2024ರ ಲೋಕಸಭಾ ಚುನಾವಣೆಗೆ ನಟಿ ಮಾಧುರಿ ದೀಕ್ಷಿತ್ ಸ್ಪರ್ಧೆ ಸಾಧ್ಯತೆ, ಯಾವ ಪಕ್ಷ?
2024ರ ಲೋಕಸಭಾ ಚುನಾವಣಾ ತಯಾರಿಗಳು ನಡೆಯುತ್ತಿದೆ. ಹಲವು ಹಂತದ ಸಮೀಕ್ಷಾ ವರದಿಗಳು ಪಕ್ಷಗಳ ಕೈಸೇರಿದೆ. ಅಭ್ಯರ್ಥಿಗಳ ಆಯ್ಕೆ ಕಸರತ್ತುಗಳು ನಡೆಯುತ್ತಿದೆ. ಇದರ ನಡುವೆ ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಸ್ಪರ್ಧಿಸುತ್ತಿದ್ದಾರೆ ಅನ್ನೋ ಮಾತುಗಳು ಭಾರಿ ಚರ್ಚೆಯಾಗುತ್ತಿದೆ. ಇದಕ್ಕೆ ಭಾರತ ಹಾಗೂ ನ್ಯೂಡಿಲೆಂಡ್ ನಡುವಿನ ಸೆಮಿಫೈನಲ್ ಪಂದ್ಯ ಪುಷ್ಠಿ ನೀಡಿದೆ.
2024ರ ಲೋಕಸಭಾ ಚುನಾವಣೆಗೆ ಎಲ್ಲಾ ಪಕ್ಷಗಳು ತಯಾರಿ ನಡೆಸುತ್ತಿದೆ. ಯಾವ ನಾಯಕರನ್ನು ಎಲ್ಲಿಂದ ಕಣಕ್ಕಿಳಿಸಬೇಕು ಅನ್ನೋ ಲೆಕ್ಕಾಚಾರಗಳು ನಡೆಯುತ್ತಿದೆ. ಇದರ ನಡುವೆ ಹಲವು ಸೆಲೆಬ್ರಿಟಿಗಳನ್ನು ಪಕ್ಷಕ್ಕೆ ಕರೆತರುವು ಕುರಿತು ಚರ್ಚೆಗಳು ನಡೆಯುತ್ತಿದೆ.
ಈ ಬೆಳವಣಿಗೆ ನಡುವೆ ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ 2024ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ ಅನ್ನೋ ಮಾತುಗಳು ಭಾರಿ ಚರ್ಚೆಯಾಗುತ್ತಿದೆ.
ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯ ಮಾಧುರಿ ದೀಕ್ಷಿತ್ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ ಅನ್ನೋ ಚರ್ಚೆಗೆ ಮತ್ತಷ್ಟು ಪುಷ್ಠಿ ನೀಡಿದೆ.
ಮಾಧುರಿ ದೀಕ್ಷಿತ್ ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ ಅನ್ನೋ ಮಾತುಗಳು ಹಲವು ದಿನಗಳಿಂದ ಕೇಳಿಬರುತ್ತಿದೆ. ಆದರೆ ಸೆಮಿಫೈನಲ್ ಪಂದ್ಯದ ವೇಳೆ ಬಿಜೆಪಿ, ಎನ್‌ಸಿಪಿ ನಾಯಕರ ಜೊತೆ ಕಾಣಿಸಿಕೊಳ್ಳುವ ಮೂಲಕ ಚರ್ಚೆಗೆ ಪುಷ್ಠಿ ನೀಡಿದ್ದಾರೆ.
ಬಿಜೆಪಿ ನಾಯಕ ಆಶಿಶ್ ಸೆಲ್ಹಾರ್, ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್, ಎನ್‌ಸಿಪಿ ನಾಯಕ ಪ್ರಫುಲ್ ಪಟೇಲ್ ಜೊತೆಗೆ ಮಾಧುರೀ ದೀಕ್ಷಿತ್ ಸೆಮಿಫೈನಲ್ ಪಂದ್ಯ ವೀಕ್ಷಿಸಿದ್ದಾರೆ.
ಮಾಧುರಿ ದೀಕ್ಷಿತ್ ಮುಂಬೈ ವಾಯುವ್ಯ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಲಿದ್ದಾರೆ ಅನ್ನೋ ಹಲವು ಬಾರಿ ಚರ್ಚೆಯಾಗಿದೆ. ಇದೀಗ ಮತ್ತೆ ಶುರುವಾಗಿದೆ. ಈ ಹಿಂದೆ ಪುಣೆಯಿಂದ ಸ್ಪರ್ಧಿಸಲಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿತ್ತು.
ಮಾಧುರಿ ದೀಕ್ಷಿತ್ ಚುನಾವಣಾ ಸ್ಪರ್ಧೆ ಕುರಿತು ರಾಜಕೀಯ ಪಡಸಾಲೆಯಲ್ಲೂ ಚರ್ಚೆ ಶುರುವಾಗಿದೆ. ಆದರೆ ಈ ಕುರಿತು ಯಾವುದೇ ಅಧಿಕೃತ ಮಾಹಿತಿಗಳು ಲಭ್ಯವಿಲ್ಲ.
ಬಾಲಿವುಡ್‌ನ ಖ್ಯಾತ ನಟಿ ಮಾಧುರಿ ದೀಕ್ಷಿತ್ ಇದೀಗ ರಾಜಕೀಯದಲ್ಲಿ ಅದೃಷ್ಠ ಪರೀಕ್ಷೆ ಮುಂದಾಗಿದ್ದಾರಾ? ರಾಜಕೀಯ ನಾಯಕರ ಜೊತೆ ಕಾಣಿಸಿಕೊಂಡ ಬೆನ್ನಲ್ಲೇ ಈ ಚರ್ಚೆ ಜೋರಾಗಿದೆ.