- Home
- Business
- ಚಿನ್ನದ ಬೆಲೆಯಲ್ಲಿ ಇಂದು ಮತ್ತೊಮ್ಮೆ ಮಹಾ ಪತನ; 10 ಗ್ರಾಮ್ Gold Rate 2,780 ರುಪಾಯಿ ಕುಸಿತ! ಬೆಳ್ಳಿ ಇನ್ನಷ್ಟು ಅಗ್ಗ
ಚಿನ್ನದ ಬೆಲೆಯಲ್ಲಿ ಇಂದು ಮತ್ತೊಮ್ಮೆ ಮಹಾ ಪತನ; 10 ಗ್ರಾಮ್ Gold Rate 2,780 ರುಪಾಯಿ ಕುಸಿತ! ಬೆಳ್ಳಿ ಇನ್ನಷ್ಟು ಅಗ್ಗ
Gold Rate Today ಆಷಾಢ ಮಾಸ ಹತ್ತಿರವಾಗುತ್ತಿರುವ ಹೊತ್ತಿನಲ್ಲೇ ದಿನದಿಂದ ದಿನಕ್ಕೆ ಚಿನ್ನದ ಬೆಲೆಯಲ್ಲಿ ಮಹಾ ಕುಸಿತ ಮುಂದುವರೆದಿದೆ. ಇದೀಗ ಸತತ ಮೂರನೇ ದಿನವೂ ಚಿನ್ನದ ಬೆಲೆಯಲ್ಲಿ ಮಹಾ ಕುಸಿತವಾಗಿದೆ. ಬೆಂಗಳೂರಿನಲ್ಲಿ ಜೂನ್ 25ರಂದು ಚಿನ್ನದ ಬೆಲೆ ಎಷ್ಟಿದೆ ನೋಡೋಣ ಬನ್ನಿ.
ಸತತ ಮೂರನೇ ದಿನವೂ ಇಳಿಕೆ ಕಂಡ ಚಿನ್ನದ ಬೆಲೆ
ಒಂದು ಕಡೆ ಇರಾನ್-ಅಮೆರಿಕ ಶಾಂತಿ ಒಪ್ಪಂದ, ಡಾಲರ್ ಮೌಲ್ಯದಲ್ಲಿ ಗಣನೀಯ ಹೆಚ್ಚಳದಿಂದಾಗಿ ಸತತ ಮೂರನೇ ದಿನವೂ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡಿದೆ. ಇದು ಆಭರಣ ಪ್ರಿಯರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ.
ಕಳೆದ 3 ದಿನದಲ್ಲಿ 7200 ರುಪಾಯಿ ಇಳಿಕೆ
ಕಳೆದ ಮೂರು ದಿನಗಳಲ್ಲಿ 24 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 7850 ರುಪಾಯಿ ಇಳಿಕೆಯಾಗಿದೆ. ಇನ್ನೊಂದೆಡೆ 22 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ ಕಳೆದ ಮೂರು ದಿನದಲ್ಲಿ 7200 ರುಪಾಯಿ ಇಳಿಕೆಯಾಗಿದೆ. ಸದ್ಯದ ಟ್ರೆಂಡ್ ಗಮನಿಸಿದರೆ ಮುಂಬರುವ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆ ಕಾಣುವ ಸಾಧ್ಯತೆಯಿದೆ.
24 ಕ್ಯಾರಟ್ 10 ಗ್ರಾಮ್ ಚಿನ್ನದ ಮೇಲೆ ಇಂದು 2780 ರುಪಾಯಿ ಕುಸಿತ
ಹೌದು, ಜೂನ್ 25ರಂದು 10 ಗ್ರಾಮ್ 24 ಕ್ಯಾರಟ್ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2780 ರುಪಾಯಿ ಇಳಿಕೆಯಾಗಿದೆ. ಈ ಮೂಲಕ ಒಂದು ಗ್ರಾಮ್ 24 ಕ್ಯಾರಟ್ ಚಿನ್ನದ ಬೆಲೆ 14,013 ರುಪಾಯಿಗಳಾಗಿದೆ.
22 ಕ್ಯಾರಟ್ 10 ಗ್ರಾಮ್ ಚಿನ್ನದ ಮೇಲೆ 2550 ರುಪಾಯಿ ಕುಸಿತ
ಇನ್ನೊಂದೆಡೆ 22 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ ಸುಮಾರು 2550 ರುಪಾಯಿ ಇಳಿಕೆಯಾಗಿದೆ. ಇದರೊಂದಿಗೆ ಒಂದು ಗ್ರಾಮ್ 22 ಕ್ಯಾರಟ್ ಚಿನ್ನದ ಬೆಲೆ 12,845 ರುಪಾಯಿಗಳಾಗಿದೆ. ಇದು ಆಭರಣ ಪ್ರಿಯರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ.
ಬೆಳ್ಳಿ ಬೆಲೆಯಲ್ಲೂ ಮಹಾ ಪತನ
ಇನ್ನು ಚಿನ್ನ ಮಾತ್ರವಲ್ಲದೇ ಬೆಳ್ಳಿ ಬೆಲೆಯಲ್ಲೂ ಭಾರೀ ಇಳಿಕೆಯಾಗಿದೆ. ಇಂದು ಒಂದೇ ದಿನ ಒಂದು ಕೆಜಿ ಬೆಳ್ಳಿ ಬೆಲೆಯಲ್ಲಿ 10 ಸಾವಿರ ರುಪಾಯಿ ಇಳಿಕೆಯಾಗಿದೆ. ಈ ಮೂಲಕ ಒಂದು ಕೆಜಿ ಬೆಳ್ಳಿ ಬೆಲೆ 2,35,000 ರುಪಾಯಿಗಳಾಗಿದೆ.
ಆಭರಣ ಖರೀದಿಸುವವರಿಗೆ ಇದು ಗುಡ್ ನ್ಯೂಸ್
ಒಟ್ಟಿನಲ್ಲಿ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ನಿರಂತರವಾಗಿ ಇಳಿಕೆ ಕಾಣುತ್ತಿರುವುದು ಆಭರಣ ಖರೀದಿಸುವವರಿಗೆ ಹಾಗೂ ಆಭರಣದ ಮೇಲೆ ಹೂಡಿಕೆ ಮಾಡುವವರಿಗೆ ಇದು ಸಿಹಿ ಸುದ್ದಿ ಎನಿಸಿದೆ. ಮುಂಬರುವ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆ ಕಂಡರೂ ಅಚ್ಚರಿಯೇನಿಲ್ಲ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

