ಟಾಕ್ಸಿಕ್ ಸಿನಿಮಾ ಕಾಸ್ಟ್ ಬಹಿರಂಗ: ಯಶ್ ಜೊತೆಗೆ ಐವರು ಸ್ಟಾರ್ ಹೀರೋಯಿನ್ಸ್
ಸೂಪರ್ ಹೀರೋ ಸಿನಿಮಾಗಳಲ್ಲಿ ನಾಯಕಿಯರನ್ನು ಗೊಂಬೆಗಳಂತೆ ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪಕ್ಕೆ ಪ್ರತಿಯಾಗಿ ‘ಟಾಕ್ಸಿಕ್’ ಹೊಸ ಮಾದರಿ ನಿರ್ಮಿಸಲು ಮುಂದಾಗಿದೆ.

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾಕ್ಕೆ ರುಕ್ಮಿಣಿ ವಸಂತ್ ಎಂಟ್ರಿ ಕೊಟ್ಟದ್ದು ಸುದ್ದಿಯಾದ ಬೆನ್ನಲ್ಲೇ, ಈ ಸಿನಿಮಾಕ್ಕೆ ಐವರು ನಾಯಕಿಯರು ಎಂಬ ವಿಚಾರ ಬಹಿರಂಗಗೊಂಡಿದೆ.
ಸೂಪರ್ ಹೀರೋ ಸಿನಿಮಾಗಳಲ್ಲಿ ನಾಯಕಿಯರನ್ನು ಗೊಂಬೆಗಳಂತೆ ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪಕ್ಕೆ ಪ್ರತಿಯಾಗಿ ‘ಟಾಕ್ಸಿಕ್’ ಹೊಸ ಮಾದರಿ ನಿರ್ಮಿಸಲು ಮುಂದಾಗಿದೆ.
ಭಾರತೀಯ ಚಿತ್ರರಂಗದ ಪ್ರಸಿದ್ಧ ಐವರು ನಾಯಕಿಯರನ್ನು ಈ ಚಿತ್ರಕ್ಕೆ ಸೇರ್ಪಡೆಗೊಳಿಸಲಾಗಿದ್ದು, ಐದೂ ಪಾತ್ರಗಳೂ ಪ್ರಬಲವಾಗಿವೆ ಎನ್ನಲಾಗಿದೆ. ರುಕ್ಮಿಣಿ ವಸಂತ್, ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ, ನಯನತಾರಾ, ಹ್ಯೂಮಾ ಖುರೇಷಿ ನಾಯಕಿಯರಾಗಿ ಅಭಿನಯ ಮೆರೆಯಲಿದ್ದಾರೆ.
ಕನ್ನಡದ ಹುಡುಗಿ ರುಕ್ಮಿಣಿ ವಸಂತ್ ಈ ಸಿನಿಮಾದ ನಿರ್ಣಾಯಕ ಪಾತ್ರವೊಂದರಲ್ಲಿ ನಟಿಸುತ್ತಿದ್ದು, ಅವರ ಪಾತ್ರ ಆ್ಯಕ್ಷನ್ ಹಾಗೂ ಡ್ರಾಮಾಗಳಿಂದ ತುಂಬಿರಲಿದೆ ಎಂದು ಮೂಲಗಳು ತಿಳಿಸಿವೆ. ಈ ಬಹುನಿರೀಕ್ಷಿತ ಚಿತ್ರ ಮಾರ್ಚ್ 19, 2026ಕ್ಕೆ ತೆರೆ ಕಾಣಲಿದೆ.
ವೆಂಕಟ್ ನಾರಾಯಣ ಅವರ ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಯಶ್ ಅವರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಜಂಟಿಯಾಗಿ ನಿರ್ಮಿಸಿರುವ ಈ ಚಿತ್ರವನ್ನು ಭಾರಿ ಬಜೆಟ್‌ನಲ್ಲಿ ನಿರ್ಮಿಸಲಾಗುತ್ತಿದೆ.
ಇಂಗ್ಲಿಷ್ ಮತ್ತು ಕನ್ನಡ ಎರಡರಲ್ಲೂ ಚಿತ್ರೀಕರಿಸಲಾಗಿದ್ದು, ಬಹು ಭಾಷೆಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಟಾಕ್ಸಿಕ್ ಚಿತ್ರಕ್ಕೆ ರಾಜೀವ್ ರೈ ಅವರ ಛಾಯಾಗ್ರಹಣವಿದೆ. ಮುಂದಿನ ವರ್ಷ ಮಾರ್ಚ್ 19 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.