ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವವರಿಗೆ ಬಜೆಟ್‌ನಲ್ಲಿ ಮೋದಿ ಸರ್ಕಾರದ ಗಿಫ್ಟ್?
ಕೃಷಿಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಮಿತಿಯನ್ನು ₹5 ಲಕ್ಷಕ್ಕೆ ಹೆಚ್ಚಿಸಲು ಮೋದಿ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಸಾಲ ಪಡೆಯಲು ಏನೆಲ್ಲ ಅರ್ಹತೆಗಳಿರಬೇಕು? ಕೃಷಿಯನ್ನು ಲಾಭದಾಯಕವಾಗಿಸಲು ಯಾವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂಬುದರ ವಿವರ ಇಲ್ಲಿದೆ.

2025-26ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1 ರಂದು ಬೆಳಿಗ್ಗೆ 11 ಗಂಟೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಮಂಡಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ನಂತರ ಇದು ಎರಡನೇ ಬಜೆಟ್. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಎಂಟನೇ ಕೇಂದ್ರ ಬಜೆಟ್ ಇದಾಗಿದೆ.
ರೈತರ ಆದಾಯ ಹೆಚ್ಚಿಸಲು ಕೇಂದ್ರ ಸರ್ಕಾರ ನಿರಂತರವಾಗಿ ಆದ್ಯತೆ ನೀಡುತ್ತಿದೆ. ಹಿಂದಿನ ಬಜೆಟ್‌ಗಳಂತೆ ಈ ಬಜೆಟ್‌ನಲ್ಲೂ ಕೃಷಿ ಕ್ಷೇತ್ರಕ್ಕೆ ಅನುಕೂಲವಾಗುವಂತಹ ಹಲವು ಮಹತ್ವದ ಘೋಷಣೆಗಳಿರುತ್ತವೆ ಎಂದು ನಿರೀಕ್ಷಿಸಲಾಗಿದೆ. ಅಂದರೆ, ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿ ಹೆಚ್ಚಳ, ಕೃಷಿ ಉತ್ಪನ್ನಗಳ ಮೇಲಿನ ಜಿಎಸ್‌ಟಿ ಕಡಿತ, ಕೃಷಿಗೆ ಅನುದಾನ ಹೆಚ್ಚಳ ಮುಂತಾದ ಘೋಷಣೆಗಳು ಬಜೆಟ್‌ನಲ್ಲಿರುತ್ತವೆ ಎನ್ನಲಾಗಿದೆ.
ಕಿಸಾನ್ ಕ್ರೆಡಿಟ್ ಕಾರ್ಡ್‌ಗಳ (KCC) ಮಿತಿಯನ್ನು ಕೇಂದ್ರ ಸರ್ಕಾರ ₹3 ಲಕ್ಷದಿಂದ ₹5 ಲಕ್ಷಕ್ಕೆ ಹೆಚ್ಚಿಸುವ ಸಾಧ್ಯತೆಗಳಿವೆ. ಈ ಕ್ರಮವು ರೈತರ ಆದಾಯ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸುತ್ತದೆ. ಇದರಿಂದ ಅವರು ತಮ್ಮ ಕೃಷಿ ಚಟುವಟಿಕೆಗಳಲ್ಲಿ ಹೆಚ್ಚಿನ ಹೂಡಿಕೆ ಮಾಡಲು ಸಾಧ್ಯವಾಗುತ್ತದೆ. ರೈತರು, ಪಶುಪಾಲಕರು ಮತ್ತು ಮೀನುಗಾರರು ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಬ್ಯಾಂಕ್‌ಗಳಲ್ಲಿ ಕಡಿಮೆ ಬಡ್ಡಿಗೆ ಸುಲಭವಾಗಿ ಸಾಲ ಪಡೆಯಬಹುದು. ಪ್ರಸ್ತುತ ಈ ಸಾಲದ ಮಿತಿ ₹3 ಲಕ್ಷ ಇದ್ದು, ಇದನ್ನು ₹5 ಲಕ್ಷಕ್ಕೆ ಹೆಚ್ಚಿಸುವುದಾಗಿ ಬಜೆಟ್ ಸಮಯದಲ್ಲಿ ಘೋಷಣೆ ಹೊರಬೀಳಲಿದೆ ಎನ್ನಲಾಗಿದೆ.
ಕೃಷಿ ಉತ್ಪನ್ನಗಳ ಮೇಲಿನ ಜಿಎಸ್‌ಟಿ ಕಡಿತ
ಬೀಜಗಳು, ಗೊಬ್ಬರಗಳಂತಹ ಕೃಷಿ ಪರಿಕರಗಳ ಮೇಲಿನ ಜಿಎಸ್‌ಟಿಯನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಸ್ತುತ ಬೀಜಗಳು ಮತ್ತು ಗೊಬ್ಬರಗಳ ಮೇಲೆ ಪ್ರತ್ಯೇಕವಾಗಿ ಹೆಚ್ಚಿನ ಜಿಎಸ್‌ಟಿ ಇರುವುದರಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಇವುಗಳನ್ನು ಕಡಿಮೆ ಮಾಡುವ ಮೂಲಕ ರೈತರ ಲಾಭವನ್ನು ಹೆಚ್ಚಿಸಬಹುದು. ಈ ಬಗ್ಗೆ ಬಜೆಟ್‌ನಲ್ಲಿ ಘೋಷಣೆ ಹೊರಬೀಳಲಿದೆ.
ಕೇಂದ್ರ ಬಜೆಟ್‌ನಲ್ಲಿ ಇಪಿಎಫ್‌ಒ ಕನಿಷ್ಠ ಪಿಂಚಣಿ ₹7500ಕ್ಕೆ ಏರಿಕೆ ಸಾಧ್ಯತೆ!
ಕೃಷಿ ಯೋಜನೆಗಳಿಗೆ ಅನುದಾನ ಹೆಚ್ಚಳ
ಹಿಂದಿನ ಬಜೆಟ್‌ನಲ್ಲಿ ಕೃಷಿ ಸಂಬಂಧಿತ ಯೋಜನೆಗಳಿಗೆ ₹65,529 ಕೋಟಿಗಳನ್ನು ಮೀಸಲಿಡಲಾಗಿತ್ತು. ಕೃಷಿ ಕ್ಷೇತ್ರವನ್ನು ಅಭಿವೃದ್ಧಿಪಡಿಸುವಲ್ಲಿ ಮತ್ತು ರೈತರಿಗೆ ಬೆಂಬಲ ನೀಡುವಲ್ಲಿ ತನ್ನ ನಿರಂತರ ಗಮನವನ್ನು ಪ್ರತಿಬಿಂಬಿಸುವಂತೆ ಮುಂಬರುವ ಕೇಂದ್ರ ಬಜೆಟ್‌ನಲ್ಲಿ ಕೃಷಿ ಸಂಬಂಧಿತ ಯೋಜನೆಗಳಿಗೆ ಅನುದಾನವನ್ನು 5% ರಿಂದ 7% ರಷ್ಟು ಹೆಚ್ಚಿಸಲಾಗುವುದು ಎಂದು ನಿರೀಕ್ಷಿಸಲಾಗಿದೆ.
Union Budget 2025: ವಾರ್ಷಿಕ 15 ಲಕ್ಷ ವೇತನದ ಉದ್ಯೋಗಿಗಳಿಗೆ ಇರೋದಿಲ್ಲ ಆದಾಯ ತೆರಿಗೆ?