ಬೆಂಗಳೂರಿನಲ್ಲಿ ಇಂದು ವಿದ್ಯುತ್ ಕಡಿತ: ಎಲ್ಲೆಲ್ಲಿ ಪವರ್ ಕಟ್?
ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ಕಡಿತವಾಗಲಿದೆ. ನಿರ್ವಹಣಾ ಕಾರ್ಯಗಳಿಂದಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ಇರುವುದಿಲ್ಲ.

ನಿರ್ವಹಣಾ ಕಾಮಗಾರಿಗಳ ಪ್ರಯುಕ್ತ ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ವಿದ್ಯುತ್ ಕಡಿತವಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಯಾವೆಲ್ಲ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯ ಇರಲಿದೆ ಎಂದು ಬೆಸ್ಕಾಂ ತಿಳಿಸಿದ್ದು, ಆ ಕುರಿತ ಮಾಹಿತಿ ಇಲ್ಲಿದೆ.
ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಕಡಿತ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಸಮಯದಲ್ಲಿ ತುಸು ಬದಲಾವಣೆ ಇರಬಹುದು. ನಿಗದಿತ ತ್ರೈಮಾಸಿಕ ನಿರ್ವಹಣಾ ಕಾರ್ಯಗಳು ಮತ್ತು ನಿರ್ವಹಣಾ ಕಾಮಗಾರಿಯ ಕಾರಣ ವಿದ್ಯುತ್ ಕಡಿತ ಮಾಡಲಾಗುತ್ತದೆ.
ಇದು 66/11 ಕಿಲೋವೋಲ್ಟ್ (ಕೆವಿ) ಎ ಸ್ಟೇಷನ್ ಅಡಿಯಲ್ಲಿ ಬರುವ ಪ್ರದೇಶಗಳ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ. ಹಾಗಾಗಿ ಬೆಳಗ್ಗೆ 10 ಗಂಟೆ ಮುಂಚೆಯೇ ಐರನ್, ಬಿಸಿನೀರು, ಮಿಕ್ಸಿಗೆ ಸಂಬಂಧಿಸಿದ ಕೆಲಸಗಳನ್ನು ಮಾಡಿಕೊಳ್ಳಿ.
ಎಲ್ಲೆಲ್ಲಿ ಪವರ್ ಕಟ್?
ಶೇಷಾದ್ರಿ ರಸ್ತೆ, ಕುರುಬರ ಸಂಘದ ವೃತ್ತ 1ನೇ ಮುಖ್ಯರಸ್ತೆ, ಗಾಂಧಿ ನಗರ 1ನೇ ಕ್ರಾಸ್ ಮತ್ತು 2ನೇ ಕ್ರಾಸ್ ಭಾಗಗಳು, ಕ್ರೆಸೆಂಟ್ ರಸ್ತೆ, ಶೇಷಾದ್ರಿಪುರಂ, ವಿನಾಯಕ ವೃತ್ತ, ಕೆಂಪೇಗೌಡ ರಸ್ತೆ, ಟ್ಯಾಂಕ್ ಬಂಡ್ ರಸ್ತೆ
ಎಲ್ಲೆಲ್ಲಿ ಪವರ್ ಕಟ್?
ಸುಬೇದಾರ್ ಛತ್ರಂ ರಸ್ತೆ, ಲಕ್ಷ್ಮಣಪುರಿ ಸ್ಲಂ ಏರಿಯಾ, ಕಬ್ಬನ್‌ಪೇಟೆ, ಚಲುಕೂರ್‌ಪೇಟೆ, ಚಲುಕೂರ್‌ಪೇಟೆ, ಸಿ.ಸಿ. ಹೈಗ್ರೌಂಡ್ಸ್, ಮಲ್ಲೇಶ್ವರಂ ಮತ್ತು ಶೇಷಾದ್ರಿಪುರಂನ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ.