- Home
- Karnataka Districts
- Bengaluru Urban
- ಉಸಿರಾಟದ ಸಮಸ್ಯೆ: ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾದ ಮಲ್ಲಿಕಾರ್ಜುನ ಖರ್ಗೆ
ಉಸಿರಾಟದ ಸಮಸ್ಯೆ: ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾದ ಮಲ್ಲಿಕಾರ್ಜುನ ಖರ್ಗೆ
Congress President hospitalized: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಸ್ಪತ್ರೆಗೆ ದಾಖಲು
ಅನಾರೋಗ್ಯ ಹಿನ್ನೆಲೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಬಿಹಾರ ಚುನಾವಣೆ
ಬಿಹಾರ ಚುನಾವಣೆ ಹಿನ್ನೆಲೆ ಮಲ್ಲಿಕಾರ್ಜುನ ಖರ್ಗೆ ಅವರು ನಿರಂತರವಾಗಿ ಪ್ರವಾಸ ಮಾಡುತ್ತಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸಭೆಯನ್ನು ಸಹ ಬಿಹಾರದಲ್ಲಿಯೇ ಆಯೋಜನೆ ಮಾಡಲಾಗಿತ್ತು.
ಸರಣಿ ಪ್ರವಾಸದಿಂದ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಜನರಲ್ ಚೆಕಪ್‌ಗಾಗಿ ಎಂ ಎಸ್ ರಾಮಯ್ಯಗೆ ಆಸ್ಪತ್ರೆಗೆ ಖರ್ಗೆ ದಾಖಲಾಗಿದ್ದಾರೆ. ನಿನ್ನೆಯಿಂದ ಆಸ್ಪತ್ರೆಯಲ್ಲಿಯೇ ಮಲ್ಲಿಕಾರ್ಜುನ ಖರ್ಗೆ ಅವರು ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಇಸಿಜಿ ಸೇರಿದಂತೆ ಹಲವು ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸಲಾಗಿದೆ.
ಸರಣಿ ಪ್ರವಾಸದಿಂದ ಆಯಾಸ

ಆತಂಕ ಬೇಡ
ಇದು ಜನರಲ್ ಚೆಕಪ್ ಆಗಿದ್ದು, ಯಾರು ಆತಂಕಕ್ಕೆ ಒಳಗಾಬಹುದು ಎಂದು ಮಲ್ಲಿಕಾರ್ಜುನ ಖರ್ಗೆ ಆಪ್ತರು ಮಾಹಿತಿ ನೀಡಿದ್ದಾರೆ. ಇಂದು ಸಂಜೆಯೊಳಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಗಳಿವೆ.