ಬೋಲ್ಡ್ ಆಗಿ ಕಾಣಿಸಿಕೊಂಡ ಮಾಜಿ ವಿಶ್ವಸುಂದರಿ ಸುಶ್ಮಿತಾ ಸೇನ್; ಇಲ್ಲಿವೆ ಫೋಟೋಗಳು
ಮಾಜಿ ವಿಶ್ವಸುಂದರಿ ಸುಶ್ಮಿತಾ ಸೇನ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಅಭಿಮಾನಿಗಳು ಲೇಡಿ ಬಾಸ್ ಎಂದು ಹೇಳಿದ್ದಾರೆ.
sushmita sen
ಭಾರತದ ಮೊದಲ ವಿಶ್ವ ಸುಂದರಿ ಸುಶ್ಮಿತಾ ಸೇನ್ ಪ್ರತಿ ಬಾರಿಯೂ ತಮ್ಮ ಫ್ಯಾಷನ್ ಸೆನ್ಸ್ ಮೂಲಕ ಗಮನ ಸೆಳೆಯುತ್ತಿರುತ್ತಾರೆ. ಇದೀಗ ಮತ್ತೊಮ್ಮೆ ಸುಶ್ಮಿತಾ ಸೇನ್ ಅಭಿಮಾನಿಗಳ ಸೆಳೆದಿದ್ದಾರೆ.
ಇತ್ತೀಚೆಗಷ್ಟೆ ಮುಂಬೈನಲ್ಲಿ ನಡೆದ ಫ್ಯಾಷನ್ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ನಟಿ ಸುಶ್ಮಿತಾ ಸೇನ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು. ಸುಶ್ಮಿತಾ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಸುಶ್ಮಿತಾ ಫ್ಯಾಷನ್ ಕಾರ್ಯಕ್ರಮಕ್ಕೆ ಮಾಜಿ ಬಾಯ್‌ಫ್ರೆಂಡ್ ರೋಶ್ಮನ್ ಮತ್ತು ಮಗಳು ಅಲಿಸ್ಹ್ ಜೊತೆ ಫ್ಯಾಷನ್ ಕಾರ್ಯಕ್ರಮಕ್ಕೆ ಎಂಟ್ರಿ ಕೊಟ್ಟಿದ್ದರು.
ಸುಶ್ಮಿತಾ ಲೇಡಿ ಬಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದರು. ವೆಲ್ವೆಟ್ ಬ್ಲೇಜರ್ ಮತ್ತು ಮ್ಯಾಚಿಂಗ್ ಪ್ಯಾಂಟ್ ಧರಿಸಿದ್ದರು. ಸುಶ್ಮಿತಾ ಫೋಟೋಗಳು ಮತ್ತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಸುಶ್ಮಿತಾ ಕಾರ್ಯಕ್ರಮಕ್ಕೆ ಎಂಟ್ರಿ ಕೊಡುತ್ತಿದ್ದಂತೆ ಪಾಪರಾಜಿಗಳ ಕ್ಯಾಮರಾಗೆ ಪೋಸ್ ನೀಡಿದರು. ಮಗಳು ಮಾತ್ತು ಮಾಜಿ ಬಾಯ್ ಫ್ರೆಂಡ್ ಜೊತೆ ಕ್ಯಾಮರಾಗೆ ಪೋಸ್ ನೀಡಿದರು.
ಸುಶ್ಮಿತಾ ಸದ್ಯ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ಹೃದಯಾಘಾತಕ್ಕೆ ಒಳಗಾಗಿದ್ದ ಸುಶ್ಮಿತಾ ವಿಶ್ರಾಂತಿಯಲ್ಲಿದ್ದರು. ಇದೀಗ ಚೇತರಿಸಿಕೊಂಡಿದ್ದು ಮತ್ತು ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಆರ್ಯಾ-3 ಸೀಸನ್ ಶೂಟಿಂಗ್ ಪ್ರಾರಂಭಿಸಿದ್ದಾರೆ.