- Home
- Entertainment
- Cine World
- ₹835 ಕೋಟಿ ಬಜೆಟ್ ರಾಮಾಯಣದಲ್ಲಿ ರಣಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ಸಂಭಾವನೆ ಎಷ್ಟು?
₹835 ಕೋಟಿ ಬಜೆಟ್ ರಾಮಾಯಣದಲ್ಲಿ ರಣಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ಸಂಭಾವನೆ ಎಷ್ಟು?
ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಬಜೆಟ್‌ನ ಸಿನಿಮಾಗಳಲ್ಲಿ ಒಂದಾದ ರಾಮಾಯಣ ಚಿತ್ರಕ್ಕೆ 835 ಕೋಟಿ ವೆಚ್ಚ ಮಾಡಲಾಗುತ್ತಿದೆ. ಈ ಸಿನಿಮಾದಲ್ಲಿ ಯಾರು ಹೆಚ್ಚು ಸಂಭಾವನೆ ಪಡೆಯುತ್ತಿದ್ದಾರೆ? ರಣಬೀರ್ ಕಪೂರ್, ಯಶ್ ಹಾಗೂ ಸಾಯಿ ಪಲ್ಲವಿ ಸೇರಿ ವಿವಿಧ ನಟರಿಗೆ ಎಷ್ಟು ಸಂಭಾವನೆ ನೀಡಲಾಗುತ್ತಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ..

ನಿತೇಶ್ ತಿವಾರಿ ಅವರ ಪೌರಾಣಿಕ ಚಿತ್ರ ರಾಮಾಯಣದ ಟೈಟಲ್ ಅನೌನ್ಸ್ಮೆಂಟ್ ವಿಡಿಯೋಗೆ ಇತ್ತೀಚೆಗೆ ಸೆನ್ಸಾರ್ ಮಂಡಳಿಯಿಂದ ಅನುಮೋದನೆ ದೊರೆತಿದೆ. ಈ ಚಿತ್ರ 835 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ.
ರಣಬೀರ್ ಕಪೂರ್
ರಾಮಾಯಣ ಸಿನಿಮಾದಲ್ಲಿ ರಣಬೀರ್ ಕಪೂರ್ ರಾಮನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಮೊದಲ ಭಾಗಕ್ಕೆ 75 ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಯಶ್
ಇದೇ ಸಿನಿಮಾದಲ್ಲಿ ರಾಮನ ವಿರುದ್ಧದ ಪಾತ್ರವಾದ ರಾವಣನ ಪಾತ್ರದಲ್ಲಿ ಯಶ್ ಕಾಣಿಸಿಕೊಳ್ಳಲಿದ್ದಾರೆ. ಇವರು ಕೂಡ ಮೊದಲ ಭಾಗಕ್ಕೆ 50 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಸನ್ನಿ ಡಿಯೋಲ್
ಸನ್ನಿ ಡಿಯೋಲ್ ಹನುಮಂತನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇವರು 20 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಸಾಯಿ ಪಲ್ಲವಿ
ರಾಮಾಯಣ ಸಿನಿಮಾದಲ್ಲಿ ನಟಿ ಸಾಯಿ ಪಲ್ಲವಿ ಸೀತೆಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಪಾತ್ರಕ್ಕೆ ಅವರು 3 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ರವಿ ದುಬೆ
ರಾಮನ ತಮ್ಮನಾಗಿ ರವಿ ದುಬೆ ಅವರು ಲಕ್ಷ್ಮಣನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇವರು 2-4 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ರಾಕುಲ್ ಪ್ರೀತ್ ಸಿಂಗ್
ರಕುಲ್ ಪ್ರೀತ್ ಸಿಂಗ್ ಶೂರ್ಪಣಖಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. 1-2 ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಕುನಾಲ್ ಕಪೂರ್
ಕುನಾಲ್ ಕಪೂರ್ ಇಂದ್ರನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇವರು 90 ಲಕ್ಷದಿಂದ 1.2 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.