ಬಂಗಾರ ಪ್ರಿಯರಿಗೆ ಚಿನ್ನದಂಥಾ ಸುದ್ದಿ; 7ನೇ ದಿನವೂ ಇಳಿಕೆಯಾದ ಬೆಲೆ; ಬರೋಬ್ಬರಿ 3,450 ರೂಪಾಯಿ ಕುಸಿತ
Gold And Silver Price: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಂಕ ಮತ್ತು ಷೇರುಪೇಟೆ ಕುಸಿತದ ನಡುವೆ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಕಳೆದ ಏಳು ದಿನಗಳಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 3,450 ರೂಪಾಯಿ ಇಳಿಕೆಯಾಗಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಂಕ ಮತ್ತು ಷೇರುಪೇಟೆ ಕುಸಿತದ ನಡುವೆ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಚಿನ್ನ ಖರೀದಿಸಲು ನೀವೇನಾದ್ರೂ ಹಣ ಸೇವ್ ಮಾಡಿಕೊಂಡಿದ್ದರೆ ತಡಮಾಡದೇ ಬಂಗಾರವನ್ನು ಖರೀದಿಸಿ.
ಇಂದು ಸಹ ಚಿನ್ನದ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. Good Returns ವರದಿ ಪ್ರಕಾರ, ಭಾರತದಲ್ಲಿ ಕಳೆದ ಏಳು ದಿನಗಳಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 3,450 ರೂಪಾಯಿ ಇಳಿಕೆಯಾಗಿದೆ. ಹಾಗಾಗಿ ಚಿನ್ನ ಖರೀದಿಗೆ ಇದು ಸುವರ್ಣವಕಾಶವಾಗಿದೆ.
ದೇಶದಲ್ಲಿಂದು 22 ಕ್ಯಾರಟ್ ಚಿನ್ನದ ಬೆಲೆ
1 ಗ್ರಾಂ: 8,224 ರೂಪಾಯಿ
8 ಗ್ರಾಂ: 65,792 ರೂಪಾಯಿ
10 ಗ್ರಾಂ: 82,240 ರೂಪಾಯಿ
100 ಗ್ರಾಂ: 8,22,400 ರೂಪಾಯಿ
ದೇಶದಲ್ಲಿಂದು 24 ಕ್ಯಾರಟ್ ಚಿನ್ನದ ಬೆಲೆ
1 ಗ್ರಾಂ: 8,972 ರೂಪಾಯಿ
8 ಗ್ರಾಂ: 71,776 ರೂಪಾಯಿ
10 ಗ್ರಾಂ: 89,720 ರೂಪಾಯಿ
100 ಗ್ರಾಂ: 8,97,200 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ
10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಹೀಗಿದೆ. ಚೆನ್ನೈ: 82,240 ರೂಪಾಯಿ, ಮುಂಬೈ: 82,240 ರೂಪಾಯಿ, ದೆಹಲಿ: 82,390 ರೂಪಾಯಿ, ಕೋಲ್ಕತ್ತಾ: 82,240 ರೂಪಾಯಿ, ಬೆಂಗಳೂರು: 82,240 ರೂಪಾಯಿ, ಹೈದರಾಬಾದ್: 82,240 ರೂಪಾಯಿ, ಪುಣೆ; 82,240 ರೂಪಾಯಿ
ದೇಶದಲ್ಲಿಂದು ಬೆಳ್ಳಿ ಬೆಲೆ
ಇಂದು ದೇಶದಲ್ಲಿ ಚಿನ್ನದ ಜೊತೆ ಬೆಳ್ಳಿ ದರದಲ್ಲಿಯೂ ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ.
10 ಗ್ರಾಂ: 939 ರೂಪಾಯಿ
100 ಗ್ರಾಂ: 9,390 ರೂಪಾಯಿ
1,000 ಗ್ರಾಂ: 93,900 ರೂಪಾಯಿ
ಷೇರುಪೇಟೆಯ ಕುಸಿತದ ನಡುವೆಯೂ ಚಿನ್ನದ ಬೆಲೆಯಲ್ಲಿ ಕುಸಿತ ಕಂಡು ಬಂದಿದೆ. ಕಳೆದ 6 ದಿನಗಳಿಂದ ಚಿನ್ನದ ಬೆಲೆ ಹಂತ ಹಂತವಾಗಿ ಇಳಿಕೆಯಾಗಿದೆ. ಏಪ್ರಿಲ್ 6ರಂದು ಮಾತ್ರ ಚಿನ್ನದ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿರಲಿಲ್ಲ. ಇಂದು ಸಹ ಚಿನ್ನದ ಬೆಲೆ ಕುಸಿತವನ್ನು ಕಂಡಿದೆ.
ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ
ಆಭರಣದ ಬದಲು ಚಿನ್ನದ ಬಿಸ್ಕೆಟ್, ಚಿನ್ನದ ಬಾಂಡ್ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದೂ ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ. ಇದನ್ನು ನೀವು ಆ ದಿನದ ಚಿನ್ನದ ದರ ಹೇಗಿದೆ ಎಂಬುದರ ಮೇಲೆ ಬಹು ವರ್ಷಗಳ ನಂತರವೂ ಉತ್ತಮ ದರವನ್ನು ಪಡೆಯಬಹುದು. ಹೀಗಾಗಿಯೇ ಚಿನ್ನ ಹೂಡಿಕೆದಾರರ ಅಚ್ಚುಮೆಚ್ಚಿನ ಹೂಡಿಕೆಯ ವಿಷಯವಾಗಿದೆ.