ಗದಗ(ಅ.28): ಹಿಂಬದಿಯಿಂದ ಲಾರಿಯೊಂದು ಡಿಕ್ಕಿ ಹೊಡೆದ ಪಾರಿಣಾಮ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದ ಬಳಿ ಘಟನೆ ಇಂದು(ಸೋಮವಾರ) ನಡೆದಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಮೃತರಲ್ಲಿ ಒಬ್ಬರು ನಾಗರಾಜ್(32) ಎಂದು ತಿಳಿದು ಬಂದಿದೆ. ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಕೂಡ ಮೃತಪಟ್ಟಿದ್ದಾರೆ. ಆದರೆ, ಮಹಿಳೆ ಹೆಸರು ತಿಳಿದು ಬಂದಿಲ್ಲ. ಮೃತ ನಾಗರಾಜ್ ಬಳ್ಳಾರಿ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ನವಲೆ ಗ್ರಾಮದ ನಿವಾಸಿಯಾಗಿದ್ದಾರೆ. ನೀರಾವರಿ ಇಲಾಖೆಯಲ್ಲಿ ನಾಗರಾಜ್ ಕಾರ್ಯನಿರ್ವಹಿಸ್ತಿದ್ದರು ಎಂದು ತಿಳಿದು ಬಂದಿದೆ. 

ಘಟನೆ ಬಳಿಕ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.