ಕಾಂಜಿವರಂ ಸೀರೆಯಲ್ಲಿ ಕಂಗೊಳಿಸಿದ ಅದಿತಿ; ನಟಿಯ ಸಾಂಪ್ರದಾಯಿಕ ಲುಕ್‌ಗೆ ಫ್ಯಾನ್ಸ್ ಫಿದಾ
ಬಹುಭಾಷಾ ನಟಿ ಅದಿತಿ ರಾವ್ ಹೈದರಿ ಸದ್ಯ ದಕ್ಷಿಣ ಭಾರತೀಯ ಸಿನಿಮಾರಂಗದಲ್ಲಿ ಬ್ಯುಸಿಯಾಗಿದ್ದಾರೆ. ತಮಿಳು ಮತ್ತು ತೆಲುಗಿನಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿರುವ ನಟಿ ಹೈದರಿ ಆಗಾಗ ಸ್ಟೈಲಿಶ್ ಫ್ಯಾಷನ್ ಮೂಲಕ ಅಭಿಮಾನಿಗಳ ಗಮನ ಸೆಳೆಯುತ್ತಿರುತ್ತಾರೆ.
ಬಹುಭಾಷಾ ನಟಿ ಅದಿತಿ ರಾವ್ ಹೈದರಿ ಸದ್ಯ ದಕ್ಷಿಣ ಭಾರತೀಯ ಸಿನಿಮಾರಂಗದಲ್ಲಿ ಬ್ಯುಸಿಯಾಗಿದ್ದಾರೆ. ತಮಿಳು ಮತ್ತು ತೆಲುಗಿನಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿರುವ ನಟಿ ಹೈದರಿ ಆಗಾಗ ಸ್ಟೈಲಿಶ್ ಫ್ಯಾಷನ್ ಮೂಲಕ ಅಭಿಮಾನಿಗಳ ಗಮನ ಸೆಳೆಯುತ್ತಿರುತ್ತಾರೆ.
ಅದಿತಿ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿರುವ ಫೋಟೋಗಳು ಅಭಿಮಾನಿಗಳ ನಿದ್ದೆ ಗೆಡಿಸಿದೆ. ಹೌದು, ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿರುವ ಅದಿತಿ ಸುಂದರ ಫೋಟೋಗಳನ್ನು ಇನ್ಸ್ಟಾಗ್ರಾಮ್‌ನಲ್ಲಿ ಸೇರ್ ಮಾಡಿದ್ದಾರೆ.
ಕೆಂಪು ಬಣ್ಣದ ಕಾಂಜಿವರಮ್ ಸೀರೆಯಲ್ಲಿ ಅದಿತಿ ಮಿಂಚುತ್ತಿದ್ದಾರೆ. ಕೆಂಪು ಬಣ್ಣದ ಗೋಲ್ಡ್ ಮತ್ತು ಹಸಿರು ಬಣ್ಣದ ಜರಿ ಸೀರೆಯಲ್ಲಿ ಅದಿತಿ ಸುಂದರವಾಗಿ ಕಾಣಿಸುತ್ತಿದ್ದಾರೆ. ಲಾಂಗ್ ಸ್ಲೀವ್ ಬ್ಲೌಸ್ ಧರಿಸಿದ್ದಾರೆ. ಸರಳ ಮೇಕಪ್‌ನಲ್ಲಿ ಕಾಣಿಸಿಕೊಂಡಿರುವ ಅದಿತಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ಅದಿತಿ ಆಗಾಗ ಸ್ಟೈಲಿಶ್ ಲುಕ್ ಮೂಲಕ ಅಭಿಮಾನಿಗಳ ಗಮನ ಸೆಳೆಯುತ್ತಿರುತ್ತಾರೆ. ಇತ್ತೀಚಿಗೆ ಕಾನ್ಸ್ ಫಿಲ್ಮ್ಸ್ ಫೆಸ್ಟ್‌ನಲ್ಲಿ ಭಾಗಿಯಾಗಿದ್ದ ಅದಿತಿ ಲುಕ್ ಆಕರ್ಷಕವಾಗಿತ್ತು.
ಅದಿತಿ ಇತ್ತೀಚಿಗೆ ತೆಲುಗು ಮತ್ತು ತಮಿಳು ಸಿನಿಮಾರಂಗದಲ್ಲಿ ಹೆಚ್ಚು ಬ್ಯುಸಿಯಾಗಿದ್ದಾರೆ. ಮಲಯಾಳಂ ಸಿನಿಮಾರಂಗದಿಂದ ಬಣ್ಣದ ಲೋಕದ ಪಯಣ ಪ್ರಾರಂಭಿಸಿದ್ದ ನಟಿ ಬಳಿಕ ಹಿಂದಿಯಲ್ಲಿ ಬ್ಯುಸಿಯಾಗಿದ್ದರು. ಸದ್ಯ ಬಾಲಿವುಡ್ ಜೊತೆಗೆ ದಕ್ಷಿಣ ಭಾರತದಲ್ಲೂ ಬ್ಯುಸಿಯಾಗಿದ್ದಾರೆ.
ಅದಿತಿ ಸಿನಿಮಾ ವಿಚಾರಕ್ಕೆ ಬರುವುದಾರೆ ಓ ಸಿನಾಮಿಕಾ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಸದ್ಯ ಅದಿತಿ ಗಾಂಧಿ ಟಾಕ್ಸ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸಿನಿಮಾ ಜೊತೆಗೆ ವೆಬ್ ಸೀರಿಸ್‌ನಲ್ಲೂ ನಟಿಸುತ್ತಿದ್ದಾರೆ. ಜುಬ್ಲಿ ಸೀರಿಸ್ ಮೂಲಕ ಅದಿತಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ.