ಗದಗ [ನ.01]: ಮಹಿಳಾ ಪೊಲೀಸ್ ಪೇದೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯಲ್ಲಾಗಿದೆ. 

ಇಲ್ಲಿನ ಸಂಭಾಪುರ ರಸ್ತೆಯಲ್ಲಿರುವ ಪೊಲೀಸ್ ಕ್ವಾಟ್ರಸಲ್ಲಿ ಪೊಲೀಸ್ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಸೀಮಾ ಶವನಗೌಡರ್ [25] ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಗದಗ್ ನ ಗ್ರಾಮೀಣ ಠಾಣೆಯಲ್ಲಿ  ಕರ್ತವ್ಯ ನಿರ್ವಹಿಸುತ್ತಿದ್ದ ಸೀಮಾ ಒಂದು ವರ್ಷದ ಹಿಂದಷ್ಟೇ ವಿವಾಹವಾಗಿದ್ದರು. ಅಲ್ಲದೇ ಎರಡು ತಿಂಗಳ ಗರ್ಭಿಣಿಯಾಗಿದ್ದರು. ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದ್ದು, ಕಾರಣ ಪತ್ತೆಹಚ್ಚಲಾಗುತ್ತಿದೆ.

ಡಿಸಿಎಂ ಬಂದೋಬಸ್ತ್‌ಗೆ ಗರ್ಭಿಣಿ ಪೇದೆ: Sorry ಕೇಳಿ ರಜೆಗೆ ಕಳುಹಿಸಿದ SP

ಕಳೆದ ಕೆಲ ದಿನಗಳ ಹಿಂದಷ್ಟೇ ಮಂಗಳೂರಿನಲ್ಲಿ ಮಹಿಳಾ ಪೇದೆಯನ್ನು ಉಪ ಮುಖ್ಯಮಂತ್ರಿ ಭದ್ರತೆಗೆ ನೇಮಿಸಿ ಸುದ್ದಿಯಾಗಿದ್ದು, ಬಳಿಕ ಅವರಿಗೆ ರಜೆ ನೀಡಿ ಕಳುಹಿಸಲಾಗಿತ್ತು. ಇದರ ಬೆನ್ನಲ್ಲೇ ಇಲ್ಲೊಂದು ಆತ್ಮಹತ್ಯೆ ಪ್ರಕರಣ ನಡೆದಿದೆ.