ತಾನಾಡಿದ ಐಪಿಎಲ್ ತಂಡದ ಬಗ್ಗೆ ಗಂಭೀರ ಆರೋಪ ಮಾಡಿದ ಎಬಿ ಡಿವಿಲಿಯರ್ಸ್!
ಬೆಂಗಳೂರು: ದಕ್ಷಿಣ ಆಫ್ರಿಕಾ ಮೂಲದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್, ಐಪಿಎಲ್ ಟೂರ್ನಿಯಲ್ಲಿ ತಾನಾಡಿದ ಮೊದಲ ತಂಡದ ಕುರಿತಂತೆ ಅಚ್ಚರಿಯ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. ಅಷ್ಟಕ್ಕೂ ಎಬಿಡಿ ಏನಂದ್ರು ನೀವೇ ನೋಡಿ

ಎಬಿ ಡಿವಿಲಿಯರ್ಸ್ ಅವರನ್ನು ಆರ್‌ಸಿಬಿ ತಂಡದ ಆಪತ್ಬಾಂದವ, ಮಿಸ್ಟರ್ 360 ಎಂದೆಲ್ಲಾ ಅಭಿಮಾನಿಗಳು ಪ್ರೀತಿಯಿಂದ ಕರೆಯುತ್ತಾ ಬಂದಿದ್ದಾರೆ.
ದಕ್ಷಿಣ ಆಫ್ರಿಕಾ ಮೂಲದ ಸೂಪರ್ ಸ್ಟಾರ್ ಬ್ಯಾಟರ್ ಎಬಿಡಿ, ಹಲವಾರು ಪಂದ್ಯಗಳಲ್ಲಿ ಏಕಾಂಗಿಯಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಅವಿಸ್ಮರಣೀಯ ಗೆಲುವು ತಂದುಕೊಟ್ಟಿದ್ದಾರೆ.
ಇನ್ನು ಐಪಿಎಲ್‌ನಲ್ಲಿ ಆರ್‌ಸಿಬಿಗೂ ಮುನ್ನ 2008ರಿಂದ 2010ರ ವರೆಗೆ ಡೆಲ್ಲಿ ಡೇರ್‌ಡೆವಿಲ್ಸ್(ಈಗ ಡೆಲ್ಲಿ ಕ್ಯಾಪಿಟಲ್ಸ್) ತಂಡದಲ್ಲಿದ್ದ ದಕ್ಷಿಣ ಆಫ್ರಿಕಾದ ತಾರಾ ಆಟಗಾರ ಎಬಿ ಡಿ ವಿಲಿಯರ್ಸ್ ಗಂಭೀರ ಆರೋಪ ಮಾಡಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್(ಆಗ ಡೆಲ್ಲಿ ಡೇರ್‌ಡೆವಿಲ್ಸ್) ತಂಡದಲ್ಲಿ ಬಹಳಷ್ಟು ವಿಷಕಾರಿ ಪಾತ್ರಗಳಿದ್ದವು ಎಂದು ಹೇಳಿದ್ದಾರೆ. ಇದು ಕ್ರಿಕೆಟ್ ವಲಯದಲ್ಲಿ ಹೊಸ ಸಂಚಲವನ್ನೇ ಸೃಷ್ಟಿಸಿದೆ.
ಡೆಲ್ಲಿ ಕ್ಯಾಪಿಟಲ್ಸ್(ಆಗ ಡೆಲ್ಲಿ ಡೇರ್‌ಡೆವಿಲ್ಸ್) ತಂಡದಲ್ಲಿ ಬಹಳಷ್ಟು ವಿಷಕಾರಿ ಪಾತ್ರಗಳಿದ್ದವು ಎಂದು ಹೇಳಿದ್ದಾರೆ. ಇದು ಕ್ರಿಕೆಟ್ ವಲಯದಲ್ಲಿ ಹೊಸ ಸಂಚಲವನ್ನೇ ಸೃಷ್ಟಿಸಿದೆ.
ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ‘ಹೆಸರು ಹೇಳಲು ನಾನು ಇಷ್ಟಪಡುವುದಿಲ್ಲ. ಆ ತಂಡದಲ್ಲಿ ಬಹಳಷ್ಟು ವಿಷಕಾರಿ ಪಾತ್ರಗಳಿದ್ದವು. ಅನೇಕ ಶ್ರೇಷ್ಠ ಆಟಗಾರರೂ ಇದ್ದರು. ಆದ್ದರಿಂದ ಅದು ನನಗೆ ಸಿಹಿ-ಕಹಿ ಅನುಭವವಾಗಿತ್ತು ಎಂದಿದ್ದಾರೆ.
ನಾನು ಇನ್ನೂ ಆ ಕ್ಷಣಗಳನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತೇನೆ. ನನ್ನ ಜೀವನ ಮತ್ತು ವೃತ್ತಿ ಜೀವನದ ಕೆಲವು ಪ್ರಮುಖ ಸನ್ನಿವೇಶಗಳು ಆ ಸಮಯದಲ್ಲಿ ನಡೆದವು’ ಎಂದು ಹೇಳಿದ್ದಾರೆ. 2011ರ ಐಪಿಎಲ್‌ಗೂ ಮುನ್ನ ಹರಾಜಿನಲ್ಲಿ ವಿಲಿಯರ್ಸ್‌ರನ್ನು ಆರ್‌ಸಿಬಿ ಖರೀದಿಸಿತ್ತು.
ಇದಾದ ಬಳಿಕ ಬರೋಬ್ಬರಿ ಒಂದು ದಶಕಗಳ ಕಾಲ ಎಬಿ ಡಿವಿಲಿಯರ್ಸ್ ಆರ್‌ಸಿಬಿ ತಂಡದ ಅವಿಭಾಜ್ಯ ಅಂಗವಾಗಿ ಗುರುತಿಸಿಕೊಂಡಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

