325 ಕೋಟಿ ರೂಪಾಯಿ ದೋಚಿದ ಪವನ್ ಕಲ್ಯಾಣ್ OG
ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ ಪ್ಯಾನ್ ಇಂಡಿಯಾ ಗ್ಯಾಂಗ್‌ಸ್ಟರ್ ಚಿತ್ರ OG. ಸುಜಿತ್ ನಿರ್ದೇಶನದಲ್ಲಿ, ಡಿವಿವಿ ಎಂಟರ್‌ಟೈನ್‌ಮೆಂಟ್ಸ್ ಬ್ಯಾನರ್ ನಿರ್ಮಾಣದಲ್ಲಿ ಈ ಚಿತ್ರ ಮೂಡಿಬರುತ್ತಿದೆ.

ಪವರ್ ಸ್ಟಾರ್ ಪವನ್ ಕಲ್ಯಾಣ್ ನಟಿಸುತ್ತಿರುವ ಪ್ಯಾನ್ ಇಂಡಿಯಾ ಗ್ಯಾಂಗ್‌ಸ್ಟರ್ ಚಿತ್ರ OG. ಸುಜಿತ್ ನಿರ್ದೇಶನದಲ್ಲಿ ಡಿವಿವಿ ಎಂಟರ್‌ಟೈನ್‌ಮೆಂಟ್ಸ್ ಬ್ಯಾನರ್ ನಿರ್ಮಾಣದಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಚಿತ್ರೀಕರಣ ಮುಕ್ತಾಯವಾಗಿದೆ ಎಂದು ಚಿತ್ರತಂಡ ಪ್ರಕಟಿಸಿದೆ. ಈ ಚಿತ್ರ ಆರಂಭವಾದಾಗಿನಿಂದ ನಿರೀಕ್ಷೆಗಳು ಹೆಚ್ಚುತ್ತಲೇ ಇವೆ.
ವಿಶ್ವಾದ್ಯಂತ ಥಿಯೇಟರ್ ಹಕ್ಕುಗಳು, ಸ್ಯಾಟಲೈಟ್, ಡಿಜಿಟಲ್ ಸ್ಟ್ರೀಮಿಂಗ್ ಹಕ್ಕುಗಳು ಸೇರಿದಂತೆ ಪ್ರೀ-ರಿಲೀಸ್ ಬಿಸಿನೆಸ್ 325 ಕೋಟಿ ರೂಪಾಯಿಗಳನ್ನು ದಾಟಿದೆ ಎಂದು ತಿಳಿದುಬಂದಿದೆ.
OG ಚಿತ್ರದ ಮೇಲಿನ ಕ್ರೇಜ್‌ಗೆ ಇದು ಸಾಕ್ಷಿ. ಈಗಾಗಲೇ ಬಿಡುಗಡೆಯಾಗಿರುವ ಪೋಸ್ಟರ್‌ಗಳು, ಟೀಸರ್ ಸಿನಿಮಾ ಮೇಲಿನ ನಿರೀಕ್ಷೆಗಳನ್ನು ಹೆಚ್ಚಿಸಿವೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

