Rameshwaram cafe ರಾಮೇಶ್ವರಂ ಕೆಫೆಯಲ್ಲಿ ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ!

ಇಲ್ಲಿನ ಜನಪ್ರಿಯ ರಾಮೇಶ್ವರಂ ಕೆಫೆಯಲ್ಲಿ ಅವಧಿ ಮುಗಿದ ಕೆಲವು ಸಾಮಗ್ರಿಗಳು ಪತ್ತೆಯಾಗಿವೆ. ಮಾಧಾಪುರ್‌ನಲ್ಲಿರುವ ಕೆಫೆ ಮೇಲೆ ತೆಲಂಗಾಣ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿ ಅಲ್ಲಿನ ಆಹಾರ ಸಾಮಗ್ರಿಗಳನ್ನು ಪರಿಶೀಲನೆ ನಡೆಸಿದ್ದಾರೆ.

Rameshwaram cafe in Hyderabad raided by food safety department expired items found gow

ಹೈದರಾಬಾದ್‌ (ಮೇ.25): ಇಲ್ಲಿನ ಜನಪ್ರಿಯ ರಾಮೇಶ್ವರಂ ಕೆಫೆಯಲ್ಲಿ ಅವಧಿ ಮುಗಿದ ಕೆಲವು ಸಾಮಗ್ರಿಗಳು ಪತ್ತೆಯಾಗಿವೆ. ಮಾಧಾಪುರ್‌ನಲ್ಲಿರುವ ಕೆಫೆ ಮೇಲೆ ತೆಲಂಗಾಣ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿ ಅಲ್ಲಿನ ಆಹಾರ ಸಾಮಗ್ರಿಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅವಧಿ ಮುಕ್ತಾಯವಾದ 100 ಕೇಜಿ ಕಪ್ಪು ಹೆಸರು ಕಾಳು, 10 ಕೇಜಿ ನಂದಿನಿ ಮೊಸರು, 8 ಲೀಟರ್‌ ಹಾಲು, ಬೆಲ್ಲ, ತುಪ್ಪ ಮೊದಲಾದ ವಸ್ತುಗಳು ಪತ್ತೆಯಾಗಿವೆ. ಆಹಾರ ಸುರಕ್ಷತಾ ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ: 4 ರಾಜ್ಯ, 11 ಕಡೆ ಎನ್‌ಐಎ ರೇಡ್‌

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಫೆ ಮಾಲೀಕರಾದ ದಿವ್ಯಾ ರಾಘವೇಂದ್ರ ರಾವ್ ಮತ್ತು ರಾಘವೇಂದ್ರ ರಾವ್ ನಮ್ಮ ಹೈದರಾಬಾದ್ ನಲ್ಲಿರುವ ಕೆಫೆಯಲ್ಲಿ ಅಧಿಕಾರಿಗಳು ನಡೆಸಿದ  ಅವಲೋಕನಗಳ ಬಗ್ಗೆ ತಿಳಿದುಕೊಂಡಿದ್ದೇವೆ. ಸೇವೆ ಮತ್ತು ನೈರ್ಮಲ್ಯದಲ್ಲಿ ಉನ್ನತ ಗುಣಮಟ್ಟವನ್ನು ಕಾಪಾಡಿಕೊಳ್ಳಲು ನಾವು ಸಂಪೂರ್ಣವಾಗಿ ಬದ್ಧರಾಗಿದ್ದೇವೆ. ಗ್ರಾಹಕರ ಸುರಕ್ಷತೆಯೇ ನಮ್ಮ ಪ್ರಮುಖ ಆದ್ಯತೆಯಾಗಿದೆ.  ಈ ಬಗ್ಗೆ  ಪರಿಶೀಲಿಸುತ್ತಿದ್ದೇವೆ. ತನಿಖೆಗೆ ಸಹಕರಿಸುತ್ತೇವೆ ಎಂದಿದ್ದಾರೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟದ ಹಿನ್ನೆಲೆಯಲ್ಲಿ ಬೆಂಗಳೂರಿನ 4 ಕಡೆ ಎನ್‌ಐಎ ದಾಳಿ

ಆದರೆ ಈ ಬಗ್ಗೆ ಕೆಫೆ ಸಿಬ್ಬಂದಿ ಇದನ್ನು ಅಡುಗೆಗೆ ಬಳಸಲು ಇಟ್ಟಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ ಕೆಫೆ ಮಾಲೀಕರು ಕೂಡ ಪತ್ತೆಯಾದ ವಸ್ತುಗಳನ್ನು ಬಳಕೆಗೆ ಇಟ್ಟಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೈದರಾಬಾದ್ ಔಟ್‌ಲೆಟ್‌ನಲ್ಲಿ ಮಾತ್ರ ನಮಗೆ ವಾರಕ್ಕೆ 500 ಕೆಜಿಗೂ ಹೆಚ್ಚು ಉದ್ದಿನಬೇಳೆ, ಪ್ರತಿದಿನ 300 ಲೀಟರ್ ಹಾಲು ಮತ್ತು ದಿನಕ್ಕೆ 80 ರಿಂದ 100 ಲೀಟರ್ ಮೊಸರು ಬೇಕಾಗುತ್ತದೆ. ರಾಜ್ಯಗಳಾದ್ಯಂತ ನಮ್ಮ ಎಲ್ಲಾ ಔಟ್‌ಲೆಟ್‌ಗಳಲ್ಲಿ ನೈರ್ಮಲ್ಯ ತಪಾಸಣೆಗಾಗಿ ಆದೇಶಿಸಿದ್ದೇವೆ. ನಮ್ಮ ಗ್ರಾಹಕರ ಮನಸ್ಸು ಗೆಲ್ಲಲು ಉತ್ತಮ ಗುಣಮಟ್ಟದ ಆಹಾರ ಮತ್ತು ಸೇವೆ ನೀಡುವುದು ಮುಖ್ಯ ಎಂದು ನಾವು ಯಾವಾಗಲೂ ನಂಬಿದ್ದೇವೆ ಎಂದಿದ್ದಾರೆ. ಇತ್ತೀಚೆಗೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಗೊಂಡಿತ್ತು.

Latest Videos
Follow Us:
Download App:
  • android
  • ios