ಭಾರತದಲ್ಲಿ ನಡೆಯಬೇಕಿರುವ ಫಿಫಾ ಅಂಡರ್ 17 ಮಹಿಳಾ ಫುಟ್ಬಾಲ್ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸುತ್ತೇವೆ ಎಂದು AIFF ಅಧ್ಯಕ್ಷ ಪ್ರಫುಲ್ ಪಟೇಲ್ ತಿಳಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
ನವದೆಹಲಿ(ಏ.11): ಕೊರೋನಾದಿಂದಾಗಿ ಮುಂದೂಡಲ್ಪಟ್ಟಿದ್ದ ಅಂಡರ್ 17 ಮಹಿಳಾ ಫಿಫಾ ವಿಶ್ವಕಪ್ ಫುಟ್ಬಾಲ್ ಟೂರ್ನಿಯ ವೇಳಾಪಟ್ಟಿಯನ್ನು ಶೀಘ್ರದಲ್ಲೇ ನಿರ್ಧರಿಸಲಾಗುವುದು ಎಂದು ಆಲ್ ಇಂಡಿಯಾ ಫುಟ್ಬಾಲ್ ಫೆಡರೇಷನ್ ಅಧ್ಯಕ್ಷ ಪ್ರಫುಲ್ ಪಟೇಲ್ ತಿಳಿಸಿದ್ದಾರೆ.
ಕೊರೋನಾ ಎಫೆಕ್ಟ್: ಭಾರತದಲ್ಲಿ ನಡೆಯಬೇಕಿದ್ದ ಫುಟ್ಬಾಲ್ ವಿಶ್ವಕಪ್ ಮುಂದಕ್ಕೆ
ಶುಕ್ರವಾರ ಆಲ್ ಇಂಡಿಯಾ ಫುಟ್ಬಾಲ್ ಫೆಡರೇಷನ್ (ಎಐಎಫ್‌ಎಫ್), ಫಿಫಾ ಅಧಿಕಾರಿಗಳ ಜೊತೆ ನಡೆಸಿದ ಸಭೆಯಲ್ಲಿ ಸಾಧ್ಯವಾದಷ್ಟು ಬೇಗ ಟೂರ್ನಿಯ ದಿನಾಂಕವನ್ನು ಪ್ರಕಟಿಸಲಿದ್ದೇವೆ ಎಂದು ಎಐಎಫ್‌ಎಫ್ ಅಧ್ಯಕ್ಷ ಪ್ರಫುಲ್ ಪಟೇಲ್ ತಿಳಿಸಿದ್ದಾರೆ. ಕೊರೋನಾ ವೈರಸ್ ಭಾರತದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಏಪ್ರಿಲ್ ಮೊದಲ ವಾರ ಫುಟ್ಬಾಲ್ ವಿಶ್ವಕಪ್ ಕೂಟವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲು ಫಿಫಾ ತೀರ್ಮಾನಿಸಿತ್ತು. ಪರಿಸ್ಥಿತಿ ಸುಧಾರಿಸಿದ ಬಳಿಕ ಹೊಸ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಫಿಫಾ ತಿಳಿಸಿತ್ತು.
2027ರ ಎಎಫ್‌ಸಿ ಏಷ್ಯನ್ ಕಪ್ ಆತಿಥ್ಯಕ್ಕೆ ಭಾರತ ಬಿಡ್
ಕೋಲ್ಕತಾ, ಗುವಾಹಟಿ, ಭುವನೇಶ್ವರ, ಅಹಮದಾಬಾದ್ ಹಾಗೂ ನವೀ ಮುಂಬೈನಲ್ಲಿ ಪಂದ್ಯಗಳು ನಡೆಯಲಿವೆ. ಟೂರ್ನಿಯಲ್ಲಿ 16 ತಂಡಗಳು ಭಾಗವಹಿಸಲಿದ್ದು, ಭಾರತ ಮಹಿಳಾ ತಂಡಕ್ಕಿದು ಮೊದಲ ವಿಶ್ವಕಪ್ ಟೂರ್ನಿಯಾಗಿದೆ. ಈ ಮೊದಲು ಭಾರತ 2017ರಲ್ಲಿ ಅಂಡರ್-17 ಪುರುಷರ ವಿಶ್ವಕಪ್ ಟೂರ್ನಿಯನ್ನು ಯಶಸ್ವಿಯಾಗಿ ಆಯೋಜಿಸಿ ಸೈ ಎನಿಸಿಕೊಂಡಿತ್ತು.
"
