- Home
- Entertainment
- Cine World
- Rashmika Mandanna ಬ್ಯೂಟಿಗೆ ಮುತ್ತಿಟ್ಟ ಸೂರ್ಯ: ಸೀರೆಲಿ ಹುಡುಗಿರ ನೋಡಲೇಬಾರದು ಎಂದ ಪಡ್ಡೆಹೈಕ್ಳು!
Rashmika Mandanna ಬ್ಯೂಟಿಗೆ ಮುತ್ತಿಟ್ಟ ಸೂರ್ಯ: ಸೀರೆಲಿ ಹುಡುಗಿರ ನೋಡಲೇಬಾರದು ಎಂದ ಪಡ್ಡೆಹೈಕ್ಳು!
ಕಿರಿಕ್ ನಟಿ ರಶ್ಮಿಕಾ ಮಂದಣ್ಣ ಬಗ್ಗೆ ಸಿನಿಮಾ ಅಭಿಮಾನಿಗಳಿಗೆ ವಿಶೇಷ ಪರಿಚಯದ ಅಗತ್ಯವಿಲ್ಲ. ಕೂರ್ಗ್‌ನ ಈ ಚೆಲುವೆ ಸಾಲು ಸಾಲು ಹಿಟ್ ಸಿನಿಮಾಗಳೊಂದಿಗೆ ಮುನ್ನುಗ್ಗುತ್ತಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಷನಲ್ ಕ್ರಶ್ ನಟಿ ರಶ್ಮಿಕಾ ಮಂದಣ್ಣ ಸಖತ್ ಸುದ್ದಿಯಲ್ಲಿದ್ದಾರೆ. ಆಗಾಗ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. ಸದ್ಯ ರಶ್ಮಿಕಾ ಮಂದಣ್ಣ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ.
ಕೂರ್ಗ್‌ನ ಚೆಲುವೆ ರಶ್ಮಿಕಾ ಮಂದಣ್ಣ ದುಬೈಗೆ ಹಾರಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರೋ ನಟಿ ರಶ್ಮಿಕಾ ಮಂದಣ್ಣ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬ್ಯೂಟಿಫುಲ್ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ.
ದುಬೈನಲ್ಲಿದ್ದ ನಟಿ ಚಂದವಾಗಿ ಸೀರೆಯುಟ್ಟು ಟ್ರೆಡಿಷನಲ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಕ್ರೀಮ್ ಕಲರ್ ಸೀರೆ, ಮಿರರ್ ವರ್ಕ್ ಬ್ಲೌಸ್ ಧರಿಸಿರುವ ರಶ್ಮಿಕಾ ಕ್ಯಾಮೆರಾ ನಾಚುವಂತೆ ಪೋಸ್ ಕೊಟ್ಟಿದ್ದಾರೆ. ನಟಿಯ ಅಂದ ಕಂಡು ಸೂರ್ಯ ಕೂಡ ಕಣ್ಣು ಹೊಡೆದಿದ್ದಾನೆ.
ಸಾಮಾಜಿಕ ಜಾಲತಾಣದಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ನಟಿ ರಶ್ಮಿಕಾರ ಈ ಹೊಸ ಫೋಟೋಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಸದ್ಯ ನಟಿ ರಶ್ಮಿಕಾ ಮಂದಣ್ಣ ಬಹುನಿರೀಕ್ಷಿತ ಸಿನಿಮಾ ಪುಷ್ಪ 2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.
ಬಾಲಿವುಡ್ ನಟ ರಣಬೀರ್ ಕಪೂರ್ ಜೊತೆಗಿನ ಅನಿಮಲ್ ಸಿನಿಮಾ ಶೀಘ್ರದಲ್ಲೇ ತೆರೆ ಮೇಲೆ ಬರಲಿದ್ದು, ರಶ್ಮಿಕಾ ಮಂದಣ್ಣರನ್ನು ಹೊಸ ಲುಕ್ನಲ್ಲಿ ನೋಡಲು ಅಭಿಮಾನಿಗಳು ಕಾತುರದಿಂದ ಕಾಯ್ತಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.