MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Duleep Trophy Final
Today's Horoscope in Kannada
Mantralaya Online Scam
Hubballi Ganeshotsava
Kalaburagi Drought List
Pitru Paksha 2026 Date
PM Modi Meeting
Karnataka Farmers
Gulbarga Bus Accident
Western Ghats ESA
Karnataka Taxi Fare Meter
Bigg Boss Kannada 13
  • Home
  • Karnataka Districts
  • Bengaluru Urban
  • ಬೆಂಗಳೂರಿನಿಂದ 31 ಅಕ್ರಮ ಬಾಂಗ್ಲಾ ಪ್ರಜೆಗಳ ಗಡಿಪಾರು: ಎಸ್‌ಎಂವಿಟಿ ರೈಲು ಮೂಲಕ ಪ.ಬಂಗಾಳ ಗಡಿಗೆ ಸ್ಥಳಾಂತರ!

ಬೆಂಗಳೂರಿನಿಂದ 31 ಅಕ್ರಮ ಬಾಂಗ್ಲಾ ಪ್ರಜೆಗಳ ಗಡಿಪಾರು: ಎಸ್‌ಎಂವಿಟಿ ರೈಲು ಮೂಲಕ ಪ.ಬಂಗಾಳ ಗಡಿಗೆ ಸ್ಥಳಾಂತರ!

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 31 ಬಾಂಗ್ಲಾದೇಶಿ ಪ್ರಜೆಗಳನ್ನು 'ಆಪರೇಷನ್ ಮುಕ್ತ' ಕಾರ್ಯಾಚರಣೆಯಡಿ ಪೊಲೀಸರು ಗಡಿಪಾರು ಮಾಡಿದ್ದಾರೆ. ಅವರನ್ನು ರೈಲಿನ ಮೂಲಕ ಪಶ್ಚಿಮ ಬಂಗಾಳದ ಬಾಂಗ್ಲಾ ಗಡಿಗೆ ಕಳುಹಿಸಲಾಗಿದೆ.

2 Min read
Author : Sathish Kumar KH
Published : Aug 31 2026, 09:18 AM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ಬೆಂಗಳೂರು (ಆ.31): ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸ್ ಇಲಾಖೆ ಕಾರ್ಯಾಚರಣೆ ತೀವ್ರಗೊಳಿಸಿದೆ. ಇದರ ಭಾಗವಾಗಿ ಬೆಂಗಳೂರಿನ ವಿವಿಧ 10 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬಂಧಿಸಲ್ಪಟ್ಟಿದ್ದ ಒಟ್ಟು 31 ಅಕ್ರಮ ಬಾಂಗ್ಲಾದೇಶಿ ಪ್ರಜೆಗಳನ್ನು ಇಂದು ಬೆಳಗಿನ ಜಾವ ಕಟ್ಟುನಿಟ್ಟಿನ ಪೊಲೀಸ್ ಭದ್ರತೆಯಲ್ಲಿ ಗಡಿಪಾರು ಮಾಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
Image Credit : Asianet News

ರೈಲು ಮೂಲಕ ಬಾಂಗ್ಲಾ ಗಡಿಗೆ ಸ್ಥಳಾಂತರ:

ಬೆಂಗಳೂರಿನ ಎಸ್‌ಎಂವಿಟಿ (SMVT) ರೈಲ್ವೆ ಟರ್ಮಿನಲ್ ಮೂಲಕ ಸುಮಾರು 20ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳ ಬಿಗಿ ಭದ್ರತೆಯಲ್ಲಿ ಈ 31 ಅಕ್ರಮ ವಲಸಿಗರನ್ನು ಕರೆದೊಯ್ಯಲಾಗುತ್ತಿದೆ. ನಾಳೆ ಸಂಜೆ 5 ಗಂಟೆಗೆ ಈ ಪೊಲೀಸರ ತಂಡ ಬಾಂಗ್ಲಾದೇಶದ ಗಡಿಗೆ ಹೊಂದಿಕೊಂಡಿರುವ ಪಶ್ಚಿಮ ಬಂಗಾಳದ ಮಾಲ್ಡಾ ತಲುಪಲಿದೆ.

Related Articles

Related image1
ಬೆಂಗಳೂರಿನಲ್ಲಿದ್ದಾರೆ 2 ಲಕ್ಷಕ್ಕೂ ಅಧಿಕ ಅಕ್ರಮ ಬಾಂಗ್ಲಾ ವಲಸಿಗರು; ಟಾಸ್ಕ್‌ ಫೋರ್ಸ್ ರಚನೆಗೆ ಆರ್.ಅಶೋಕ್ ಆಗ್ರಹ!
Related image2
ಮಂಡ್ಯ ಶಾಕಿಂಗ್: ನಾಗಮಂಗಲ ಒಂದರಲ್ಲೇ 2000 ಅಕ್ರಮ ಬಾಂಗ್ಲಾ ವಲಸಿಗರು? ಚುನಾವಣಾ ಆಯೋಗಕ್ಕೆ ದೂರು
35
Image Credit : Asianet News

ಕೇವಲ ರಾಜ್ಯದ ಗಡಿಯಿಂದ ಹೊರಹಾಕಿದರೆ ಇವರು ಪುನಃ ಬೆಂಗಳೂರಿಗೆ ಬಂದು ಸೇರಿಕೊಳ್ಳಬಹುದು ಎಂಬ ಕಾರಣಕ್ಕೆ, ಪೊಲೀಸರು ನೇರವಾಗಿ ಬಾಂಗ್ಲಾದೇಶದ ಗಡಿ ಭಾಗದವರೆಗೆ ಬಿಟ್ಟುಬರಲು ಮುಂದಾಗಿದ್ದಾರೆ. ಕಳೆದ ತಿಂಗಳು 'ಆಪರೇಷನ್ ಮುಕ್ತ' ಕಾರ್ಯಾಚರಣೆ ಆರಂಭಿಸಿದ್ದ ರಾಜ್ಯ ಪೊಲೀಸ್ ಇಲಾಖೆ, 105 ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆ ಹಚ್ಚಿತ್ತು. ಸದ್ಯ ಮೊದಲ ಹಂತದಲ್ಲಿ 31 ಜನರನ್ನು ಗಡಿಪಾರು ಮಾಡಲಾಗುತ್ತಿದೆ.

45
Image Credit : Asianet News

ವಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ:

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಹಾವಳಿ ಹೆಚ್ಚುತ್ತಿರುವ ಕುರಿತು ವಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಬೆಂಗಳೂರು ನಗರ ಒಂದರಲ್ಲೇ ಸುಮಾರು 2 ಲಕ್ಷಕ್ಕೂ ಅಧಿಕ ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿರುವ ಶಂಕೆ ವ್ಯಕ್ತಪಡಿಸಿದ್ದರು. ಓಲೈಕೆ ರಾಜಕಾರಣಕ್ಕಾಗಿ ರಾಜ್ಯದ ಹಿತವನ್ನು ಬಲಿಕೊಡದೆ, ಅಕ್ರಮ ವಲಸಿಗರ ಪತ್ತೆ ಮತ್ತು ಗಡೀಪಾರಿಗೆ ತಕ್ಷಣವೇ 'ವಿಶೇಷ ಟಾಸ್ಕ್ ಫೋರ್ಸ್' ರಚನೆ ಮಾಡಬೇಕು ಎಂದು ಆರ್. ಅಶೋಕ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದರು.

55
Image Credit : Asianet News

ಕಳೆದೊಂದು ಕೆಲವು ತಿಂಗಳಿಂದ ಬೆಂಗಳೂರು ಪೊಲೀಸರು ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ನೂರಾರು ಶಂಕಿತ ಬಾಂಗ್ಲಾ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ. ನಕಲಿ ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಬಳಸಿಕೊಂಡು ಮಾನವ ಕಳ್ಳಸಾಗಣೆಯಂತಹ ಗಂಭೀರ ಅಪರಾಧಗಳಲ್ಲಿ ಭಾಗಿಯಾಗಿರುವ ಇವರು, ಧೈರ್ಯವಾಗಿ ನ್ಯಾಯಾಲಯದಲ್ಲಿ ಜಾಮೀನು ಕೋರುತ್ತಿರುವುದು ಅತ್ಯಂತ ಆಘಾತಕಾರಿ ಬೆಳವಣಿಗೆಯಾಗಿದೆ ಎಂದು ಆಶೋಕ್ ಆತಂಕ ವ್ಯಕ್ತಪಡಿಸಿದ್ದರು.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಬೆಂಗಳೂರು
ಬೆಂಗಳೂರು ನಗರ
ಬಾಂಗ್ಲಾದೇಶ
ಅಕ್ರಮ ಬಾಂಗ್ಲಾದೇಶಿ ವಲಸಿಗರು

Latest Videos
Recommended Stories
Recommended image1
ಬೆಂಗಳೂರು ನೈಸ್ ರೋಡ್ ಟೋಲ್ ಕಟ್ಟದೆ, ಪ್ರಶ್ನೆ ಮಾಡಿ ಯುವತಿ; ತರಾಟೆ ತೆಗೆದುಕೊಂಡ ನಂತರ ಏನಾಯ್ತು ನೋಡಿ!
Recommended image2
Monsoon Final Push: ದಕ್ಷಿಣ ಭಾರತ ರೈತರಿಗೆ ಗುಡ್‌ನ್ಯೂಸ್ ಕೊಟ್ಟ ಉಪಗ್ರಹ ಚಿತ್ರ, ಈ ಪ್ರದೇಶಗಳಲ್ಲಿ ಭಾರೀ ಮಳೆ ಮುನ್ಸೂಚನೆ
Recommended image3
18ನೇ ವಯಸ್ಸಿಗೆ ವಿಧವೆಯಾದರೂ ಭಾರತದ 'ಫಿಲ್ಟರ್ ಕಾಫಿ' ಸಾಮ್ರಾಜ್ಯ ಕಟ್ಟಿದ ಮಹಿಳೆ! ಯಾರು ಈ ‘ಕಾಫಿ ಪುಡಿ ಸಾಕಮ್ಮ’?
Related Stories
Recommended image1
ಬೆಂಗಳೂರಿನಲ್ಲಿದ್ದಾರೆ 2 ಲಕ್ಷಕ್ಕೂ ಅಧಿಕ ಅಕ್ರಮ ಬಾಂಗ್ಲಾ ವಲಸಿಗರು; ಟಾಸ್ಕ್‌ ಫೋರ್ಸ್ ರಚನೆಗೆ ಆರ್.ಅಶೋಕ್ ಆಗ್ರಹ!
Recommended image2
ಮಂಡ್ಯ ಶಾಕಿಂಗ್: ನಾಗಮಂಗಲ ಒಂದರಲ್ಲೇ 2000 ಅಕ್ರಮ ಬಾಂಗ್ಲಾ ವಲಸಿಗರು? ಚುನಾವಣಾ ಆಯೋಗಕ್ಕೆ ದೂರು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved