MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Business
  • ಮಹಿಳಾ ಉದ್ಯಮಿಗಳಿಗಾಗಿ ಪ್ರತ್ಯೇಕ ಆರ್ಥಿಕ ಸಂಸ್ಥೆ: ಸಿಎಂ ಬೊಮ್ಮಾಯಿ

ಮಹಿಳಾ ಉದ್ಯಮಿಗಳಿಗಾಗಿ ಪ್ರತ್ಯೇಕ ಆರ್ಥಿಕ ಸಂಸ್ಥೆ: ಸಿಎಂ ಬೊಮ್ಮಾಯಿ

ಬೆಂಗಳೂರು(ನ.19):  ಗ್ರಾಮಗಳ ಸ್ತ್ರೀಶಕ್ತಿ ಸಂಘಗಳಿಂದ ಹಿಡಿದು ಬೃಹತ್‌ ಮಟ್ಟದ ಉದ್ಯಮಗಳಿಗಾಗಿಯೇ ಉತ್ತಮ ಆರ್ಥಿಕ ವ್ಯವಸ್ಥೆ ಕಲ್ಪಿಸಲು ಪ್ರತ್ಯೇಕ ಆರ್ಥಿಕ ಸಂಸ್ಥೆಯನ್ನು ರಚಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಹೇಳಿದ್ದಾರೆ.

2 Min read
Kannadaprabha News | Asianet News
Published : Nov 19 2021, 11:39 AM IST
Share this Photo Gallery
  • FB
  • TW
  • Linkdin
  • Whatsapp
16

ಗುರುವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಉಬುಂಟು ಸಂಘಟನೆ ಮತ್ತು ಮಹಿಳಾ ಉದ್ಯಮ ಸಂಘದ ವತಿಯಿಂದ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ಉದ್ಯಮಿಗಳ ದಿನಾಚರಣೆ(International Women Entrepreneurs Day)- ಒಗ್ಗಟ್ಟಾಗಿ ಬೆಳೆಯೋಣ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ ಬೊಮ್ಮಾಯಿ

26

ಗ್ರಾಮೀಣ ಭಾಗದಲ್ಲಿ(Rural Area) ಸ್ವ-ಸಹಾಯ ಗುಂಪುಗಳ ಮಾದರಿಯಂತೆ ಮಹಿಳಾ ಉದ್ಯಮಿಗಳನ್ನು(Women Entrepreneurs) ಪ್ರೋತ್ಸಾಹಿಸಲು ರಾಜ್ಯ ಸರ್ಕಾರ(Government of Karnataka) ಪ್ರತ್ಯೇಕ ಆರ್ಥಿಕ ಸಂಸ್ಥೆಯನ್ನು ಆರಂಭಿಸುವ ಉದ್ದೇಶ ಹೊಂದಿದೆ. ಪ್ರತಿಯೊಬ್ಬ ಮಹಿಳೆಯರೂ(Women) ಆರ್ಥಿಕವಾಗಿ ಸಬಲರಾಗಿ ಮಹಿಳಾ ಉದ್ಯಮಿಗಳಾಗಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಪ್ರತ್ಯೇಕ ಆರ್ಥಿಕ ಸಂಸ್ಥೆಯನ್ನು ಪ್ರಾರಂಭಿಸುವ ಸಂಬಂಧ ಅಧಿಕಾರಿಗಳಿಗೆ ಸಾಧಕ-ಬಾಧಕಗಳ ಬಗ್ಗೆ ವರದಿ ನೀಡಲು ಸೂಚನೆ ನೀಡಲಾಗುವುದು. ಮಹಿಳೆಯರ ಸಬಲೀಕರಣಕ್ಕೆ ಸರ್ಕಾರವು ಎಲ್ಲಾ ರೀತಿಯ ನೆರವು ನೀಡಲು ಬದ್ಧವಿದೆ ಎಂದು ಅಭಯ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

36

ಒಂದು ವಾರದೊಳಗೆ ಅಂಧ ಮಹಿಳೆಯರಿಗೆ(Blind Women) ವಿಶೇಷ ಕಾರ್ಯಕ್ರಮ ರೂಪಿಸಿ, ಉದ್ಯೋಗ(Job) ಹೊಂದುವಂತೆ ಅನುಕೂಲ ಕಲ್ಪಿಸಲಾಗುವುದು. ಈ ಕಾರ್ಯಕ್ರಮ ಘೋಷಣೆಗೆ ಕಾರಣವೂ ಇದೆ. ಕಡು ಬಡವರಾದ ಮೂವರು ಅಂಧ ಮಹಿಳೆಯರು ತಮ್ಮ ಹೆಣ್ಣು ಮಕ್ಕಳೊಂದಿಗೆ ನನ್ನನ್ನು ಭೇಟಿಯಾಗಿದ್ದರು. ಈ ವೇಳೆ ಏನು ಸಹಾಯ ಬೇಕೆಂದು ಕೇಳಿದಾಗ, ನಮಗೆ ಸಹಾಯ ಬೇಕಿಲ್ಲ. ಆದರೆ, ನಮಗೆ ನಾವೇ ಸಹಾಯ ಮಾಡಿಕೊಳ್ಳಲು ಕೆಲಸ ಬೇಕೆಂದು ಕೇಳಿದರು. ತಕ್ಷಣ ಈ ವಿಶೇಷ ಕಾರ್ಯಕ್ರಮ ರೂಪಿಸುವ ತೀರ್ಮಾನ ಕೈಗೊಂಡೆ ಎಂದು ತಿಳಿಸಿದ ಬೊಮ್ಮಾಯಿ

46

ಇದೇ ವೇಳೆ ಉಬುಂಟು ಸದಸ್ಯರೂ ಸಹ ತಮ್ಮ ಉದ್ಯಮ ಸಂಸ್ಥೆಗಳಲ್ಲಿ ಅಂಧರು ಮತ್ತು ದಿವ್ಯಾಂಗರಿಗೆ ಕೆಲಸವನ್ನು ಒದಗಿಸಿ, ಅವರ ಸಹಾಯಕ್ಕೆ ನಿಲ್ಲಬೇಕು ಎಂದು ಸಲಹೆ ನೀಡಿದ ಅವರು, ಉಬುಂಟು ಸಂಸ್ಥೆಯಲ್ಲಿ ಮಾದರಿ ಮಹಿಳೆಯರಿದ್ದಾರೆ. ಮತ್ತೊಬ್ಬರು ಬೆಳೆಯಲು ಸಹಾಯ ಮಾಡಿದರೆ ಯಶಸ್ಸು ಸಂಪೂರ್ಣವಾಗುತ್ತದೆ. 400 ಸದಸ್ಯರಿರುವ ಉಬುಂಟು ಸಂಸ್ಥೆಯ ಎಲ್ಲರೂ ಮುಂದಿನ ವರ್ಷದಲ್ಲಿ ಒಬ್ಬ ವ್ಯಕ್ತಿಯನ್ನು ಬೆಳೆಯಲು ಸಹಾಯ ಮಾಡಿದರೂ ಅದು ಸಮಾಜಕ್ಕೆ ನೀಡುವ ಬಹು ದೊಡ್ಡ ಕೊಡುಗೆಯಾಗಲಿದೆ ಎಂದ ಬಸವರಾಜ ಬೊಮ್ಮಾಯಿ

56

2019ರ ಕೈಗಾರಿಕಾ ನೀತಿ(Industrial Policy) ಒಳಗೊಂಡಿದ್ದ ಮಹಿಳಾ ಉದ್ಯಮಿಗಳಿಗೆ ನೀಡುವ ಪ್ರೋತ್ಸಾಹಕಗಳನ್ನು 2020-2025ರ ನೀತಿಯಲ್ಲಿ ಸೇರ್ಪಡೆಗೊಳಿಸಲಾಗುವುದು. ಮಹಿಳಾ ಉದ್ಯಮಿಗಳಿಗೆ ನೀಡುವ ಅನುದಾನದಲ್ಲಿ ರಿಯಾಯಿತಿ ಈಗಾಗಲೇ ನೀಡಲಾಗುತ್ತಿದ್ದು, ಜಮೀನು(Land) ಖರೀದಿಗೆ ರಿಯಾಯಿತಿ ಒದಗಿಸಲು ಚಿಂತನೆ ನಡೆಸಲಾಗುವುದು. ಐಟಿ-ಬಿಟಿಗೆ(IT-BT) ಇರುವ ರೀತಿಯಲ್ಲಿಯೇ ಕಾರ್ಯಕ್ರಮಗಳನ್ನು ಮಹಿಳಾ ಉದ್ಯಮಿಗಳಿಗೂ ರೂಪಿಸಲಾಗುವುದು ಎಂದು ಆಶ್ವಾಸನೆ ನೀಡಿದ ಬೊಮ್ಮಾಯಿ

66

ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ(Murugesh Nirani) ಮಾತನಾಡಿ, ಮಹಿಳೆಯರ ಉದ್ಯಮಕ್ಕೆ ಸರ್ಕಾರವು ಎಲ್ಲಾ ರೀತಿಯ ನೆರವು ನೀಡಲಿದೆ. ಮಹಿಳೆಯರಿಗಾಗಿ ಪ್ರತ್ಯೇಕ ಉದ್ಯಮ ಪಾರ್ಕ್ಗಳನ್ನು ಪ್ರಾರಂಭಿಸಲಿದೆ. ಕಲಬುರಗಿ, ಮೈಸೂರು, ಧಾರವಾಡ, ಹಾರೋಹಳ್ಳಿಯಲ್ಲಿ ಇವುಗಳು ತಲೆ ಎತ್ತಲಿವೆ. ದೇಶದಲ್ಲಿಯೇ ಮೊದಲ ಬಾರಿಗೆ ಮಹಿಳೆಯರಿಗಾಗಿ ಉದ್ಯಮ ಪಾರ್ಕ್‌ಗಳನ್ನು ಆರಂಭಿಸುತ್ತಿರುವ ಮೊದಲ ರಾಜ್ಯ ಕರ್ನಾಟಕವಾಗಿದೆ(Karnataka) ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸರ್ಕಾರದ ನಿವೃತ್ತ ಮುಖ್ಯಕಾರ್ಯದರ್ಶಿ ರತ್ನಪ್ರಭ ಸೇರಿದಂತೆ ಇತರರು ಉಪಸ್ಥಿತರಿದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಬಸವರಾಜ ಬೊಮ್ಮಾಯಿ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved