Yoga Day; ಯೋಗ ಫೋಟೋ ಶೇರ್ ಮಾಡಿದ ಅನುಷ್ಕಾ ಶರ್ಮಾ
ಇಂದು (ಜೂನ್ 20) ಯೋಗ ದಿನ. ಲಕ್ಷಾಂತರ ಮಂದಿ ಯೋಗ ದಿನ ಆಚರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಯೋಗ ಮಾಡುವ ಮೂಲಕ ಯೋಗ ದಿನ ಆಚರಿಸಿದ್ದಾರೆ. ಅನೇಕ ಸೆಲೆಬ್ರಿಟಿಗಳು ಸಹ ಯೋಗ ದಿನವನ್ನ ವಿಶೇಷವಾಗಿ ಆಚರಿಸಿದ್ದಾರೆ. ನಟಿ ಅನುಷ್ಕಾ ಶರ್ಮಾ ಹಳಯ ಫೋಟೋವನ್ನು ಹಂಚಿಕೊಂಡಿದ್ದಾರೆ.
ಇಂದು (ಜೂನ್ 20) ಯೋಗ ದಿನ. ಲಕ್ಷಾಂತರ ಮಂದಿ ಯೋಗ ದಿನ ಆಚರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಯೋಗ ಮಾಡುವ ಮೂಲಕ ಯೋಗ ದಿನ ಆಚರಿಸಿದ್ದಾರೆ. ಅನೇಕ ಸೆಲೆಬ್ರಿಟಿಗಳು ಸಹ ಯೋಗ ದಿನವನ್ನ ವಿಶೇಷವಾಗಿ ಆಚರಿಸಿದ್ದಾರೆ.
ಬಹುತೇಕ ಸಿನಿ ಸೆಲೆಬ್ರಿಟಿಗಳಿಗೆ ಯೋಗ ಜೀವನದ ಒಂದು ಭಾಗವಾಗಿದೆ. ಫಿಟ್ನೆಸ್, ಡಯಟ್, ಜಿಮ್ ಜೊತೆ ಯೋಗವನ್ನು ಮಾಡುತ್ತಾರೆ. ಅನೇಕ ನಟಿಯರು ಯೋಗ ಮಾಡುವ ಫೋಟೋವನ್ನು ಆಗಾಗ ಶೇರ್ ಮಾಡುತ್ತಾರೆ. ಇದೀಗ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಯೋಗ ಫೋಟೋವನ್ನು ಶೇರ್ ಮಾಡಿದ್ದಾರೆ.
ಅಂದಹಾಗೆ ಅನುಷ್ಕಾ ಶರ್ಮಾ ಯೋಗದಿನದ ವಿಶೇಷವಾಗಿ ಹಳೆಯ ಫೋಟೋಗಳನ್ನು ಶೇರ್ ಮಾಡಿದ್ದಾರೆ. ಫೋಟೋ ಶೇರ್ ಮಾಡಿ, 'ನನ್ನ ಯೋಗ ಪಯಣದ ಹಳೆಯ ಫೋಟೋಗಳು. ಸಂಬಂಧವು ಪ್ರಾರಂಭವಾಗಿ ಹಾಗೆ ಕೆಲವೊಮ್ಮೆ ನಿಂತುಹೋಗುತ್ತದೆ. ನನ್ನ ಜೀವನದ ಎಲ್ಲಾ ಹಂತದಲ್ಲೂ ನಾನು ಇದನ್ನ ನೋಡಿದ್ದೇನೆ' ಎಂದು ಬರೆದುಕೊಂಡಿದ್ದಾರೆ.
ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮಗಳಿಗೆ ಜನ್ಮ ನೀಡಿದ ಬಳಿಕ ಸಿನಿಮಾದಿಂದ ಗ್ಯಾಪ್ ತೆಗೆದುಕೊಂಡಿದ್ದರು. ಇದೀಗ ಮತ್ತೆ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಮಗಳು ವಮಿಕಾ ಆರೈಕೆಯಲ್ಲಿ ಬ್ಯುಸಿಯಾಗಿರವ ಅನುಷ್ಕಾ ಸಿನಿಮಾ ಕಡೆಯು ಗಮನ ಹರಿಸಿದ್ದಾರೆ. ಜೊತೆಗೆ ಹೊಸ ಸ್ಕ್ರಿಪ್ಟ್ ಆಯ್ಕೆಯಲ್ಲಿ ನಿರತರಾಗಿದ್ದಾರೆ.
ಇನ್ನು ಅನುಷ್ಕಾ ಶರ್ಮಾ ಸಿನಿಮಾ ವಿಚಾರಕ್ಕೆ ಬರುವುದಾರೆ ಕೊನೆಯದಾಗಿ ಅನುಷ್ಕಾ ಜೀರೋ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ 2018ರಲ್ಲಿ ರಿಲೀಸ್ ಆಗಿದ್ದು ಶಾರುಖ್ ಖಾನ್ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಹೀನಾಯ ಸೋಲು ಕಂಡಿತ್ತು.
anushka
ಈ ಸಿನಿಮಾ ಬಳಿಕ ಅನುಷ್ಕಾ ಸಿನಿಮಾ ಮತ್ತು ವೆಬ್ ಸೀರಿಸ್ ನಿರ್ಮಾಣದಲ್ಲಿ ಬ್ಯುಸಿಯಾಗಿದ್ದರು. ಪಾತಾಳ್ ಲೋಕ್, ಬುಲ್ ಬುಲ್ ಮತ್ತು ಎ ಮದರ್ಸ್ ರೇಜ್ ಸಿನಿಮಾಗಳಿಗೆ ಬಂಡವಾಳ ಹೂಡಿದ್ದಾರೆ. ಸದ್ಯ ಚಕ್ದ ಎಕ್ಸ್‌ಪ್ರೆಸ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕ್ರಿಕೆಟ್ ಲೆಜೆಂಡ್ ಜೂಲನ್ ಗೋಸ್ವಾಮಿ ಬಯೋಪಿಕ್ ಇದಾಗಿದ್ದು ಅನುಷ್ಕಾ ಜೂಲನ್ ಗೋಸ್ವಾಮಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.