ವೀಕೆಂಡ್ ಮೂಡ್‌ನಲ್ಲಿ KGF ಸುಂದರಿ; ಮೌನಿಯ ಮಾದಕ ನೋಟಕ್ಕೆ ಬೆರಗಾದ ಫ್ಯಾನ್ಸ್
ಮೌನಿ ರಾಯ್ ಶೇರ್ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಇದೀಗ ವೀಕೆಂಡ್ ಮೂಡ್ ನಲ್ಲಿರುವ ಮೌನಿ ಸಾಲು ಸಾಲು ಫೋಟೋಗಳನ್ನು ಶೇರ್ ಮಾಡಿದ್ದಾರೆ.
ನಟಿ ಮೌನಿ ರಾಯ್ ಸಿನಿಮಾಗಳ ಸಂಖ್ಯೆ ಕಡಿಮೆಯಾದರೂ ಸದಾ ಸುದ್ದಿಯಲ್ಲಿರುತ್ತಾರೆ. ಮೌನಿ ಕೊನೆಯದಾಗಿ ಬ್ರಹ್ಮಾಸ್ತ್ರ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಬ್ರಹ್ಮಾಸ್ತ್ರ ಸಿನಿಮಾದ ಸೂಪರ್ ಸಕ್ಸಸ್ ಬಳಿಕ ಮೌನಿ ರಾಯ್ ಸಿಕ್ಕಾಪಟ್ಟೆ ಸುತ್ತಾಡುತ್ತಿದ್ದಾರೆ. ದೇಶ-ವಿದೇಶ ಸುತ್ತಾಡುತ್ತಿರುವ ಮೌನಿ ಸುಂದರ ಫೋಟೋಗಳನ್ನು ಶೇರ್ ಮಾಡುತ್ತಿದ್ದಾರೆ.
ಇತ್ತೀಚಿಗಷ್ಟೆ ಮಾಲ್ಡೀವ್ಸ್‌ಗೆ ಹಾರಿದ್ದ ನಟಿ ಮೌನಿ ರಾಯ್ ಒಂದಿಷ್ಟು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದೀಗ ವೀಕೆಂಡ್ ಮೂಡ್ ನಲ್ಲಿರುವ ಮೌನಿ ಸಾಲು ಸಾಲು ಫೋಟೋಗಳನ್ನು ಶೇರ್ ಮಾಡಿದ್ದಾರೆ.
ಮೌನಿ ರಾಯ್ ಶೇರ್ ಮಾಡಿರುವ ತರಹೇವಾರಿ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ. ಹೂವಿನ ತೋಟದ ಮಧ್ಯೆ ನಿಂತಿರುವ ಕೆಜಿಎಫ್ ಸುಂದರಿಯ ಫೋಟೋಗಳು ಅಭಿಮಾನಿಗಳ ಗಮನ ಸೆಳೆಯುತ್ತಿವೆ.
ಅಂದಹಾಗೆ ಮೌನಿ ಪ್ರವಾಸಕ್ಕೆ ಹೋಗಿದ್ದ ಎಲ್ಲಾ ಫೋಟೋಗಳನ್ನು ಸೇರಿಸಿ ಇನ್ಸ್ಟಾಗ್ರಾಮ್ ನಲ್ಲಿ ಹಾಕಿದ್ದಾರೆ. ಫೋಟೋ ಜೊತೆಗೆ ನಾನು ನನ್ನ ಜೀವನದ ಬಗ್ಗೆ ಮಾತ್ರ ಯೋಚಿಸುತ್ತೇನೆ ಎಂದು ಹೇಳಿದ್ದಾರೆ. ವೀಕೆಂಡ್ ಮೂಡ್ ನಲ್ಲಿ ಮೌನಿ ಶೇರ್ ಮಾಡಿರುವ ಸುಂದರ ಫೋಟೋಗಳಿಗೆ ಅಭಿಮಾನಿಗಳಿಂದ ಸಿಕ್ಕಾಪಟ್ಟೆ ಲೈಕ್ಸ್ ಮತ್ತು ಕಾಮೆಂಟ್ ಹರಿದುಬರುತ್ತಿದೆ.
ಮೌನಿ ರಾಯ್ ತರಹೇವಾರಿ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಕೆಜಿಎಫ್ ಸುಂದರಿಯ ಫೋಟೋಗಳಿಗೆ ಅಭಿಮಾನಿಗಳು ತರಹೇವಾರಿ ಕಾಮೆಂಟ್ ಮಾಡುತ್ತಿದ್ದಾರೆ. ಪ್ರಿಟಿ, ಬ್ಯೂಟಿ, ಹಾಟ್ ಎಂದೆಲ್ಲಾ ಕಾಮೆಂಟ್ ಮಾಡುತ್ತಿದ್ದಾರೆ. ಸಿಕ್ಕಾಪಟ್ಟೆ ಲೈಕ್ಸ್ ಕೂಡ ಹರಿದುಬಂದಿದೆ.
ಮೌನಿ ನಟಿಸಿದ್ದ ಸಿನಿಮಾಗಳ ಸಂಖ್ಯೆ ಕಡಿಮೆ. ಆದರೂ ಸಿಕ್ಕಾಪಟ್ಟೆ ಖ್ಯಾತಿಗಳಿಸಿದ್ದಾರೆ. ಕೆಜಿಎಫ್-1 ಸಿನಿಮಾದ ಗಲಿ ಗಲಿ..ಹಾಡಿಗೆ ರಾಕಿಂಗ್ ಸ್ಟಾರ್ ಯಶ್ ಜೊತೆ ಹೆಜ್ಜೆ ಹಾಕಿದ್ದರು. ಈ ಹಾಡು ಮೌನಿಗೆ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟಿತ್ತು. ಬಳಿಕ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸದ್ಯ ಬ್ರಹ್ಮಾಸ್ತ್ರ ಸಿನಿಮಾ ಅಭಿಮಾನಿಗಳು ಮುಂದೆ ಬಂದಿದ್ದಾರೆ.
ಸಿನಿಮಾಗಿಂತ ಹೆಚ್ಚಾಗಿ ಮೌನಿ ಕಿರುತೆರೆಯಲ್ಲಿ ಫೇಮಸ್ ಆಗಿದ್ದರು. ನಾಗಿನ್ ಸೀರಿಸ್ ಮೌನಿ ವೃತ್ತಿ ಜೀವನದ ದಿಕ್ಕನ್ನೇ ಬದಲಾಯಿಸಿತು. ನಾಗಿನ್ ಧಾರಾವಾಹಿಯ 3 ಸೀರಿಸ್ ನಲ್ಲಿ ಮೌನಿ ಮಿಂಚಿದ್ದಾರೆ. ಸದ್ಯ ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದಾರೆ.