ಮತ್ತೆ ಚಿನ್ನದ ಬೆಲೆ ಇಳಿಕೆ, ಗ್ರಾಹಕರ ಮೊಗದಲ್ಲಿ ಖುಷಿಯ ಅಲೆ!
ಏರಿಳಿತವಾಡುತ್ತಿದ್ದ ಚಿನ್ನದ ದರ ಮತ್ತೆ ಕುಸಿತ| ಚಿನ್ನ ಖರೀದಿಗೆ ಒಳ್ಳೆಯ ಸಮಯ, ಬೆಳ್ಳಿಯೂ ಅಗ್ಗ| ಹೀಗಿದೆ ನೋಡಿ ಜನವರಿ 28ರ ಗೋಲ್ಡ್ ರೇಟ್
ದಿನೇ ದಿನೇ ಏರುತ್ತಿದ್ದ ಚಿನ್ನದ ದರ ಗ್ರಾಹಕರ ಚಿಂತೆಗೆ ಕಾರಣವಾಗಿತ್ತು
ಆದರೀಗ ಬಂಗಾರ ದರ ಕುಸಿಯಲಾರಂಭಿಸಿದೆ.
ಲಾಕ್ಡೌನ್ ಹೇರಿದಾಗಿನಿಂದಲೂ ಏರಿಳಿತ ಆಟವಾಡುತ್ತಿದ್ದ ಚಿನ್ನದ ದರದಿಂದ ಬೇಸತ್ತಿದ್ದ ಗ್ರಾಹಕರಿಗೆ ಈಗ ಕೊಂಚ ನೆಮ್ಮದಿಯಾಗಿದೆ
ಇಂದು ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ 100 ರೂ. ಇಳಿಕೆಯಾಗಿ ದರ 45,650 ರೂಪಾಯಿ ಆಗಿದೆ.
ಇನ್ನು, 24 ಕ್ಯಾರೆಟ್ನ 10 ಗ್ರಾಂ ಚಿನ್ನದ ದರ 100 ರೂ. ಇಳಿಕೆಯಾಗಿ 49,800 ರೂಪಾಯಿ ಆಗಿದೆ.
ಇನ್ನು ಇತ್ತ ಬೆಳ್ಳಿ ದರ 66,800ರೂ ಆಗಿದೆ.
ಇನ್ನೂ ಏರಿಕೆಯಾಗಲಿದೆ ಚಿನ್ನದ ಬೆಲೆ: ಶೀಘ್ರವೇ ಆಭರಣ ಚಿನ್ನದ ಬೆಲೆ 55 ಸಾವಿರ ರೂಪಾಯಿ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕೊರೋನಾ ಸೋಂಕು ಹರಡುವಿಕೆ ಇನ್ನೂ ನಿಂತಿಲ್ಲ. ಜೊತೆಗೆ ಕೊರೋನಾ ವೈರಸ್ ರೂಪಾಂತರವೂ ಆಗುತ್ತಿದೆ. ಇದರಿಂದ ಆರ್ಥಿಕತೆ ಮೇಲೆ ಭಾರೀ ಹೊಡೆತ ಉಂಟಾಗಿದೆ.
ಹೀಗಾಗಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಾಣಲಿದೆ ಎನ್ನುವುದು ತಜ್ಞರ ಅಭಿಪ್ರಾಯ. ಹೀಗಾಗಿ, ಚಿನ್ನ ಖರೀದಿ ಮಾಡಬೇಕು ಎನ್ನುವ ಆಲೋಚನೆಯಲ್ಲಿದ್ದವರು ಚಿಂತಾಕ್ರಾಂತರಾಗಿದ್ದಾರೆ. ಚಿನ್ನ ಖರೀದಿ ಮಾಡಬೇಕೋ ಅಥವಾ ಬೇಡವೋ ಎನ್ನುವ ಗೊಂದಲದಲ್ಲಿದ್ದಾರೆ