಆಕ್ಸಿಡೆಂಟ್‌ಗಳು ಹೆಚ್ಚಾಗಿರೋದ್ರಿಂದ, ದೇಹದಲ್ಲಿ ಉರಿಯೂತ ಕಡಿಮೆ ಮಾಡಲು ಮತ್ತು ರೋಗನಿರೋಧಕ ಶಕ್ತಿಯನ್ನು (Boosting Immunity Power) ಕಾಪಾಡಲು ಸಹಾಯ ಮಾಡುತ್ತೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜೀರ್ಣಕ್ರಿಯೆಗೆ (Digestion) ತುಂಬಾ ಒಳ್ಳೆಯದು: ಪೀಚ್ ಹಣ್ಣಿನಲ್ಲಿ ನಾರಿನಾಂಶ ಹೆಚ್ಚಾಗಿರೋದ್ರಿಂದ ಮಲಬದ್ಧತೆ (Constipation) ಸಮಸ್ಯೆಯನ್ನು ತಡೆಯುತ್ತೆ ಮತ್ತು ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತೆ.

ಹೃದಯದ ಆರೋಗ್ಯಕ್ಕೆ ಬೆಸ್ಟ್: ಪೀಚ್‌ನಲ್ಲಿರುವ ಪೊಟ್ಯಾಶಿಯಂ ರಕ್ತದೊತ್ತಡವನ್ನು (Blood Pressure) ನಿಯಂತ್ರಿಸಲು ಸಹಾಯ ಮಾಡುತ್ತೆ. ಜೊತೆಗೆ, ದೇಹದಲ್ಲಿರುವ ಹೆಚ್ಚುವರಿ ಸೋಡಿಯಂ (Sodium) ಅನ್ನು ಹೊರಹಾಕಿ, ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತೆ.

ಚರ್ಮವನ್ನು ರಕ್ಷಿಸುತ್ತೆ: ಇದರಲ್ಲಿ ವಿಟಮಿನ್ ಸಿ ಮತ್ತು ಎ ಅಧಿಕವಾಗಿರುವುದರಿಂದ, ಕೊಲಾಜನ್ ಉತ್ಪತ್ತಿಗೆ, ಚರ್ಮದಲ್ಲಿ ತೇವಾಂಶ ಉಳಿಸಿಕೊಳ್ಳಲು ಮತ್ತು ಸೂರ್ಯನ ಯುವಿ ಕಿರಣಗಳಿಂದಾಗುವ ಹಾನಿಯಿಂದ ಚರ್ಮವನ್ನು ರಕ್ಷಿಸಲು ಇದು ನೆರವಾಗುತ್ತೆ.

ರೋಗನಿರೋಧಕ ಶಕ್ತಿ ಹೆಚ್ಚಿಸುತ್ತೆ: ಪೀಚ್ ಹಣ್ಣಿನಲ್ಲಿರುವ ವಿಟಮಿನ್ ಸಿ ಮತ್ತು ಆ್ಯಂಟಿಆಕ್ಸಿಡೆಂಟ್‌ಗಳು ದೇಹವು ಸೋಂಕುಗಳ ವಿರುದ್ಧ ಹೋರಾಡಲು ಶಕ್ತಿ ನೀಡುತ್ತವೆ.

ಕೆಲವು ಅಧ್ಯಯನಗಳ ಪ್ರಕಾರ, ಪೀಚ್‌ನಲ್ಲಿರುವ ಪಾಲಿಫಿನಾಲ್‌ಗಳು ಕೆಲವು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯಬಲ್ಲವು ಎಂದು ತಿಳಿದುಬಂದಿದೆ.

ಕಣ್ಣಿನ ಆರೋಗ್ಯಕ್ಕೆ ಉತ್ತಮ: ಪೀಚ್‌ನಲ್ಲಿರುವ ಬೀಟಾ-ಕ್ಯಾರೋಟಿನ್ ಮತ್ತು ಆ್ಯಂಟಿಆಕ್ಸಿಡೆಂಟ್‌ಗಳಾದ ಲ್ಯೂಟಿನ್ ಮತ್ತು ಜಿಯಾಕ್ಸಾಂಥಿನ್, ಮ್ಯಾಕ್ಯುಲರ್ ಡಿಜೆನರೇಶನ್ (ದೃಷ್ಟಿ ದೋಷ) ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ.

ತೂಕ ಇಳಿಸಲು ಬೆಸ್ಟ್: ಇದರಲ್ಲಿ ಕ್ಯಾಲೋರಿ ಮತ್ತು ಕೊಬ್ಬಿನಾಂಶ ಕಡಿಮೆ ಇದ್ದು, ನಾರಿನಾಂಶ ಹೆಚ್ಚಾಗಿರೋದ್ರಿಂದ ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಒಂದು ಉತ್ತಮ ಸ್ನ್ಯಾಕ್ ಆಗಿದೆ. ಪೋಷಕಾಂಶಗಳ ಆಗರವಾಗಿರುವ ಪೀಚ್ ಹಣ್ಣನ್ನು ತಿನ್ನುವುದರಿಂದ ಕೊಲೆಸ್ಟ್ರಾಲ್ ಕೂಡ ಕಡಿಮೆಯಾಗುತ್ತೆ.