ಟೀಂ ಇಂಡಿಯಾ ಟೆಸ್ಟ್ ಚಾಂಪಿಯನ್‌ಶಿಪ್ ಸೋಲಿಗೆ ಕಾರಣವಾಯ್ತು ಈ 5 ಅಂಶಗಳು..!
ಬೆಂಗಳೂರು: ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಮತ್ತೊಮ್ಮೆ ಐಸಿಸಿ ನಾಕೌಟ್ ಪಂದ್ಯದಲ್ಲಿ ನ್ಯೂಜಿಲೆಂಡ್‌ಗೆ ಶರಣಾಗಿದೆ. ತೀವ್ರ ಕುತೂಹಲ ಕೆರಳಿಸಿದ್ದ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ಕೊನೆಗೂ ಕೇನ್ ವಿಲಿಯಮ್ಸನ್ ನೇತೃತ್ವದ ಕಿವೀಸ್ ಪಾಲಾಗಿದೆ. ಬಲಿಷ್ಠ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ಎದುರು ಸರಣಿ ಗೆದ್ದು ಬೀಗಿದ್ದ ಟೀಂ ಇಂಡಿಯಾ, ಫೈನಲ್‌ನಲ್ಲಿ ಮುಗ್ಗರಿಸಿದ್ದು ಹೇಗೆ? ಟೀಂ ಇಂಡಿಯಾ ಸೋಲಿಗೆ ಕಾರಣವಾದ ಅಂಶಗಳೇನು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

1. ಎರಡೂ ಇನ್ನಿಂಗ್ಸ್‌ಗಳಲ್ಲಿ ದಿಢೀರ್ ಕುಸಿತ

1. ಎರಡೂ ಇನ್ನಿಂಗ್ಸ್‌ಗಳಲ್ಲಿ ದಿಢೀರ್ ಕುಸಿತ

ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳಿಂದ ಜವಾಬ್ದಾರಿಯುತ ಪ್ರದರ್ಶನ ಮೂಡಿ ಬರಲಿಲ್ಲ. ಮೊದಲ ಇನಿಂಗ್ಸ್‌ನಲ್ಲಿ 217 ರನ್‌ಗಳಿಗೆ ಆಲೌಟ್ ಆಗಿದ್ದ ಕೊಹ್ಲಿ, ಎರಡನೇ ಇನಿಂಗ್ಸ್‌ನಲ್ಲಿ 170 ರನ್‌ಗಳಿಗೆ ಸರ್ವಪತನ ಕಂಡಿದ್ದು, ಟೀಂ ಇಂಡಿಯಾ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿತು.

2. ಕೆಳ ಮಧ್ಯಮ ಕ್ರಮಾಂಕದ ಕಳಪೆ ಬ್ಯಾಟಿಂಗ್

2. ಕೆಳ ಮಧ್ಯಮ ಕ್ರಮಾಂಕದ ಕಳಪೆ ಬ್ಯಾಟಿಂಗ್

ಟೀಂ ಇಂಡಿಯಾ ಅಗ್ರಕ್ರಮಾಂದ ಬ್ಯಾಟ್ಸ್‌ಮನ್ ಗಿಲ್, ಪೂಜಾರ ಹಾಗೂ ಕೆಳ ಮಧ್ಯಮ ಕ್ರಮಾಂಕದಿಂದ ನಿರೀಕ್ಷಿತ ಪ್ರದರ್ಶನ ಮೂಡಿ ಬರಲಿಲ್ಲ. ಜಡೇಜಾ, ಅಶ್ವಿನ್ ಕೂಡಾ ನೆಲಕಚ್ಚಿ ಆಡುವ ಪ್ರಯತ್ನ ಮಾಡಲಿಲ್ಲ. ಕಳಪೆ ಬ್ಯಾಟಿಂಗ್ ಪ್ರದರ್ಶನಕ್ಕೆ ಕೊನೆಯ ದಿನದಾಟದಲ್ಲಿ ಟೀಂ ಇಂಡಿಯಾ ಬೆಲೆ ತೆತ್ತಿತು.

3. ಕೊನೆ 4 ವಿಕೆಟ್‌ಗೆ ಕಿವೀಸ್ 80 ಗಳಿಸಲು ಬಿಟ್ಟಿದ್ದು

ಮೊದಲ ಇನಿಂಗ್ಸ್‌ನಲ್ಲಿ ನ್ಯೂಜಿಲೆಂಡ್ 6 ವಿಕೆಟ್ ಕಳೆದುಕೊಂಡು 162 ರನ್ ಕಲೆಹಾಕಿತ್ತು. ಇನ್ನೂರು ರನ್‌ಗಳೊಳಗಾಗಿ ಕಿವೀಸ್ ಆಲೌಟ್ ಮಾಡುವ ಲೆಕ್ಕಾಚಾರವನ್ನು ಸೌಥಿ ಹಾಗೂ ಜೇಮಿಸನ್ ತಲೆಕೆಳಗೆ ಮಾಡಿದರು. ಮೊದಲ ಇನಿಂಗ್ಸ್‌ನಲ್ಲಿ ಕಿವೀಸ್ 32 ರನ್‌ಗಳ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿದ್ದು ಭಾರತಕ್ಕೆ ಹಿನ್ನೆಡೆಯಾಯಿತು.

4. ಫೈನಲ್‌ನಲ್ಲಿ ನಡೆಯದ ಬುಮ್ರಾ ಮ್ಯಾಜಿಕ್

4. ಫೈನಲ್‌ನಲ್ಲಿ ನಡೆಯದ ಬುಮ್ರಾ ಮ್ಯಾಜಿಕ್

ಟೀಂ ಇಂಡಿಯಾದ ವೇಗದ ಅಸ್ತ್ರ ಜಸ್ಪ್ರೀತ್ ದಯಾನೀಯ ಬೌಲಿಂಗ್ ಅನುಭವಿಸಿದ್ದು ತಂಡಕ್ಕೆ ದೊಡ್ಡ ಹಿನ್ನೆಡೆಯಾಗಿ ಪರಿಣಮಿಸಿತು. ಸರಿಯಾದ ಲೈನ್ ಅಂಡ್ ಲೆಂಗ್ತ್ ಎಸೆತಗಳನ್ನು ಹಾಕಲು ಬುಮ್ರಾ ವಿಫಲವಾದರು. ಇದಷ್ಟೇ ಅಲ್ಲದೇ ಎರಡು ಇನಿಂಗ್ಸ್ ಬೌಲಿಂಗ್ ಮಾಡಿಯೂ ಒಂದೇ ಒಂದು ವಿಕೆಟ್ ಕಬಳಿಸಲು ಬುಮ್ರಾಗೆ ಸಾಧ್ಯವಾಗಲಿಲ್ಲ.

5. ನಿರ್ಣಾಯಕ ಹಂತದಲ್ಲಿ ಕ್ಯಾಚ್ ಕೈಚೆಲ್ಲಿದ ಪೂಜಾರ

ఛతేశ్వర్ పూజారాను రూ.50 లక్షలకు కొనుగోలు చేసింది చెన్నై సూపర్ కింగ్స్.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.