ಗದಗ(ಅ.28): ಟ್ರ್ಯಾಕ್ಟರ್‌ವೊಂದು ಪಲ್ಟಿಯಾದ ಪರಿಣಾಮ ಇಬ್ಬರು ದಾರಣವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆ ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮದ ಬಳಿ ಭಾನುವಾರ ನಡೆದಿದೆ. ಮೃತರನ್ನು ಶಿವಾನಂದ(18),ಮಲ್ಲಿಕಾರ್ಜುನ (20) ಎಂದು ಗುರುತಿಸಲಾಗಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಮೃತರಿಬ್ಬರು ಚಿಕ್ಕನರಗುಂದ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ. ಟ್ರ್ಯಾಕ್ಟರ್‌ ಪಲ್ಟಿಯಾಗಿದ್ದರಿಂದ ಇಂಜಿನ್ ಕೆಳಗೆ ಇಬ್ಬರೂ ಸಿಲುಕಿ ಸಾವನ್ನಪ್ಪಿದ್ದಾರೆ. ಸ್ಥಳೀಯರು ಶವಗಳನ್ನು ಹೊರತೆಗೆದಿದ್ದಾರೆ. ಈ ಸಂಬಂಧ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೀಪಾವಳಿ ಹಬ್ಬದಂದೇ ಈ ದುರ್ಘಟನೆ ಸಂಭವಿಸಿದೆ. ಇದರಿಂದ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.