Cannes 2022; ಪ್ರತಿಷ್ಠಿತ ಕಾನ್ ಚಿತ್ರೋತ್ಸವದಲ್ಲಿ ಸೀರೆಯಲ್ಲಿ ಮಿಂಚಿದ ದೀಪಿಕಾ
ಬಾಲಿವುಡ್ ಸ್ಟಾರ್ ನಟಿ ದೀಪಿಕಾ ಪಡುಕೋಣೆ ಪ್ರತಿಷ್ಠಿತ ಕಾನ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಸೀರೆಯಲ್ಲಿ ಮಿಂಚಿದ್ದಾರೆ. 75ನೇ ಕಾನ್ ಚಲನ ಚಿತ್ರೋತ್ಸವ ಅದ್ದೂರಿಯಾಗಿ ಪ್ರಾರಂಭವಾಗಿದ್ದು ನಟಿ ದೀಪಿಕಾ ಪಡುಕೋಣೆ ಉದ್ಘಾಟನಾ ಸಮಾರಂಭದಲ್ಲಿ ದೇಸಿ ಉಡುಗೆ ಧರಿಸಿ ಗಮನ ಸೆಳೆದಿದ್ದಾರೆ.

ಅಂದಹಾಗೆ ನಟಿ ದೀಪಿಕಾ ಈ ಬಾರಿಯ ಕಾನ್ ಫೆಸ್ಟಿವಲ್ ನಲ್ಲಿ ಜೂರಿಯಾಗಿ ಕಾಣಿಸಿಕೊಂಡಿದ್ದಾರೆ. ಮೊದಲ ದಿನವೇ ದೀಪಿಕಾ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ದೀಪಿಕಾ ಪಡುಕೋಣೆ ಈ ಬಾರಿ ಸೀರಿಯಲ್ಲಿ ಮಿಂಚಿದ್ದಾರೆ.
ಅಂತರಾಷ್ಟ್ರೀಯ ವೇದಿಕೆಯಲ್ಲಿ ದೀಪಿಕಾ ಕಪ್ಪು ಮತ್ತು ಗೋಲ್ಡನ್ ಬಣ್ಣದ ಸೀರೆಯಲ್ಲಿ ಕಂಗೊಳಿಸುವ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಅಂದಹಾಗೆ ದೀಪಿಕಾ ಧರಿಸಿದ ಸೀರೆ ಭಾರತದ ಖ್ಯಾತ ಡಿಸೈನರ್ ಸಬ್ಯಸಾಚಿ ಡಿಸೈನ್ ಮಾಡಿರುವ ಸೀರೆಯಾಗಿದೆ.
ಈ ಸೀರೆಯ ವಿಶೇಷ ಎಂದರೆ ಇದು ಬಂಗಾಳದ ಟೈಗರ್ ಯಿಂದ ಸ್ಫೂರ್ತಿ ಪಡೆಯಲಾಗಿದೆ ಎನ್ನಲಾಗಿದೆ. ಕಪ್ಪು ಮತ್ತು ಗೋಲ್ಡನ್ ಬಣ್ಣದ ಪಟ್ಟಿಗಳಿವೆ. ಇದು ಹುಲಿಯ ಹಾಗೆ ಕಾಣಿಸುತ್ತಿದೆ. ದೀಪಿಕಾ ಸೀರೆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಅಂದಹಾಗೆ ಕಾನ್ ಫೆಸ್ಟಿವಲ್ ಫೋಟೋಗಳನ್ನು ದೀಪಿಕಾ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.' ಸೀರೆಯೆ ಒಂದು ಕಥೆ ನಾನು ಅದನ್ನು ಹೇಳುವುದನ್ನು ನಿಲ್ಲಿಸಲ್ಲ' ಎಂದು ದೀಪಿಕಾ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಇನ್ನು ಸಿನಿಮಾಗಳ ವಿಚಾರಕ್ಕೆ ಬರುವುದಾರೆ ದೀಪಿಕಾ ಸದ್ಯ ಪಠಾಣ್ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ಶಾರುಖ್ ಖಾನ್ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಸರ್ಕಸ್ ಮತ್ತು ಪ್ರಭಾಸ್ ನಟನೆಯ ಹೊಸ ಸಿನಿಮಾದಲ್ಲಿ ದೀಪಿಕಾ ಬ್ಯುಸಿಯಾಗಿದ್ದಾರೆ.