ಟ್ರೇಲರ್ ರಿಲೀಸ್ ಆಗಿದ್ದಕ್ಕೆ ಪಾರ್ಟಿ ಮಾಡಿ ಸಂಭ್ರಮಿಸಿದ ಜಾನ್ವಿ ಕಪೂರ್; ಹಾಟ್ ಫೋಟೋ ವೈರಲ್
ಜಾನ್ವಿ ಇತ್ತೀಚಿಗಷ್ಟೆ ಮಿಲಿ ಟ್ರೈಲರ್ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಮಿಲಿ ಟ್ರೇಲರ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅದೇ ಖುಷಿಗೆ ಜಾನ್ವಿ ಕಪೂರ್ ಪಾರ್ಟಿ ಮಾಡಿದ್ದಾರೆ.
ಬಾಲಿವುಡ್ ನಟಿ ಜಾನ್ವಿ ಕಪೂರ್ ಒಂದಲ್ಲೊಂದು ವಿಚಾರಗಳ ಮೂಲಕ ಸುದ್ದಿಯಲ್ಲಿರುತ್ತಾರೆ. ಸಿನಿಮಾಗಿಂತ ಹೆಚ್ಚಾಗಿ ಜಾನ್ವಿ ಫೋಟೋ ಶೂಟ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿರುವ ಜಾನ್ವಿ ಆಗಾಗ ಸುಂದರ ಫೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ.
ಆಗಾಗ ಬೋಲ್ಡ್ ಫೋಟೋಶೂಟ್ ಮೂಲಕ ಮಿಂಚುವ ನಟಿ ಜಾನ್ವಿ ಇದೀಗ ಮತ್ತೊಂದು ಹಾಟ್ ಫೋಟೋಶೂಟ್ ಮೂಲಕ ಸದ್ದು ಮಾಡುತ್ತಿದ್ದಾರೆ. ಬಳಿ ಬಣ್ಣದ ಎಂಬ್ರಾಯಿಡರಿ ಇರುವ ಹಸಿರು ಬಣ್ಣದ ಲೆಹಂಗಾದಲ್ಲಿ ಜಾನ್ವಿ ಕಪೂರ್ ಮಿಂಚಿದ್ದಾರೆ. ಪಾರ್ಟಿ ಮಾಡಿ ಸಂಭ್ರಮಿಸಿರುವ ಫೋಟೋವನ್ನು ಜಾನ್ವಿ ಶೇರ್ ಮಾಡಿದ್ದಾರೆ.
ಅಂದಹಾಗೆ ಜಾನ್ವಿ ಇತ್ತೀಚಿಗಷ್ಟೆ ಮಿಲಿ ಟ್ರೈಲರ್ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಮಿಲಿ ಟ್ರೇಲರ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅದೇ ಖುಷಿಗೆ ಜಾನ್ವಿ ಕಪೂರ್ ಪಾರ್ಟಿ ಮಾಡಿದ್ದಾರೆ. ಪಾರ್ಟಿಯಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.
ಫೋಟೋಗಳನ್ನು ಶೇರ್ ಮಾಡಿ, ಮಿಲಿ ಟ್ರೇಲರ್ಗೆ ಪ್ರೀತಿ ತೋರಿಸಿದ್ದಕ್ಕೆ ನನ್ನ ಟ್ರೀಟ್ ಎಂದು ಹೇಳಿದ್ದಾರೆ. ಜಾನ್ವಿ ಕಪೂರ್ ಫೋಟೋಗೆ ಅಭಿಮಾನಿಗಳಿಂದ ಸಿಕ್ಕಾಪಟ್ಟೆ ಲೈಕ್ಸ್ ಮತ್ತು ಕಾಮೆಂಟ್ ಹರಿದು ಬಂದಿದೆ.
ಇನ್ನು ಸಿನಿಮಾ ವಿಚಾರಕ್ಕೆ ಬರುವುದಾದರೆ ಜಾನ್ವಿ ಕಪೂರ್ ಕೊನೆಯದಾಗಿ ಗುಡ್ ಲಕ್ ಜೆರ್ರಿ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದೆ. ಜಾನ್ವಿ ಸದ್ಯ ಮಿಲಿ ಸಿನಿಮಾ ಜೊತೆಗೆ ಮಿಸ್ಟರ್ ಅಂಡ್ ಮಿಸಸ್ ಮಹಿ, ಬವಾಲ್ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.
ಖ್ಯಾತ ನಟಿ ಶ್ರೀದೇವಿ ಪುತ್ರಿ ಜಾನ್ವಿ ಧಡಕ್ ಸಿನಿಮಾ ಮೂಲಕ ಮೊದಲ ಬಾರಿಗೆ ದೊಡ್ಡ ಪರದೆ ಮೇಲೆ ಮಿಂಚಿದರು. 2018ರಲ್ಲಿ ಜಾನ್ವಿ ಸಿನಿಮಾರಂಗ ಪ್ರವೇಶ ಪಡೆದರು. ತಾಯಿಯ ನಿಧನದ ಬಳಿಕ ಬಣ್ಣ ಹಚ್ಚಿದ ಜಾನ್ವಿಯನ್ನು ಅಭಿಮಾನಿಗಳು ಪ್ರೀತಿಯಿಂದ ಸ್ವಾಗತಿಸಿದರು. ಆದರೆ ಇದುವರೆಗೂ ಸಿನಿಮಾರಂಗದಲ್ಲಿ ದೊಡ್ಡ ಮಟ್ಟದ ಬ್ರೇಕ್ ಪಡೆಯಲು ಇನ್ನು ಸಾಧ್ಯವಾಗಿಲ್ಲ.