ಸೋಮಶೇಖರ್ ಅವರು ಕಾಂಗ್ರೆಸ್ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ರಾಜಕೀಯ ಜೀವನದಲ್ಲಿ ಬಹಳ ದೊಡ್ಡ ತಪ್ಪು ಮಾಡಿದ್ದಾರೆ. ಮುಂದೆ ಅವರೇ ಅನುಭವಿಸುತ್ತಾರೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ 

ಬೆಂಗಳೂರು(ಏ.06): ವಿನಾಶಕಾಲೇ ವಿಪರೀತ ಬುದ್ಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶಾಸಕ ಎಸ್‌.ಟಿ.ಸೋಮಶೇಖರ್ ವಿರುದ್ಧ ಹರಿಹಾಯ್ದಿದ್ದಾರೆ.

Add Asianetnews Kannada as a Preferred SourcegooglePreferred

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮಶೇಖರ್ ಅವರು ಕಾಂಗ್ರೆಸ್ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ರಾಜಕೀಯ ಜೀವನದಲ್ಲಿ ಬಹಳ ದೊಡ್ಡ ತಪ್ಪು ಮಾಡಿದ್ದಾರೆ. ಮುಂದೆ ಅವರೇ ಅನುಭವಿಸುತ್ತಾರೆ ಎಂದರು.

ಗ್ಯಾರಂಟಿ ಭ್ರಮೆಯಲ್ಲಿ ಸಿದ್ದರಾಮಯ್ಯ ಸರ್ಕಾರ: ಬಿ.ವೈ.ವಿಜಯೇಂದ್ರ

ಇದರ ಬಗ್ಗೆ ಮುಂದೆ ನೋಡುತ್ತೀರಿ. ರಾಜಕೀಯವಾಗಿ ತಪ್ಪು ನಿರ್ಧಾರ ಮಾಡಿದ್ದಾರೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅಂಥವರು ದೇಶದಲ್ಲಿ ಇದ್ದಾಗ ಸೋಮಶೇಖರ್ ತಪ್ಪು ನಿರ್ಧಾರ ಮಾಡಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರು ಮಾತನಾಡಿ, ಸೋಮಶೇಖರ್ ನಡೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು.