ಆಲಿಯಾ ರಣಬೀರ್ ದಾಖಲೆ ಮುರಿದ ಸಿದ್ಧಾರ್ಥ್ ಮಲ್ಹೋತ್ರ- ಕಿಯಾರಾ ದಂಪತಿ
ಸಿದ್ಧಾರ್ಥ್ ಮಲ್ಹೋತ್ರಾ (Sidharth Malhotra) ಮತ್ತು ಕಿಯಾರಾ ಅಡ್ವಾಣಿ (Kiara Advani) ಅಂತಿಮವಾಗಿ ಫೆಬ್ರವರಿ 7 ರಂದು ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಸಪ್ತಪದಿ ತುಳಿದರು. ಈ ಜೋಡಿ ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ಮದುವೆಯ ಫೋಟೋಗಳನ್ನು ಹಂಚಿಕೊಂಡಿದೆ. ಫೋಟೋಗಳನ್ನು ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ ಸಖತ್ ವೈರಲ್ ಆಗಿವೆ. ಈಗ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಅವರ ಮದುವೆಯ ಫೋಟೋಗಳು Instagram ನಲ್ಲಿ ಅತಿ ಹೆಚ್ಚು ಮೆಚ್ಚುಗೆ ಗಳಿಸಿದ ಸೆಲೆಬ್ರೆಟಿ ಮದುವೆ ಫೋಟೋಗಳಾಗಿವೆ.
ಬಹಳ ಕಾಲದಿಂದ ಸಂಬಂಧದಲ್ಲಿದ್ದ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಅಂತಿಮವಾಗಿ ಫೆಬ್ರವರಿ 7 ರಂದು ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ತಮ್ಮ ಕುಟುಂಬ ಮತ್ತು ಸ್ನೇಹಿತರ ನಡುವೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಶೇರ್ಷಾ ಚಿತ್ರದ ಸೆಟ್‌ನಲ್ಲಿ ಡೇಟಿಂಗ್ ಆರಂಭಿಸಿದ ಜೋಡಿ, ತಮ್ಮ ಮದುವೆಯ ಮೊದಲ ಫೋಟೋಗಳನ್ನು ಹಂಚಿಕೊಂಡಿದ್ದು ಸಖತ್ ವೈರಲ್ ಆಗಿವೆ.
ಅಷ್ಷೇ ಅಲ್ಲ ಫೋಟೋಗಳು ಕೆಲವೇ ಗಂಟೆಗಳಲ್ಲಿ ಲಕ್ಷಗಟ್ಟಲೇ ವ್ಯೂಸ್ ಪಡೆದು Instagram ನಲ್ಲಿ ಎರಡನೇ ಅತಿ ಹೆಚ್ಚು ವೀಕ್ಷಿಸಿದ ಮದುವೆಯ ಫೋಟೋಗಳಾಗಿವೆ. ಫೋಟೋಗಳು Instagram ನಲ್ಲಿ 19 ಮಿಲಿಯನ್ ವಿವ್ಯೂಸ್ ಪಡೆದಿವೆ.
ಇತ್ತೀಚಿನ ವರದಿಗಳ ಪ್ರಕಾರ ಸಿದ್ಧಾರ್ಥ್ ಮತ್ತು ಕಿಯಾರಾ ವಿವಾಹದ ಫೋಟೋಗಳು ಇನ್‌ಸ್ಟಾಗ್ರಾಮ್‌ನಲ್ಲಿ ಅತಿ ಹೆಚ್ಚು ಲೈಕ್ ಗಳಿಸಿವೆ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಟ್ರೆಂಡಿಂಗ್ ಈವೆಂಟ್‌ಗಳಲ್ಲಿ ಒಂದಾಗಿದೆ.
ಕಳೆದ ವರ್ಷ ಮದುವೆಯಾದ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಜೋಡಿಯನ್ನು ಹಿಂದಿಕ್ಕಿ ಈ ಪಟ್ಟಿಯಲ್ಲಿ ಸಿದ್ಧ್ ಮತ್ತು ಕಿಯಾರಾ ಮೊದಲ ಸ್ಥಾನ ಗಳಿಸಿದ್ದಾರೆ.
ಇದಕ್ಕೂ ಮೊದಲು ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಮದುವೆಯ ಫೋಟೋಗಳು 13.19 ಮಿಲಿಯನ್ ಲೈಕ್ಸ್ ಗಳಿಸಿ ದಾಖಲೆ ಬರೆದಿದ್ದರು.
ಕಳೆದ ವರ್ಷ ಹಸೆಮಣೆಯೇರಿದ ಇನ್ನೊಂದು ಜೋಡಿ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಮದುವೆಯ ಫೋಟೋಗಳು ಇನ್‌ಸ್ಟಾಗ್ರಾಮ್‌ನಲ್ಲಿ 12.6 ಮಿಲಿಯನ್ ಲೈಕ್‌ಗಳನ್ನು ಪಡೆದಿವೆ.