MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Business
  • ಸಾಲ ಕೊಡಿಸುವ ನೆಪದಲ್ಲಿ ಉದ್ಯಮಿಗಳೇ ಟಾರ್ಗೆಟ್‌, ಕೋಟ್ಯಂತರ ರೂ ವಂಚನೆ, ಬೆಂಗಳೂರಿನ ಡ್ಯಾಡಿ ನಿವಾಸಕ್ಕೆ ಸಿಐಡಿ ದಾಳಿ!

ಸಾಲ ಕೊಡಿಸುವ ನೆಪದಲ್ಲಿ ಉದ್ಯಮಿಗಳೇ ಟಾರ್ಗೆಟ್‌, ಕೋಟ್ಯಂತರ ರೂ ವಂಚನೆ, ಬೆಂಗಳೂರಿನ ಡ್ಯಾಡಿ ನಿವಾಸಕ್ಕೆ ಸಿಐಡಿ ದಾಳಿ!

 ಸಾಲ ಕೊಡಿಸುವ ನೆಪದಲ್ಲಿ ಹಲವು ಉದ್ಯಮಿಗಳಿಗೆ ವಂಚಿಸಿದ ಆರೋಪದ ಮೇಲೆ ಪೀಟರ್ ಡ್ಯಾಡಿ ಎಂಬಾತನ ನಿವಾಸದ ಮೇಲೆ ಸಿಐಡಿ ಆರ್ಥಿಕ ಅಪರಾಧ ದಳ ದಾಳಿ ನಡೆಸಿದೆ. ಆರೋಪಿಯು ಪ್ರೊಸೆಸಿಂಗ್ ಫೀ ಮತ್ತು ಕಮಿಷನ್ ಹೆಸರಿನಲ್ಲಿ ಹಣ ಪಡೆದು, ಹಣ ಕೇಳಿದವರ ಮೇಲೆ ಸುಳ್ಳು ಚೆಕ್ ಬೌನ್ಸ್ ಪ್ರಕರಣ ದಾಖಲಿಸುತ್ತಿದ್ದನು.

2 Min read
Author : Gowthami K
Published : Feb 10 2026, 05:57 PM IST
Share this Photo Gallery
  • FB
  • TW
  • Linkdin
  • Whatsapp
16
ಸಾಲ ಕೊಡಿಸುವ ನೆಪದಲ್ಲಿ ಉದ್ಯಮಿಗಳಿಗೆ ವಂಚನೆ ಆರೋಪ
Image Credit : Asianet News

ಸಾಲ ಕೊಡಿಸುವ ನೆಪದಲ್ಲಿ ಉದ್ಯಮಿಗಳಿಗೆ ವಂಚನೆ ಆರೋಪ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಆರ್ಥಿಕ ಅಪರಾಧ ದಳದ ಅಧಿಕಾರಿಗಳು ಉದ್ಯಮಿ ಜೊತೆಗೆ ಲಿಂಕ್ ಹೊಂದಿದ್ದ ವ್ಯಕ್ತಿಯೋರ್ವನ ಮನೆ ಮೇಲೆ ದಾಳಿ ಮಾಡಿ ತನಿಖೆ ನಡೆಸಿದ್ದಾರೆ. ಸಾಲ ಕೊಡಿಸುವುದಾಗಿ ನಂಬಿಸಿ ಹಲವು ಉದ್ಯಮಿಗಳನ್ನು ವಂಚಿಸಿರುವ ಆರೋಪದ ಹಿನ್ನೆಲೆಯಲ್ಲಿ, ಸಿಐಡಿ ಆರ್ಥಿಕ ಅಪರಾಧ ದಳ (CID – Economic Offences Wing) ಬೆಂಗಳೂರು ನಗರದಲ್ಲಿ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ. ಕೋಲ್ಸ್ ಪಾರ್ಕ್ ಪ್ರದೇಶದಲ್ಲಿರುವ ಪೀಟರ್ ಡ್ಯಾಡಿ ಎಂಬಾತನ ನಿವಾಸದ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಮೂಲಗಳ ಪ್ರಕಾರ, ಪೀಟರ್ ಡ್ಯಾಡಿ ವಿರುದ್ಧ ಸಾಲ ವ್ಯವಸ್ಥೆ ಮಾಡಿಕೊಡುವ ನೆಪದಲ್ಲಿ ಉದ್ಯಮಿಗಳಿಂದ ಹಣ ಪಡೆದು ವಂಚಿಸಿರುವ ಕುರಿತು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಅನೇಕ ದೂರುಗಳು ದಾಖಲಾಗಿದ್ದವು. ಈ ಹಿನ್ನೆಲೆ ಪ್ರಕರಣವನ್ನು ಸಿಐಡಿ ಆರ್ಥಿಕ ಅಪರಾಧ ದಳ ಕೈಗೆತ್ತಿಕೊಂಡಿದ್ದು, ತನಿಖೆಯ ಭಾಗವಾಗಿ ಇಂದು ಬೆಳಗ್ಗೆ ದಾಳಿ ನಡೆಸಲಾಗಿದೆ.

26
ಸಾಲ ಕೊಡಿಸುವ ನೆಪದಲ್ಲಿ ಚೆಕ್ ಶ್ಯೂರಿಟಿ ಪಡೆದು ವಂಚನೆ
Image Credit : Asianet News

ಸಾಲ ಕೊಡಿಸುವ ನೆಪದಲ್ಲಿ ಚೆಕ್ ಶ್ಯೂರಿಟಿ ಪಡೆದು ವಂಚನೆ

ಪೀಟರ್ ಡ್ಯಾಡಿ ಉದ್ಯಮಿಗಳಿಗೆ ದೊಡ್ಡ ಮೊತ್ತದ ಲೋನ್ ಕೊಡಿಸುವುದಾಗಿ ನಂಬಿಸಿ, ಚೆಕ್ ಶ್ಯೂರಿಟಿ ಪಡೆದು, ಇದರ ಜೊತೆಗೆ ಪ್ರೊಸೆಸಿಂಗ್ ಫೀ, ಲ್ಯಾಂಡ್ ಡೀಲ್ ಹಾಗೂ ಕಮಿಷನ್ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಹಣವನ್ನು ಪಡೆದಿದ್ದಾನೆ. ಆದರೆ ಹಣ ಪಡೆದ ಬಳಿಕ ಲೋನ್ ವ್ಯವಸ್ಥೆ ಮಾಡಿಕೊಡದೇ ಉದ್ಯಮಿಗಳನ್ನು ವಂಚಿಸಿದ್ದಾನೆ ಎಂಬುದು ದೂರುದಾರರ ಆರೋಪವಾಗಿದೆ. ಇನ್ನೂ ಗಂಭೀರವಾಗಿ, ಉದ್ಯಮಿಗಳು ತಮ್ಮ ಹಣವನ್ನು ವಾಪಸ್ ಕೇಳಿದಾಗ, ಪೀಟರ್ ಡ್ಯಾಡಿ ಅವರುಗಳ ವಿರುದ್ಧವೇ ಸುಳ್ಳು ಚೆಕ್ ಬೌನ್ಸ್ ಪ್ರಕರಣಗಳನ್ನು ದಾಖಲಿಸಿ ಕಾನೂನು ಕಾಟ ನೀಡುತ್ತಿದ್ದಾನೆ ಎಂಬ ಆರೋಪವೂ ದೂರುಗಳಲ್ಲಿ ಉಲ್ಲೇಖವಾಗಿದೆ.

Related Articles

Related image1
ಸಾಲ ಕೊಡಿಸುವ ನೆಪದಲ್ಲಿ ಬೆಂಗಳೂರಿನ ಕೆಎಎಲ್ ಇಂಜಿನಿಯರಿಂಗ್ ಮಾಲೀಕರಿಗೆ ಕೋಟ್ಯಾಂತರ ರೂಪಾಯಿ ವಂಚನೆ
Related image2
ಶಾಸಕ ಶರಣು ಸಲಗರ್ ಮೇಲೆ FIR: ಚುನಾವಣೆ ವೇಳೆ ಉದ್ಯಮಿಯಿಂದ ₹99 ಲಕ್ಷ ಸಾಲ ಪಡೆದು ವಂಚನೆ ಆರೋಪ!
36
ಹಲವು ಠಾಣೆಗಳಲ್ಲಿ ವಂಚನೆ ಪ್ರಕರಣ ದಾಖಲು
Image Credit : Asianet News

ಹಲವು ಠಾಣೆಗಳಲ್ಲಿ ವಂಚನೆ ಪ್ರಕರಣ ದಾಖಲು

ಪೀಟರ್ ಡ್ಯಾಡಿ ವಿರುದ್ಧ ಬೆಂಗಳೂರು ನಗರದ ಅಶೋಕನಗರ, ಹಲಸೂರು, ಬೆಳ್ಳಂದೂರು, ಜೀವನ್ ಭೀಮಾನಗರ, ಪುಲಕೇಶಿನಗರ ಸೇರಿದಂತೆ ಹಲವು ಪೊಲೀಸ್ ಠಾಣೆಗಳಲ್ಲಿ ವಂಚನೆ ಪ್ರಕರಣಗಳು ದಾಖಲಾಗಿದ್ದವು. ಈ ಎಲ್ಲಾ ಪ್ರಕರಣಗಳನ್ನು ಪರಿಶೀಲಿಸಿದ ನಂತರ, ಹೆಚ್ಚಿನ ತನಿಖೆಗಾಗಿ ಸಿಐಡಿ ಆರ್ಥಿಕ ಅಪರಾಧ ದಳಕ್ಕೆ ವರ್ಗಾವಣೆ ಮಾಡಲಾಗಿತ್ತು.

46
ಕಳೆದ ವರ್ಷ ಆಗಸ್ಟ್‌ನಿಂದಲೇ ದೂರುಗಳು
Image Credit : Asianet News

ಕಳೆದ ವರ್ಷ ಆಗಸ್ಟ್‌ನಿಂದಲೇ ದೂರುಗಳು

ಪೀಟರ್ ಡ್ಯಾಡಿ ವಿರುದ್ಧ ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಮೊದಲ ದೂರು ದಾಖಲಾಗಿತ್ತು. ಪುಲಕೇಶಿನಗರ ಠಾಣೆಯಲ್ಲಿ ಸುಬ್ಬರಾವ್ ಎಂಬ ವ್ಯಕ್ತಿ ದೂರು ನೀಡಿದ್ದು, 300 ಎಕರೆ ಜಮೀನಿನ ದಾಖಲೆಗಳನ್ನು ಸರಿಪಡಿಸಿ, ಖಾತೆ ಬದಲಾವಣೆ ಮಾಡಿಕೊಟ್ಟು ನಂತರ ಮಾರುಕಟ್ಟೆ ಬೆಲೆಗೆ ಮಾರಾಟ ಮಾಡಿಕೊಡುವುದಾಗಿ ಪೀಟರ್ ಡ್ಯಾಡಿ ನಂಬಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

56
ಸುಳ್ಳು ಚೆಕ್ ಬೌನ್ಸ್ ಪ್ರಕರಣ
Image Credit : Asianet News

ಸುಳ್ಳು ಚೆಕ್ ಬೌನ್ಸ್ ಪ್ರಕರಣ

ಈ ಕೆಲಸಕ್ಕಾಗಿ ಪೀಟರ್ ಡ್ಯಾಡಿ ಸುಬ್ಬರಾವ್‌ನಿಂದ 96 ಲಕ್ಷ 50 ಸಾವಿರ ರೂಪಾಯಿ ಹಣವನ್ನು ಪಡೆದಿದ್ದಾನೆ ಎನ್ನಲಾಗಿದೆ. ಆದರೆ ಕೆಲಸ ಮಾಡಿಕೊಡದೇ ಹಣ ವಂಚಿಸಿದ್ದಾನೆ ಎಂಬ ಆರೋಪದಡಿ ಪ್ರಕರಣ ದಾಖಲಾಗಿತ್ತು. ಅಲ್ಲದೆ, ಕಮಿಷನ್ ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಸುಬ್ಬರಾವ್‌ನಿಂದ ಚೆಕ್ ಪಡೆದು, ನಂತರ ಅದನ್ನೇ ಆಧಾರ ಮಾಡಿಕೊಂಡು ದೂರುದಾರರ ವಿರುದ್ಧ ಸುಳ್ಳು ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದಾನೆ ಎಂಬ ಆರೋಪವೂ ಇದೆ.

66
ಸಿಐಡಿ ಆರ್ಥಿಕ ಅಪರಾಧ ದಳದಿಂದ ದಾಳಿ
Image Credit : Asianet News

ಸಿಐಡಿ ಆರ್ಥಿಕ ಅಪರಾಧ ದಳದಿಂದ ದಾಳಿ

ಈ ಎಲ್ಲಾ ಪ್ರಕರಣಗಳ ಹಿನ್ನೆಲೆ ಸಿಐಡಿ ಆರ್ಥಿಕ ಅಪರಾಧ ದಳ ತನಿಖೆಯನ್ನು ತೀವ್ರಗೊಳಿಸಿದ್ದು, ಫೆಬ್ರವರಿ 10ರಂದು ಪೀಟರ್ ಡ್ಯಾಡಿ ನಿವಾಸದ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆಗಳು, ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳು ಹಾಗೂ ಇತರೆ ಪುರಾವೆಗಳಿಗಾಗಿ ಪರಿಶೀಲನೆ ನಡೆಸಿದೆ. ಸದ್ಯ ಸಿಐಡಿ ಅಧಿಕಾರಿಗಳಿಂದ ವಿಚಾರಣೆ ಮತ್ತು ದಾಖಲೆ ಪರಿಶೀಲನೆ ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಬೆಳವಣಿಗೆಗಳು ನಡೆಯುವ ಸಾಧ್ಯತೆ ಇದೆ.

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಬೆಂಗಳೂರು
ವಂಚನೆ
ಕ್ರೈಮ್ ನ್ಯೂಸ್
ಸುದ್ದಿ

Latest Videos
Recommended Stories
Recommended image1
ಬೆಲೆ ಎಷ್ಟೇ ಇರಲಿ ಪ್ರತಿ ವರ್ಷ ಪತ್ನಿಗೆ 3 ಕೆಜಿ ಚಿನ್ನ ಖರೀದಿಸುವ ಭಾರತದ ಉದ್ಯಮಿ,ನೆಟ್ಟಿಗರ ವಿಶೇಷ ಮನವಿ
Recommended image2
ಇನ್ಮುಂದೆ ಹೋಟೆಲ್‌ಗಳಲ್ಲಿ 10 ರೂ ಕಾಫಿ ಹೀರುತ್ತಾ ಕೂತರೆ ಗ್ರಾಹಕರಿಗೆ ಬೀಳಲಿದೆ 1000 ರೂ.ವರೆಗೆ ದಂಡ!
Recommended image3
ಚಿನ್ನ, ಬೆಳ್ಳಿ, ಬಿಟ್‌ಕಾಯಿನ್.. ಈ ಮೂರರಲ್ಲಿ ಯಾವುದ್ರಲ್ಲಿ ಹೂಡಿಕೆ ಮಾಡ್ಬೇಕು?
Related Stories
Recommended image1
ಸಾಲ ಕೊಡಿಸುವ ನೆಪದಲ್ಲಿ ಬೆಂಗಳೂರಿನ ಕೆಎಎಲ್ ಇಂಜಿನಿಯರಿಂಗ್ ಮಾಲೀಕರಿಗೆ ಕೋಟ್ಯಾಂತರ ರೂಪಾಯಿ ವಂಚನೆ
Recommended image2
ಶಾಸಕ ಶರಣು ಸಲಗರ್ ಮೇಲೆ FIR: ಚುನಾವಣೆ ವೇಳೆ ಉದ್ಯಮಿಯಿಂದ ₹99 ಲಕ್ಷ ಸಾಲ ಪಡೆದು ವಂಚನೆ ಆರೋಪ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved