- Home
- Business
- ಚಿನ್ನ ಕೊಳ್ಳೋರಿಗೆ ಗುಡ್ ನ್ಯೂಸ್; ಮತ್ತೆ ಬಂಗಾರದ ಬೆಲೆಯಲ್ಲಿ ಮಹಾ ಕುಸಿತ! ಇವತ್ತಿನ ಗೋಲ್ಡ್ ರೇಟ್ ಮಾಹಿತಿ ಇಲ್ಲಿದೆ
ಚಿನ್ನ ಕೊಳ್ಳೋರಿಗೆ ಗುಡ್ ನ್ಯೂಸ್; ಮತ್ತೆ ಬಂಗಾರದ ಬೆಲೆಯಲ್ಲಿ ಮಹಾ ಕುಸಿತ! ಇವತ್ತಿನ ಗೋಲ್ಡ್ ರೇಟ್ ಮಾಹಿತಿ ಇಲ್ಲಿದೆ
ಬೆಂಗಳೂರು: ಆಷಾಢ ಮಾಸ ಶುರುವಾದ ಬೆನ್ನಲ್ಲೇ ಚಿನ್ನದ ಬೆಲೆಯಲ್ಲಿ ಕುಸಿತ ಕಾಣಲಾರಂಭಿಸಿದೆ. ಇದು ಚಿನ್ನ ಖರೀದಿಸುವವರ ಪಾಲಿಗೆ ನಿಜಕ್ಕೂ ಸಿಹಿಸುದ್ದಿಯಾಗಿದೆ. ಅಷ್ಟಕ್ಕೂ ಜುಲೈ 01ರಂದು ಚಿನ್ನದ ಬೆಲೆ ಎಷ್ಟಿದೆ ಎನ್ನುವುದನ್ನು ನೋಡೋಣ ಬನ್ನಿ.

ಈಗಾಗಲೇ ಆಶಾಢಮಾಸ ಶುರುವಾಗಿದೆ. ಹೀಗಿರುವಾಗಲೇ ಚಿನ್ನದ ಬೆಲೆಯಲ್ಲಿ ಇಳಿಕೆ ಕಾಣುತ್ತಿರುವುದು ಆಭರಣ ಪ್ರಿಯರ ಪಾಲಿಗೆ ಒಂದು ರೀತಿ ಗುಡ್ ನ್ಯೂಸ್ ಎನಿಸಿಕೊಂಡಿದೆ. ಮಂಗಳವಾರ 24 ಕ್ಯಾರಟ್ 10 ಗ್ರಾಮ್ ಚಿನ್ನದ ಮೇಲೆ 1800 ರುಪಾಯಿ ಹಾಗೂ 22 ಕ್ಯಾರಟ್ 10 ಗ್ರಾಮ್ ಚಿನ್ನದ ಮೇಲೆ 1650 ರುಪಾಯಿ ಇಳಿಕೆಯಾಗಿತ್ತು.
ಇದೀಗ ಮತ್ತೆ ಜುಲೈ 01ರಂದು ಕೂಡಾ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಹೌದು, 24 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ ಇಂದು ಸುಮಾರು 1260 ರುಪಾಯಿ ಇಳಿಕೆಯಾಗಿದೆ. ಈ ಮೂಲಕ ಇಂದು ಒಂದು ಗ್ರಾಮ್ 24 ಕ್ಯಾರಟ್ ಚಿನ್ನದ ಬೆಲೆ 14,078 ರುಪಾಯಿಗಳಾಗಿದೆ.
ಇನ್ನೊಂದೆಡೆ ಆಭರಣ ಚಿನ್ನವಾಗಿರುವ 22 ಕ್ಯಾರಟ್ ಚಿನ್ನದ ಬೆಲೆಯಲ್ಲೂ ಇಳಿಕೆಯಾಗಿದೆ. ಇಂದು 22 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 1150 ರುಪಾಯಿ ಇಳಿಕೆಯಾಗಿದೆ. ಇದರೊಂದಿಗೆ ಇಂದು ಒಂದು ಗ್ರಾಮ್ 22 ಕ್ಯಾರಟ್ ಚಿನ್ನದ ಬೆಲೆ 12,905 ರುಪಾಯಿಗಳಾಗಿದೆ.
ಕಳೆದ 10 ದಿನಗಳಲ್ಲಿ ಇಂದು ಕನಿಷ್ಠ ಮೊತ್ತಕ್ಕೆ ಚಿನ್ನದ ಬೆಲೆಯಲ್ಲಿ ಕುಸಿತವಾಗಿದೆ. ಈ ಮೊದಲು ಜೂನ್ 30ರಂದು 24 ಕ್ಯಾರಟ್ ಒಂದು ಗ್ರಾಮ್ ಚಿನ್ನದ ಬೆಲೆ 14,193 ರುಪಾಯಿಗಳಾಗಿದ್ದೇ ಕಳೆದ 10 ದಿನದಲ್ಲಿನ ಕನಿಷ್ಠ ಕುಸಿತ ಎನಿಸಿಕೊಂಡಿತ್ತು.
ಇನ್ನು ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡಿದ್ದರೂ ಸಹಾ, ಬೆಳ್ಳಿ ಬೆಲೆಯಲ್ಲಿ ಕೊಂಚ ಏರಿಕೆ ಕಂಡಿದೆ. ನಿನ್ನೆಯ ದಿನಕ್ಕೆ ಹೋಲಿಸಿದರೆ, ಒಂದು ಕೆಜಿ ಬೆಳ್ಳಿ ಬೆಲೆಯಲ್ಲಿ ಅಲ್ಪ ಏರಿಕೆ ಕಂಡಿದೆ. ಇಂದು ಒಂದು ಕೆಜಿ ಬೆಳ್ಳಿ ಬೆಲೆಯಲ್ಲಿ 5 ಸಾವಿರ ರುಪಾಯಿ ಏರಿಕೆ ಕಂಡಿದ್ದು, ಒಂದು ಕೆಜಿ ರೇಟ್ 2,40,000 ರುಪಾಯಿಗಳಾಗಿವೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

