ಮುಂಬೈನಲ್ಲಿ ರಶ್ಮಿಕಾ ಹವಾ; 'ಗುಡ್‌ಬೈ' ಪ್ರಮೋಷನ್‌ನಲ್ಲಿ ಕಾಣಿಸಿಕೊಂಡಿದ್ದು ಹೀಗೆ
ರಶ್ಮಿಕಾ ಮಂದಣ್ಣ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸೌತ್ ಮತ್ತು ಬಾಲಿವುಡ್ ಎರಡು ಕಡೆ ರಶ್ಮಿಕಾ ಸಿಕ್ಕಾಪಟ್ಟೆ ಬ್ಯುಸಿ. ತೆಲುಗು, ತಮಿಳು ಮತ್ತೆ ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿರುವ ರಶ್ಮಿಕಾ ಮೊದಲ ಬಾಲಿವುಡ್ ಸಿನಿಮಾ ರಿಲೀಸ್‌ಗೆ ಸಜ್ಜಾಗಿದ್ದಾರೆ.
ರಶ್ಮಿಕಾ ಮಂದಣ್ಣ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸೌತ್ ಮತ್ತು ಬಾಲಿವುಡ್ ಎರಡು ಕಡೆ ರಶ್ಮಿಕಾ ಸಿಕ್ಕಾಪಟ್ಟೆ ಬ್ಯುಸಿ. ತೆಲುಗು, ತಮಿಳು ಮತ್ತೆ ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿರುವ ರಶ್ಮಿಕಾ ಮೊದಲ ಬಾಲಿವುಡ್ ಸಿನಿಮಾ ರಿಲೀಸ್‌ಗೆ ಸಜ್ಜಾಗಿದ್ದಾರೆ.
ಸೌತ್ ಬ್ಯೂಟಿ ಹಿಂದಿಯಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಇದುವರೆಗೂ ಒಂದು ಹಿಂದಿ ಸಿನಿಮಾ ರಿಲೀಸ್ ಆಗಿಲ್ಲ. ಮಿಷನ್ ಮಜ್ನು ಸಿನಿಮಾ ಮೂಲಕ ಬಾಲಿವುಡ್‌ಗೆ ಎಂಟ್ರಿ ರಶ್ಮಿಕಾ ಇನ್ನು ದೊಡ್ಡ ಪರದೆ ಮೇಲೆ ಮಿಂಚಿಲ್ಲ. ಹಾಗಾಗಿ ಮೊದಲ ಹಿಂದಿ ಸಿನಿಮಾ ರಿಲೀಸ್‌ಗೆ ರಶ್ಮಿಕಾ ಸಖತ್ ಉತ್ಸುಕರಾಗಿದ್ದಾರೆ.
ಅಂದಹಾಗೆ ರಶ್ಮಿಕಾ ಸದ್ಯ ಗುಡ್ ಬೈ ಸಿನಿಮಾ ರಿಲೀಸ್‌ಗೆ ಎದುರು ನೋಡುತ್ತಿದ್ದಾರೆ. ಇತ್ತೀಚಿಗಷ್ಟೆ ಗುಡ್ ಬೈ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಂದಹಾಗೆ ಈ ಸಿನಿಮಾದಲ್ಲಿ ಬಿಗ್ ಬಿ ಅಮಿತಾಭ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಗುಡ್ ಬೈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಬಿಗ್ ಬಿ ಅಮಿತಾಭ್ ಮತ್ತು ನೀನಾ ಗುಪ್ತ ಮಗಳಾಗಿ ನಟಿಸದ್ದಾರೆ. ಈಗಾಗಲೇ ರಿಲೀಸ್ ಆಗಿರುವ ಟ್ರೈಲರ್ ಅಭಿಮಾನಿಗಳ ಕುತೂಹಲ ಹೆಚ್ಚಿಸಿದೆ. ಸದ್ಯ ಸಿನಿಮಾದ ಪ್ರಮೋಷನ್ ಕಾರ್ಯ ಜೋರಾಗಿ ನಡೆಯುತ್ತಿದೆ. ರಶ್ಮಿಕಾ ಮುಂಬೈನಲ್ಲಿ ಸಿನಿಮಾದ ಪ್ರಮೋಷನ್ ಮಾಡುತ್ತಿದ್ದಾರೆ.
ಇತ್ತೀಚಿಗೆ ರಶ್ಮಿಕಾ ಮುಂಬೈನ ಜುಹುವಿನಲ್ಲಿ ಕಾಣಿಸಿಕೊಂಡಿದ್ದಾರೆ. ಪಿಂಕ್ ಬಣ್ಣದ ಮಿನಿ ಧರಿಸಿದ್ದ ರಶ್ಮಿಕಾ ಲುಕ್ ಅಭಿಮಾನಿಗಳ ಹೃದಯ ಗೆದ್ದಿದೆ. ಪಾಪರಾಜಿಗಳ ಮುಂದೆ ಹಾಜರಾದ ರಶ್ಮಿಕಾ ನಗುತ್ತಾ ಪೋಸ್ ನೀಡಿದ್ದಾರೆ. ಕನ್ನಡಕ ಹಾಕಿ ಪೋಸ್ ನೀಡಿದ ರಶ್ಮಿಕಾ ಕನ್ನಡಕ ತೆಗೆದು ಕ್ಯಾಮರಾ ನೋಡುವಂತೆ ಹೇಳಿದ್ದಾರೆ. ಬಳಿಕ ರಶ್ಮಿಕಾ ಕನ್ನಡಕ ತೆಗೆದು ಪೋಸ್ ನೀಡಿದ್ದಾರೆ.
ಗುಡ್ ಬೈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಿಗ್ ಬಿ ಜೊತೆ ನಟಿಸುವ ಅವಕಾಶ ಗಿಟ್ಟಿಸಿಕೊಂಡಿರುವ ರಶ್ಮಿಕಾರನ್ನು ನೋಡಲು ಅಭಿಮಾನಿಗಳ ಸಹ ಕಾತರದಿಂದ ಕಾಯುತ್ತಿದ್ದಾರೆ.
ಇನ್ನು ಹಿಂದಿಯಲ್ಲಿ ರಶ್ಮಿಕಾ ಮಿಷನ್ ಮಜ್ನು ಸಿನಿಮಾದ ಚಿತ್ರೀಕರಣ ಸಹ ಮುಗಿಸಿದ್ದಾರೆ. ಆ ಸಿನಿಮಾ ಕೂಡ ರಿಲೀಸ್ ಆಗಬೇಕಿದೆ. ಸದ್ಯ ರಣಬೀರ್ ಕಪೂರ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಾ ಬಳಿಕ ಟೈಗರ್ ಶ್ರಾಫ್ ಜೊತೆ ಮತ್ತೊಂದು ಹಿಂದಿ ಸಿನಿಮಾದಲ್ಲಿ ನಟಿಸುವ ಸಾಧ್ಯತೆ ಇದೆ.
Rashmika mandanna
ತೆಲುಗಿನಲ್ಲಿ ರಶ್ಮಿಕಾ ಬಹುನಿರೀಕ್ಷೆಯ ಪುಷ್ಪ-2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದಲ್ಲಿ ರಶ್ಮಿಕಾ , ಅಲ್ಲು ಅರ್ಜುನ್ ಪತ್ನಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಮೊದಲ ಭಾಗದಲ್ಲಿ ಅಭಿಮಾನಿಗಳನ್ನು ಮೋಡಿ ಮಾಡಿದ್ದ ರಶ್ಮಿಕಾ ಎರಡನೇ ಭಾಗದಲ್ಲಿ ಹೇಗೆ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಕುತೂಹಲ ಹೆಚ್ಚಾಗಿದೆ.