ಬೆಂಗಳೂರಿನ ಪ್ರವೈಗ್ ನೋಡಿ ಬೆಚ್ಚಿದ ಟೆಸ್ಲಾ, ಭಾರತದಲ್ಲಿ ಮಾಡೆಲ್ 3 ಬಿಡುಗಡೆ ದಿನಾಂಕ ಫಿಕ್ಸ್!
First Published Dec 26, 2020, 3:01 PM IST
ವಿಶ್ವದ ಅತೀ ದೊಡ್ಡ ಎಲೆಕ್ಟ್ರಿಕ್ ಕಾರು ತಯಾರಕ ಕಂಪನಿ ಅಮೆರಿಕ ಟೆಸ್ಲಾ, ಭಾರತದಲ್ಲಿ ಕಾರು ಬಿಡುಗಡೆ ಮಾಡಲಿದೆ ಎಂದು ಹೇಳುತ್ತಲೇ ಇತ್ತು. ಟೆಸ್ಲಾ ಸಿಇಓ ಎಲನ್ ಮಸ್ಕ್ ಟ್ವೀಟ್ ಮೂಲಕ ಖಚಿತಪಡಿಸಿದ್ದರು. ಆದರೆ ಇದುವರೆಗೂ ಸಾಧ್ಯವಾಗಿಲ್ಲ. ಇದೀಗ ಬೆಂಗಳೂರಿನ ಪ್ರವೈಗ್ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಜ್ಜಾಗಿದೆ. ಈ ಕಾರು ವಿಶ್ವದಲ್ಲೇ ಭಾರಿ ಸಂಚಲನ ಮೂಡಿಸಿದೆ. ಈ ಮಾಹಿತಿ ಸಿಕ್ಕ ಬೆನ್ನಲ್ಲೇ ಇದೀಗ ಟೆಸ್ಲಾ ಭಾರತದಲ್ಲಿ ಕಾರು ಬಿಡುಗಡೆ ದಿನಾಂಕ ಘೋಷಿಸಿದೆ.

ಅಮೆರಿಕ ಟೆಸ್ಲಾ ಎಲೆಕ್ಟ್ರಿಕ್ ಕಾರು ವಿಶ್ವದಲ್ಲೇ ಅತ್ಯಂತ ಜನಪ್ರಿಯ ಕಾರಾಗಿದೆ. ಅತ್ಯುತ್ತಮ ಮೈಲೇಜ್ ರೇಂಜ್, ಆರಾಮದಾಯಕ ಪ್ರಯಾಣ, ಉತ್ತಮ ಗುಣಟ್ಟ ಸೇರಿದಂತೆ ಹಲವು ಕಾರಣಗಳಿಂದ ಟೆಸ್ಲಾ ಕಾರುಗಳಿಗೆ ಬೇಡಿಕೆ ಹೆಚ್ಚಿದೆ.

2015ರಿಂದ ಭಾರತದಲ್ಲಿ ಟೆಸ್ಲಾ ಕಾರು ಬಿಡುಗಡೆಯಾಗಲಿದೆ ಅನ್ನೋ ಮಾತುಗಳು ಕೇಳಿ ಬಂದಿದೆ. 2018ರ ವೇಳೆ ಟೆಸ್ಲಾ ಸಿಇಓ ಎಲನ್ ಮಸ್ಕ್ ಕೂಡ ಟ್ವೀಟ್ ಮೂಲಕ ಭಾರತದಲ್ಲಿ ಟೆಸ್ಲಾ ಕಾರು ಬಿಡುಗಡೆ ಮಾಹಿತಿ ನೀಡಿದ್ದರು.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?