ನ್ಯೂಜಿಲೆಂಡ್ ಟೆಸ್ಟ್ ಚಾಂಪಿಯನ್‌ಶಿಪ್ ಗೆಲುವಿಗೆ ಕಾರಣವಾಯ್ತು ಈ 5 ಅಂಶಗಳು..!
ಬೆಂಗಳೂರು: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಭಾರತ ವಿರುದ್ದ ನ್ಯೂಜಿಲೆಂಡ್ 8 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಟೆಸ್ಟ್ ವಿಶ್ವಚಾಂಪಿಯನ್ ಆಗಿ ಹೊರಹೊಮ್ಮಿದೆ. ಕಳೆದ 6 ವರ್ಷಗಳಲ್ಲಿ ಎರಡು ಬಾರಿ ನ್ಯೂಜಿಲೆಂಡ್ ತಂಡವು ಐಸಿಸಿ ಟ್ರೋಫಿ ಗೆಲ್ಲುವ ಅವಕಾಶವನ್ನು ಕೈಚೆಲ್ಲಿತ್ತು. ಆದರೆ ಚೊಚ್ಚಲ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಈ ಎಲ್ಲಾ ಅಡೆತಡೆಗಳನ್ನು ಮೀರಿ ನ್ಯೂಜಿಲೆಂಡ್ ಟೆಸ್ಟ್ ವಿಶ್ವಕಪ್ ಎತ್ತಿ ಹಿಡಿದಿದೆ.ಎರಡು ದಿನಗಳ ಕಾಲ ಮಳೆ ಪಂದ್ಯಕ್ಕೆ ಅಡ್ಡಿಪಡಿಸಿದರೂ ಬಲಿಷ್ಠ ಭಾರತ ತಂಡದೆದುರು ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಜಿಲೆಂಡ್ ಗೆದ್ದಿದ್ದು ಹೇಗೆ?, ಕಿವೀಸ್ ಗೆಲುವಿಗೆ ಕಾರಣವಾದ 5 ಅಂಶಗಳೇನು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ

1. ಒತ್ತಡಕ್ಕೆ ಮಣಿಯದೆ ಉತ್ತಮ ಬ್ಯಾಟಿಂಗ್

1. ಒತ್ತಡಕ್ಕೆ ಮಣಿಯದೆ ಉತ್ತಮ ಬ್ಯಾಟಿಂಗ್

ನ್ಯೂಜಿಲೆಂಡ್ ತಂಡ ಮಹತ್ವದ ಪಂದ್ಯದಲ್ಲಿ ಯಾವುದೇ ಒತ್ತಡಕ್ಕೆ ಒಳಗಾಗದೇ ಬ್ಯಾಟಿಂಗ್ ಪ್ರದರ್ಶನ ತೋರಿತು. ಮೊದಲ ಇನಿಂಗ್ಸ್‌ನಲ್ಲಿ ಕಾನ್‌ವೇ ಅರ್ಧಶತಕ ಚಚ್ಚಿ ತಂಡ 32 ರನ್‌ಗಳ ಮುನ್ನಡೆ ಸಾಧಿಸುವಂತೆ ಮಾಡಿದರೆ, ಎರಡನೇ ಇನಿಂಗ್ಸ್‌ನಲ್ಲಿ ನಾಯಕ ವಿಲಿಯಮ್ಸನ್ ಅಜೇಯ ಅರ್ಧಶತಕ ಬಾರಿಸಿ ಸಮಯೋಚಿತ ಬ್ಯಾಟಿಂಗ್ ನಡೆಸಿದರು.

2. ವೇಗಿಗಳ ಸಂಘಟಿತ ಬೌಲಿಂಗ್ ಪ್ರದರ್ಶನ

2. ವೇಗಿಗಳ ಸಂಘಟಿತ ಬೌಲಿಂಗ್ ಪ್ರದರ್ಶನ

ಐವರು ವೇಗಿಗಳೊಂದಿಗೆ ಕಣಕ್ಕಿಳಿದಿದ್ದು ಕಿವೀಸ್ ಪಾಲಿಗೆ ವರದಾನವಾಯಿತು. ಜೇಮಿಸನ್, ಸೌಥಿ, ಬೌಲ್ಟ್ ಹಾಗೂ ವ್ಯಾಗ್ನರ್ ಮಾರಕ ದಾಳಿ ನಡೆಸಿದರು. ಇದರ ಪರಿಣಾಮ ಟೆಸ್ಟ್ ವಿಶ್ವಕಪ್ ಫೈನಲ್‌ನಲ್ಲಿ ಭಾರತದ ಯಾವೊಬ್ಬ ಬ್ಯಾಟ್ಸ್‌ಮನ್ ಕೂಡಾ 50 ರನ್ ಬಾರಿಸಲು ಸಾಧ್ಯವಾಗಲಿಲ್ಲ.

3. ಫೀಲ್ಡಿಂಗ್‌ನಲ್ಲಿ ಕಿವೀಸ್ ಅತ್ಯುತ್ತಮ ಪ್ರದರ್ಶನ

ಫೈನಲ್‌ನಲ್ಲಿ ನ್ಯೂಜಿಲೆಂಡ್ ಸಂಘಟಿತ ಪ್ರದರ್ಶನದ ಮೂಲಕ ಗಮನ ಸೆಳೆಯಿತು. ಟಾಮ್ ಲೇಥಮ್ ಒಬ್ಬರೇ 30ಕ್ಕೂ ಹೆಚ್ಚು ರನ್ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದರು. ಇದರ ಜತೆ ನಿಕೋಲ್ಸ್ ಸ್ಪೋಟಕ ಬ್ಯಾಟಿಂಗ್ ಮಾಡುತ್ತಿದ್ದ ಪಂತ್ ಕ್ಯಾಚ್ ಹಿಡಿಯುವ ಮೂಲಕ ಪಂದ್ಯ ಕಿವೀಸ್ ಪರ ವಾಲುವಂತೆ ಮಾಡಿದರು.

4. ಭಾರತದ ಕೆಳ ಮಧ್ಯಮ ಕ್ರಮಾಂಕವನ್ನು ಕಟ್ಟಿಹಾಕಿದ್ದು

ಗಾಬಾ ಹಾಗೂ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಭಾರತದ ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಉಪಯುಕ್ತ ಬ್ಯಾಟಿಂಗ್ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದರು. ಆದರೆ ನ್ಯೂಜಿಲೆಂಡ್ ವೇಗಿಗಳೆದುರು ಹೆಚ್ಚು ಹೊತ್ತು ಕ್ರೀಸ್‌ನಲ್ಲಿರುವ ಅಶ್ವಿನ್, ಶಮಿ, ಬುಮ್ರಾ ಹಾಗೂ ಇಶಾಂತ್‌ಗೆ ಸಾಧ್ಯವಾಗಲಿಲ್ಲ.

5. ಕೊಹ್ಲಿ, ರಹಾನೆ, ಪೂಜಾರ ವಿರುದ್ಧ ಉತ್ತಮ ಯೋಜನೆ

ಟೀಂ ಇಂಡಿಯಾ ಟ್ರಂಪ್ ಕಾರ್ಡ್ ಎನಿಸಿಕೊಂಡಿರುವ ನಾಯಕ ವಿರಾಟ್ ಕೊಹ್ಲಿ, ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಹಾಗೂ ಉಪನಾಯಕ ಅಜಿಂಕ್ಯ ರಹಾನೆ ಎದುರು ಕಿವೀಸ್ ತಂಡ ಉತ್ತಮ ರಣತಂತ್ರದೊಂದಿಗೆ ಕಣಕ್ಕಿಳಿದಿದ್ದು, ವಿಲಿಯಮ್ಸ್ ಪಡೆ ಚಾಂಪಿಯನ್ ಆಗಲು ವರದಾನವಾಯಿತು.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.