Invest in Karnataka: ರಾಜ್ಯದಲ್ಲಿ ಹೂಡಿಕೆ ಮಾಡಲು ತೈವಾನ್ ಕಂಪನಿಗಳಿಗೆ ನಿರಾಣಿ ಅಹ್ವಾನ
ಬೆಂಗಳೂರು(ಫೆ.18): ರಾಜ್ಯದಲ್ಲಿ ಹೆಚ್ಚಿನ ಹೂಡಿಕೆ ಮಾಡಲು ತೈವಾನ್ ಕಂಪನಿಗಳನ್ನು(Taiwan Companies) ಆಹ್ವಾನಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ(Murugesh Nirani), ಸರ್ಕಾರದಿಂದ ಎಲ್ಲಾ ಬೆಂಬಲ ಮತ್ತು ಸಹಕಾರ ನೀಡುವುದಾಗಿ ಅಶ್ವಾಸನೆ ನೀಡಿದ್ದಾರೆ.
ಗುರುವಾರ ನಗರದಲ್ಲಿ ತೈವಾನ್ ದೇಶದ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರದ ರಾಯಭಾರಿ ಬಾಶುವಾನ್ ನೇತೃತ್ವದ ನಿಯೋಗವನ್ನು ಭೇಟಿ ಮಾಡಿ ಹೂಡಿಕೆಗೆ ರಾಜ್ಯವು ಸೂಕ್ತ ಸ್ಥಳ ಹೇಗೆ ಮತ್ತು ಅದಕ್ಕಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳೇನು ಎಂಬುದನ್ನು ಮನವರಿಕೆ ಮಾಡಿಕೊಟ್ಟ ಸಚಿವ ಮುರುಗೇಶ್ ನಿರಾಣಿ
ಕರ್ನಾಟಕ(Karnataka) ಮತ್ತು ತೈವಾನ್(Taiwan) ನಡುವೆ ಹಲವು ಸಾಮ್ಯತೆಗಳಿದ್ದು, ಇಎಸ್‌ಡಿಎಂ, ಎಲೆಕ್ಟ್ರಿಕ್ ವಾಹನ, ಆಟೋ ಮತ್ತು ಆಟೋ ಕಾಂಪೊನೆಂಟ್ಸ್, ಹೆಲ್ತ್‌ಕೇರ್, ಎಂಜಿನಿಯರಿಂಗ್ ಮತ್ತು ಮೆಷಿನ್ ಟೂಲ್ ಮುಂತಾದ ಪ್ರಮುಖ ಉದ್ಯಮಗಳಲ್ಲಿ ಮುಂಚೂಣಿ ಸಾಧಿಸಿವೆ ಎಂದು ತಿಳಿಸಿದ ಸಚಿವ ನಿರಾಣಿ
ಈ ಸಂದರ್ಭದಲ್ಲಿ ಕೈಗಾರಿಕಾಭಿವೃದ್ಧಿ ಆಯುಕ್ತೆ ಗುಂಜನ್ ಕೃಷ್ಣಾ , ತೈವಾನ್ ದೇಶದ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರದ ದಕ್ಷಿಣ-ಚೆನ್ನೈನ ಮಹಾನಿರ್ದೇಶಕ ಬೆನ್‌ವಾಂಗ್, ಇನ್ವೆಸ್ಟ್ ಇಂಡಿಯಾ ಫೋರಂನ ಪ್ರಾದೇಶಿಕ ಮುಖ್ಯಸ್ಥೆ ಸಾಯಿ ಸುಧಾ, ತೈವಾನ್ ಡೆಸ್ಕ್ ಲೀಡ್ ಅಜು ಆಂಟೋನಿ ಇತರರು ಉಪಸ್ಥಿತರಿದ್ದರು.
ಬೆಂಗಳೂರಲ್ಲಿ ಕೈಗಾರಿಕಾ ಪಾರ್ಕ್ ಅಭಿವೃದ್ಧಿಪಡಿಸಲು ಮುಂದಾಗಿರುವ ತೈವಾನ್ ಮೂಲದ ಸೆಂಚುರಿ ಡೆವಲಪ್‌ಮೆಂಟ್ ಕಾರ್ಪೋರೇಷನ್ (CDC), ಈ ಸಂಬಂಧ ಮಾಸ್ಟರ್ ಪ್ಲಾನ್ ಅಂತಿಮಗೊಳಿಸಿದೆ. ದೇವನಹಳ್ಳಿಯ ಏರೋಸ್ಪೇಸ್ ಪಾರ್ಕ್ ಬಳಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ 70 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಅಲ್ಲಿ ತೈವಾನ್‌ನ 100 ಕಂಪನಿಗಳಿಗೆ ಸ್ಥಳಾವಕಾಶ ಕಲ್ಪಿಸಲಿದೆ. ಟಿಇಎಂಐಸಿಓ ಮೋಟಾರ್ಸ್ ಇಂಡಿಯಾ ಪ್ರೈವೇಟ್ ಲಿ. ಈಗಾಗಲೇ ಪಾರ್ಕ್‌ನಲ್ಲಿ ಕಾರ್ಖಾನೆ(Factory) ನಿರ್ಮಾಣ ಕಾರ್ಯ ಪ್ರಾರಂಭಿಸಿದೆ.