- Home
- Karnataka Districts
- Bengaluru Rural
- ಬೆಂಗಳೂರು ಹೊಸೂರು ಫ್ಲೈಓವರ್ ಮೇಲೆ ಸ್ಲೀಪರ್ ಬಸ್ ಅಪಘಾತ, ನಾಲ್ವರಿಗೆ ಗಾಯ
ಬೆಂಗಳೂರು ಹೊಸೂರು ಫ್ಲೈಓವರ್ ಮೇಲೆ ಸ್ಲೀಪರ್ ಬಸ್ ಅಪಘಾತ, ನಾಲ್ವರಿಗೆ ಗಾಯ
ಬೆಂಗಳೂರು ಹೊಸೂರು ಫ್ಲೈಓವರ್ ಮೇಲೆ ಸ್ಲೀಪರ್ ಬಸ್ ಅಪಘಾತ, ನಾಲ್ವರಿಗೆ ಗಾಯ, ಚಿತ್ರದುರ್ಗ ಬಸ್ ದುರಂತದ ಬೆನ್ನಲ್ಲೇ ಇದೀಗ ಮತ್ತೊಂದು ಸ್ಲೀಪರ್ ಬಸ್ ಅಪಘಾತಕ್ಕೀಡಾಗಿದ್ದು, ಬಸ್ ಪ್ರಯಾಣವೇ ಆತಂಕ ಹುಟ್ಟಿಸುವಂತಿದೆ.

ಚಂದಾಪುರ ಫ್ಲೈಓವರ್‌ನಲ್ಲಿ ಸ್ಲೀಪರ್ ಬಸ್ ಅಪಘಾತ
ಚಿತ್ರದುರ್ಗ ಸ್ಲೀಪರ್ ಬಸ್ ದುರಂತ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಈ ಘಟನೆ ಬೆನ್ನಲ್ಲೇ ಇದೀಗ ಬೆಂಗಳೂರಿನ ಆನೇಕಲ್ ವ್ಯಾಪ್ತಿಯ ಚಂದಾಪುರಲ್ಲಿ ಸ್ಲೀಪರ ಬಸ್ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅದೃಷ್ಠವಶಾತ್ ಹೆಚ್ಚಿನ ಪ್ರಾಣಹಾನಿಯಾಗಿಲ್ಲ.
ಗಾಯಾಳುಗಳು ಆಸ್ಪತ್ರೆ ದಾಖಲು
ಬೆಂಗಳೂರಿನಿಂದ ಚೆನ್ನೈ ಕಡೆ ಪ್ರಯಾಣಿಸುತ್ತಿದ್ದ ಸ್ಲೀಪರ್ ಬಸ್ ಅಪಘಾತಕ್ಕೀಡಾಗಿದೆ. ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಈ ಘಟನೆ ನಡೆದಿದಿದೆ. ಗಾಯಗೊಂಡ ಪ್ರಯಾಣಿಕರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ನಡೆದಿಲ್ಲ
ಓವರ್ ಟೇಕ್ ವೇಳೆ ಅಪಘಾತ
ಬೆಂಗಳೂರಿನಿಂದ ಚೆನ್ನೈ ಕಡೆ ಹೊರಟಿದ್ದ ಸ್ಲೀಪರ್ ಬಸ್ ಫ್ಲೈಓವರ್ ಓವರ್ ಟೇಕ್ ಮಾಡುವ ವೇಳೆ ನಿಯಂತ್ರಣ ಕಳೆದುಕೊಂಡಿದೆ. ಪರಿಮಾಮ ಎದುರಿಗಿದ್ದ ಮತ್ತೊಂದು ಸ್ಲೀಪರ್ ಬಸ್‍ಗೆ ಡಿಕ್ಕಿ ಹೊಡೆದಿದೆ. ನಿನ್ನೆ (ಡಿ.29) ತಡ ರಾತ್ರಿ ಈ ಅಪಘಾತ ಸಂಭವಿಸಿದೆ.
ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಸ್ಲೀಪರ್ ಬಸ್ ಅಪಘಾ ಸಂಬಂಧ ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿತ್ರದುರ್ಗ ಬಸ್ ದುರಂತದ ಬಳಿಕ ಖಾಸಗಿ ಬಸ್ ಮಾಲೀಕರು ಹಾಗೂ ಚಾಲಕರು ಸಂಪೂರ್ಣವಾಗಿ ಎಚ್ಚೆತ್ತುಕೊಂಡಿಲ್ಲ ಅನ್ನೋ ಆರೋಪಗಳು ಕೇಳಿಬಂದಿದೆ. ಸುರಕ್ಷತೆ ಕಡೆಗೆ ಹೆಚ್ಚಿನ ಗಮನ ನೀಡುತ್ತಿಲ್ಲ ಎಂದು ಪ್ರಯಾಣಿಕರ ಆಕ್ರೋಶ ಹೊರಹಾಕುತ್ತಿದ್ದಾರೆ.
ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಚಿತ್ರದುರ್ಗ ದುರಂತದಲ್ಲಿ 7 ಸಾವು
ಚಿತ್ರದುರ್ಗ ಬಸ್ ದುರಂತದಲ್ಲಿ 7 ಮಂದಿ ಮೃತಪಟ್ಟ ಘಟನೆ ಡಿಸೆಂಬರ್ 25ರಂದು ನಡೆದಿತ್ತು. ಬಸ್ ಹೊತ್ತಿ ಉರಿದು ಪ್ರಯಾಣಿಕರು ಸಜೀವ ದಹನವಾಗಿದ್ದರು. ಹಲವು ಕನಸುಗಳನ್ನು ಹೊತ್ತು ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಬಲಿಯಾಗಿದ್ದರು. ಘಟನೆಯಲ್ಲಿ ಬಸ್ ಸಂಪೂರ್ಣ ಸುಟ್ಟು ಕರಕಲಾಗಿತ್ತು.

