ಮುಂಬೈನಲ್ಲಿ ಕಾಣಿಸಿಕೊಂಡ ರಶ್ಮಿಕಾಗೆ 'ಎಲ್ಲೋ ಎಲ್ಲೋ ಡರ್ಟಿ ಫೆಲೊ' ಎಂದ ನೆಟ್ಟಿಗರು
ರಶ್ಮಿಕಾ ಸದ್ಯ ಮುಂಬೈನಲ್ಲಿದ್ದಾರೆ. ಮುಂಬೈನ ಜುಹುನಲ್ಲಿ ರಶ್ಮಿಕಾ ಪಾಪರಾಜಿಗಳ ಕ್ಯಾಮರಾಗೆ ಸೆರೆಯಾಗಿದ್ದಾರೆ. ಹಳದಿ ಬಣ್ಣದ ಡ್ರೆಸ್‌ನಲ್ಲಿ ರಶ್ಮಿಕಾ ಕಾಣಿಸಿಕೊಂಡಿದ್ದಾರೆ. ಕ್ಯಾಮರಾ ಕಡೆ ಕೈ ಬೀಸುತ್ತಾ ಅಲ್ಲಿಂದ ಹೊರಟಿದ್ದಾರೆ.
ನಟಿ ರಶ್ಮಿಕಾ ಮಂದಣ್ಣ ಸದ್ಯ ಸಾಲ ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ತೆಲುಗು, ತಮಿಳು, ಹಿಂದಿಯಲ್ಲಿ ಬ್ಯುಸಿಯಾಗಿರುವ ರಶ್ಮಿಕಾ ಬಾಲಿವುಡ್ ಮತ್ತು ಸೌತ್ ಅಂತ ಓಡಾಡುತ್ತಿರುತ್ತಾರೆ. ಸದ್ಯ ರಶ್ಮಿಕಾ ಮುಂಬೈನಲ್ಲಿದ್ದಾರೆ.
ರಶ್ಮಿಕಾ ಹಿಂದಿಯಲ್ಲಿ ಸದ್ಯ ಅನಿಮಲ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ರಣಬೀರ್ ಕಪೂರ್ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿದ್ದು ಕಾಶ್ಮೀರದಲ್ಲಿ ಚಿತ್ರೀಕರಣ ಮಾಡಿದ್ದರು.
ಮಿಷನ್ ಮಜ್ನು ಸಿನಿಮಾ ಮೂಲಕ ಬಾಲಿವುಡ್‌ಗೆ ಎಂಟ್ರಿ ಕೊಟ್ಟ ರಶ್ಮಿಕಾ ಈ ಸಿನಿಮಾ ರಿಲೀಸ್‌ಗೂ ಮೊದಲೇ ಇನ್ನೆರಡು ಸಿನಿಮಾಗಳಲ್ಲಿ ಬ್ಯುಸಿಯಾದರು. ಮಿಷನ್ ಮಜ್ನು ಚಿತ್ರೀಕರಣ ಮುಗಿಸಿರುವ ರಶ್ಮಿಕಾ ಬಿಡುಗಡೆಗೆ ಕಾಯುತ್ತಿದ್ದಾರೆ. ಇನ್ನು ಅಮಿತಾಬ್ ಜೊತೆ ಗುಡ್ ಬೈ ಸಿನಿಮಾದಲ್ಲೂ ನಟಿಸಿದ್ದಾರೆ.
ಇತ್ತೀಚಿಗಷ್ಟೆ ರಶ್ಮಿಕಾ ಗುಡ್ ಬೈ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ಗುಡ್ ಬೈ ಚಿತ್ರೀಕರಣ ಮುಗಿಸಿದ ಬಗ್ಗೆ ರಶ್ಮಿಕಾ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದರು. ತಂಡದ ಜೊತೆ ಫೋಟೋ ಹಂಚಿಕೊಂಡು ಸಂತಸ ಪಟ್ಟಿದ್ದಾರೆ.
ರಶ್ಮಿಕಾ ಸದ್ಯ ಮುಂಬೈನಲ್ಲಿದ್ದಾರೆ. ಮುಂಬೈನ ಜುಹುನಲ್ಲಿ ರಶ್ಮಿಕಾ ಪಾಪರಾಜಿಗಳಿಗೆ ಸೆರೆಯಾಗಿದ್ದಾರೆ. ಹಳದಿ ಬಣ್ಣದ ಡ್ರೆಸ್‌ನಲ್ಲಿ ರಶ್ಮಿಕಾ ಕಾಣಿಸಿಕೊಂಡಿದ್ದಾರೆ. ಕ್ಯಾಮರಾ ಕಡೆ ಕೈ ಬೀಸುತ್ತಾ ಅಲ್ಲಿಂದ ಹೊರಟಿದ್ದಾರೆ.
ರಶ್ಮಿಕಾರನ್ನು ಹಳದಿ ಬಣ್ಣದ ಡ್ರೆಸ್‌ನಲ್ಲಿ ನೋಡಿದ ಅಭಿಮಾನಿಗಳು ತರಹೇವಾರಿ ಕಾಮೆಂಟ್ ಮಾಡುತ್ತಿದ್ದಾರೆ. ನೆಟ್ಟಿಗನೊಬ್ಬ ಎಲ್ಲೋ ಎಲ್ಲೋ ಡರ್ಟಿ ಫೆಲೊ ಎಂದು ಕಾಮೆಂಟ್ ಮಾಡಿದ್ದಾರೆ. ರಶ್ಮಿಕಾ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ರಶ್ಮಿಕಾ ಸದಾ ಸುದ್ದಿಯಲ್ಲಿರುವ ನಟಿ. ಬಾಲಿವುಡ್, ಸೌತ್ ಅಂತ ಬ್ಯುಸಿಯಾಗಿರುವ ರಶ್ಮಿಕಾ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ತೆಲುಗಿನಲ್ಲಿ ಪುಷ್ಪ-2 ಸಿನಿಮಾಗಾಗಿ ಎದುರುನೋಡಿತ್ತಿದ್ದಾರೆ. ಇನ್ನು ತಮಿಳಿನಲ್ಲಿ ನಟ ವಿಜಯ್ ಜೊತೆ ತೆರೆಹಂಚಿಕೊಳ್ಳುತ್ತಿದ್ದಾರೆ.