- Home
- Entertainment
- Cine World
- ಭಕ್ತಿಯ ಭಾವದ ಜೊತೆಗೆ ಸಿನಿಮ್ಯಾಟಿಕ್ ಅನುಭವ.. ಕಣ್ಣಪ್ಪ ಟ್ರೇಲರ್ ಬಿಡುಗಡೆ ಮಾಡಿದ ಸುದೀಪ್
ಭಕ್ತಿಯ ಭಾವದ ಜೊತೆಗೆ ಸಿನಿಮ್ಯಾಟಿಕ್ ಅನುಭವ.. ಕಣ್ಣಪ್ಪ ಟ್ರೇಲರ್ ಬಿಡುಗಡೆ ಮಾಡಿದ ಸುದೀಪ್
‘ಇದು ಭಕ್ತಿಯ ಭಾವದ ಜೊತೆಗೆ ಸಿನಿಮ್ಯಾಟಿಕ್ ಅನುಭವ ಕಟ್ಟಿಕೊಡುವ ಚಿತ್ರ’ ಎಂದು ಸುದೀಪ್ ಹೇಳಿದ್ದಾರೆ. ವಿಷ್ಣು ಮಂಚು ನಟನೆಯ ‘ಕಣ್ಣಪ್ಪ’ ಸಿನಿಮಾದ ಟ್ರೇಲರ್ ಅನ್ನು ಸುದೀಪ್ ಬಿಡುಗಡೆ ಮಾಡಿ ಶುಭಹಾರೈಸಿದ್ದಾರೆ.

ವಿಷ್ಣು ಮಂಚು ನಟನೆಯ ‘ಕಣ್ಣಪ್ಪ’ ಸಿನಿಮಾದ ಟ್ರೇಲರ್ ಅನ್ನು ಸುದೀಪ್ ಬಿಡುಗಡೆ ಮಾಡಿ ಶುಭಹಾರೈಸಿದ್ದಾರೆ. ‘ಇದು ಭಕ್ತಿಯ ಭಾವದ ಜೊತೆಗೆ ಸಿನಿಮ್ಯಾಟಿಕ್ ಅನುಭವ ಕಟ್ಟಿಕೊಡುವ ಚಿತ್ರ’ ಎಂದು ಸುದೀಪ್ ಹೇಳಿದ್ದಾರೆ.
ಈ ಸಿನಿಮಾ ಜೂ.27ಕ್ಕೆ ತೆರೆಗೆ ಬರಲಿದೆ. ಈ ಹಿಂದೆ ಡಾ ರಾಜ್‌ಕುಮಾರ್ ನಟನೆಯಲ್ಲಿ ಬಹಳ ಜನಪ್ರಿಯವಾಗಿದ್ದ‘ಬೇಡರ ಕಣ್ಣಪ್ಪ’ ಕಥೆಯನ್ನು ಈ ಸಿನಿಮಾದಲ್ಲಿ ಹೆಚ್ಚು ಕಮರ್ಷಿಯಲ್ ಮಾದರಿಯಲ್ಲಿ ಕಟ್ಟಿಕೊಡಲಾಗಿದೆ.
ಬಾಲಿವುಡ್ ನಟ ಅಕ್ಷಯ್ ಕುಮಾರ್ ಶಿವನ ಪಾತ್ರದಲ್ಲಿ ಹಾಗೂ ಕಾಜಲ್ ಅಗರ್ವಾಲ್ ಪಾರ್ವತಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಭಾಸ್ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ಮುಖೇಶ್ ಕುಮಾರ್ ಸಿಂಗ್ ನಿರ್ದೇಶನದ ಈ ಚಿತ್ರಕ್ಕೆ ಡಾ ಮೋಹನ್ ಬಾಬು ಬಂಡವಾಳ ಹೂಡಿದ್ದಾರೆ.
ರಾಕ್ ಲೈನ್ ವೆಂಕಟೇಶ್ ಅವರು ಕರ್ನಾಟಕದಲ್ಲಿ 'ಕಣ್ಣಪ್ಪ' ಚಿತ್ರದ ವಿತರಣೆ ಹಕ್ಕನ್ನು ಪಡೆದುಕೊಂಡಿದ್ದಾರೆ. ಭಾರತೀಯ ಚಿತ್ರರಂಗದ ಪ್ರಸಿದ್ಧ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.
ಬಹು ನಿರೀಕ್ಷಿತ ಪೌರಾಣಿಕ ಚಿತ್ರ 'ಕಣ್ಣಪ್ಪ' ಜೂನ್ 27 ರಂದು ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಯಂಗ್ ರೆಬೆಲ್ ಸ್ಟಾರ್ ಪ್ರಭಾಸ್ ಮತ್ತು ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ ಅತಿಥಿ ಪಾತ್ರಗಳಲ್ಲಿ ನಟಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

