MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ind vs SL 2nd Test
Today's Horoscope in Kannada
Mandya Jaggery Price
Bengaluru Garden City
Bengaluru Fake Medicine Racket
Karnataka-Tamil Nadu Border
Karnataka IAS Officer Missing
Pakistan-based Gang Doddaballapur
NICE Road Toll
Bhadra Irrigation Project
Minister B Nagendra
Valmiki Corporation Scam
BJP vs Minister B Nagendra
Bengaluru Airport Metro
Mysuru Chamundeshwari Temple Priest
Kabini Dam Water Level
  • Home
  • Karnataka Districts
  • Bengaluru Urban
  • Bengaluru: ಪೊಲೀಸ್ ತನಿಖೆಯಲ್ಲಿ ಉದ್ಯಮಿ ಕೃಪಲಾನಿ ಕರಾಳ ಮುಖ ಬಯಲು! ಈತನ ಟಾರ್ಗೆಟ್ ಇವರೇ

Bengaluru: ಪೊಲೀಸ್ ತನಿಖೆಯಲ್ಲಿ ಉದ್ಯಮಿ ಕೃಪಲಾನಿ ಕರಾಳ ಮುಖ ಬಯಲು! ಈತನ ಟಾರ್ಗೆಟ್ ಇವರೇ

ಕೃಪಲಾನಿ, ಪ್ರೀತಿ ಮತ್ತು ಮದುವೆಯ ನೆಪದಲ್ಲಿ ಮಹಿಳೆಯರಿಗೆ ವಂಚಿಸಿ, ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಬಂಧಿತನಾಗಿದ್ದಾನೆ. ಸರ್ಕಾರಿ ಮಹಿಳಾ ಅಧಿಕಾರಿಗಳನ್ನೇ ಗುರಿಯಾಗಿಸಿಕೊಂಡು, ಖಾಸಗಿ ಕ್ಷಣಗಳನ್ನು ಸೆರೆಹಿಡಿದು ಬೆದರಿಸುತ್ತಿದ್ದ ಈತನ ಕೃತ್ಯ ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ.

2 Min read
Author : Mahmad Rafik
Published : Apr 19 2026, 10:28 AM IST
Share this Photo Gallery
  • FB
  • TW
  • Linkdin
  • Whatsapp
15
 36 ವರ್ಷದ ಕೃಪಲಾನಿಯ ಅಸಲಿ ಮುಖ
Image Credit : Asianet News

36 ವರ್ಷದ ಕೃಪಲಾನಿಯ ಅಸಲಿ ಮುಖ

ಬೆಂಗಳೂರಿನ ಇಂದಿರಾ ನಗರ ನಿವಾಸಿಯಾಗಿರುವ 36 ವರ್ಷದ ಕೃಪಲಾನಿಯ ಅಸಲಿ ಮುಖ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. 45 ವರ್ಷದ ಮಹಿಳಾ ಅಧಿಕಾರಿಗೆ ವಂಚನೆ, ಅತ್ಯಾ*ಚಾರ ಪ್ರಕರಣದಲ್ಲಿ ಕೃಪಲಾನಿಯನ್ನು ಪೊಲೀಸರು ಬಂಧಿಸಿದ್ದರು. ಇದೀಗ ಪೊಲೀಸರ ತನಿಖೆಯಲ್ಲಿ ಇದೇ ರೀತಿ ವಂಚನೆ ಮಾಡಿರೋದು ಬೆಳಕಿಗೆ ಬಂದಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ಪ್ರೀತಿ ಮತ್ತು ಮದವೆ ಹೆಸರಿನಲ್ಲಿ ಮೋಸ
Image Credit : Asianet News

ಪ್ರೀತಿ ಮತ್ತು ಮದವೆ ಹೆಸರಿನಲ್ಲಿ ಮೋಸ

ಉದ್ಯಮಿ ಕೃಪಲಾನಿ ಪ್ರೀತಿ ಮತ್ತು ಮದವೆ ಹೆಸರಿನಲ್ಲಿ ಮಹಿಳೆಯರನ್ನು ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸುತ್ತಿದ್ದನು ಎಂಬುವುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಉದ್ಯಮಿ ಎಂದು ಪರಿಚಯಿಸಿಕೊಳ್ಳುತ್ತಿದ್ದ ಕೃಪಲಾನಿ ಸರ್ಕಾರಿ ಮಹಿಳಾ ಅಧಿಕಾರಿಗಳನ್ನೇ ಟಾರ್ಗೆಟ್ ಮಾಡಿಕೊಳ್ಳುತ್ತಿದ್ದನು. ಪರಿಚಯ ಮಾಡಿಕೊಂಡ ಅಧಿಕಾರಿಗಳಿಗೆ ಲಂಚ್, ಡಿನ್ನರ್ ಪಾರ್ಟಿಗೆ ಆಹ್ವಾನಿಸಿ ಸಲುಗೆ ಬೆಳೆಸಿಕೊಳ್ಳುತ್ತಿದ್ದನು.

Related Articles

Related image1
Dharwad: ಶೀಘ್ರದಲ್ಲಿಯೇ ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಬೆಂಗಳೂರಿಗೆ ಸ್ಥಳಾಂತರ?
Related image2
ರಸ್ತೆ ದುರಂತದಲ್ಲಿ ಮೃತ ಏಕೈಕ ಪುತ್ರನ ಕಣ್ಣು, ಕಿಡ್ನಿ ದಾನ ಮಾಡಿದ ಕೊಡಗಿನ ಪೋಷಕರು
35
ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‌ಮೇಲ್
Image Credit : Asianet News

ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‌ಮೇಲ್

ಸಲುಗೆ ಬೆಳೆಯುತ್ತಿದ್ದಂತೆ ಪ್ರೀತಿ ಹೆಸರಿನ ಸುಳ್ಳು ಬಲೆಯನ್ನು ಬೀಸುತ್ತಿದ್ದನು. ನಂತರ ಮಹಿಳೆಯರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಖಾಸಗಿ ಕ್ಷಣಗಳನ್ನು ರಹಸ್ಯವಾಗಿ ಮೊಬೈಲ್‌ನಲ್ಲಿ ಸೆರೆ ಹಿಡಿದುಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದನು ಎಂದು ವರದಿಯಾಗಿದೆ. ಪುಲಕೇಶಿ ನಗರ ಪೊಲೀಸರು ತಮ್ಮ ತನಿಖೆಯನ್ನು ಮುಂದುವರಿಸಿದ್ದು, ಮತ್ತಷ್ಟು ಸ್ಪೋಟಕ ವಿಷಯಗಳು ಬಯಲಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

45
ಪುಲಕೇಶಿ ನಗರ ಠಾಣೆಗೆ ಪ್ರಕರಣ ವರ್ಗಾವಣೆ
Image Credit : Asianet News

ಪುಲಕೇಶಿ ನಗರ ಠಾಣೆಗೆ ಪ್ರಕರಣ ವರ್ಗಾವಣೆ

ಉದ್ಯಮಿ ಎಂ.ಕೃಪಲಾನಿ ನನ್ನ ಮೇಲೆ ಅತ್ಯಾ*ಚಾರ ಎಸಗಿ ಜೀವ ಬೆದರಿಕೆ ಹಾಕುತ್ತಿದ್ದಾನೆ ಎಂದು 45 ವರ್ಷದ ಮಹಿಳಾ ಅಧಿಕಾರಿ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇಂದಿರಾನಗರ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದರಿಂದ ಪ್ರಕರಣ ಇಂದಿರಾನಗರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿತ್ತು. ಈ ನಡುವೆ ಪ್ರಕರಣದ ತನಿಖೆಯನ್ನು ಪುಲಕೇಶಿ ನಗರ ಠಾಣೆಗೆ ಹಿರಿಯ ಅಧಿಕಾರಿಗಳು ತನಿಖೆಗೆ ವರ್ಗಾಯಿಸಿದ್ದರು. ಆರೋಪಿ ಕೃಪಲಾನಿಯು ವಿದೇಶಗಳಿಂದ ಎಲೆಕ್ಟ್ರಾನಿಕ್‌ ವಸ್ತುಗಳನ್ನು ಆಮದು ಹಾಗೂ ರಫ್ತು ಮಾಡುವ ವ್ಯವಹಾರ ನಡೆಸುತ್ತಿದ್ದನು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಮಹಿಳಾ ಕಸ್ಟಮ್ಸ್ ಅಧಿಕಾರಿ ಮೇಲೆ ಅತ್ಯಾ*ಚಾರ: ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ : ಉದ್ಯಮಿ ಅಂದರ್

55
ಹಿಂದಿನ ಪ್ರಕರಣ
Image Credit : Asianet News

ಹಿಂದಿನ ಪ್ರಕರಣ

ಈ ಹಿಂದೆ ಮಗ ಕಾಣೆಯಾಗಿದ್ದಾನೆ ಎಂದು ಕೃಪಲಾನಿ ತಾಯಿ ಹೇಬಿಯಸ್ ಕಾರ್ಪಸ್ ಹಾಕಿದ್ದರು. ಕೃಪಲಾನಿ ಉದ್ದೇಶ ಪೂರ್ವಕವಾಗಿ ಹೊಟೇಲ್ ನಲ್ಲಿ ಅಡಗಿರೋದು ಪತ್ತೆ ಆಗಿತ್ತು. ಈ ವೇಳೆ ಕೋರ್ಟ್ ಕೃಪಲಾನಿಗೆ ಎರಡು ಲಕ್ಷ ದಂಡ ವಿಧಿಸಿತ್ತು. ದಶಕದ ಹಿಂದೆ ಕುಡಿದು ಮಹಿಳಾ ಅಧಿಕಾರಿಗಳ ಜೊತೆ ಅಸಭ್ಯ ವರ್ತನೆ ಮಾಡಿರುವ ಆರೋಪವೂ ಈತನ ವಿರುದ್ಧ ಕೇಳಿ ಬಂದಿದೆ. ಕೃಪಲಾನಿಯಿಂದ ದೌರ್ಜನ್ಯಕ್ಕೊಳಗಾದವರು ದೂರು ನೀಡುವಂತೆ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಉದ್ಯಮಿ ಲೇಪಾಕ್ಷಿಯಲ್ಲಿ ಕೊಲೆ: ಹೊಸ ಕಾರು ಕೊಡಿಸುವುದಾಗಿ 'ಅಕ್ಕನ ಗಂಡನನ್ನ ಪರಲೋಕ ಸೇರಿಸಿದ ಭಾಮೈದ'!

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಬೆಂಗಳೂರು
ಕ್ರೈಮ್ ನ್ಯೂಸ್
ಅತ್ಯಾಚಾರ ಪ್ರಕರಣ

Latest Videos
Recommended Stories
Recommended image1
ಖ್ಯಾತಿ, ಚಪ್ಪಾಳೆಗೆ ಕಲಾವಿದ ಬದುಕಬಾರದು ಟಿ.ಎನ್.ಸೀತಾರಾಮ ಮಾತು
Recommended image2
Bengaluru fake medicine racket: ನಕಲಿ ಔಷಧ ದಂಧೆ ಕಿಂಗ್‌ಪಿನ್‌ ಪ್ರಶಾಂತ್‌ ಅಜರ್‌ಬೈಜಾನಲ್ಲಿ ವಶಕ್ಕೆ
Recommended image3
KPSC ಮೇಲೆ ಇಡಿ ದಾಳಿ ಬೆನ್ನಲ್ಲೇ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ‘ನಾ’ ಪತ್ತೆ ಹೈಡ್ರಾಮ! ಗೃಹ ಸಚಿವ ಖರ್ಗೆ ಹೇಳಿದ್ದೇನು?
Related Stories
Recommended image1
Dharwad: ಶೀಘ್ರದಲ್ಲಿಯೇ ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಬೆಂಗಳೂರಿಗೆ ಸ್ಥಳಾಂತರ?
Recommended image2
ರಸ್ತೆ ದುರಂತದಲ್ಲಿ ಮೃತ ಏಕೈಕ ಪುತ್ರನ ಕಣ್ಣು, ಕಿಡ್ನಿ ದಾನ ಮಾಡಿದ ಕೊಡಗಿನ ಪೋಷಕರು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved