- Home
- Sports
- Cricket
- ಟಿ20 ವಿಶ್ವಕಪ್‌ನಲ್ಲಿ ಈತನೇ ಭಾರತದ ಎಕ್ಸ್ ಫ್ಯಾಕ್ಟರ್ ಎಂದ ಎಬಿ ಡಿವಿಲಿಯರ್ಸ್! ಆದ್ರೆ ಅದು ಅಭಿಷೇಕ್, ಬುಮ್ರಾ ಅಲ್ಲ
ಟಿ20 ವಿಶ್ವಕಪ್‌ನಲ್ಲಿ ಈತನೇ ಭಾರತದ ಎಕ್ಸ್ ಫ್ಯಾಕ್ಟರ್ ಎಂದ ಎಬಿ ಡಿವಿಲಿಯರ್ಸ್! ಆದ್ರೆ ಅದು ಅಭಿಷೇಕ್, ಬುಮ್ರಾ ಅಲ್ಲ
ಬೆಂಗಳೂರು: 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿದೆ. ಹೀಗಿರುವಾಗಲೇ ಹಾಲಿ ಚಾಂಪಿಯನ್ ಭಾರತದ ಮೇಲೆ ಎಲ್ಲರ ಕಣ್ಣಿದೆ. ಈ ನಡುವೆ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಭಾರತದ ಈ ಆಟಗಾರ ಎಕ್ಸ್ ಫ್ಯಾಕ್ಟರ್ ಆಗಬಹುದು ಎಂದು ಎಚ್ಚರಿಸಿದ್ದಾರೆ.

ಮತ್ತೊಂದು ಟಿ20 ವಿಶ್ವಕಪ್ ಟೂರ್ನಿ ಮೇಲೆ ಕಣ್ಣಿಟ್ಟಿರುವ ಭಾರತ
2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಮುಂಬರುವ ಫೆಬ್ರವರಿ 07ರಿಂದ ಆರಂಭವಾಗಲಿದ್ದು, ಭಾರತ ಹಾಗೂ ಶ್ರೀಲಂಕ ಜಂಟಿ ಆತಿಥ್ಯ ವಹಿಸಿವೆ. ಭಾರತ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಎನಿಸಿಕೊಂಡಿದ್ದು, ಮತ್ತೊಮ್ಮೆ ಚುಟುಕು ಕ್ರಿಕೆಟ್ ವಿಶ್ವಕಪ್ ಟ್ರೋಫಿಗೆ ಮುತ್ತಿಕ್ಕಲು ಎದುರು ನೋಡುತ್ತಿದೆ.
ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ
ಅಂದಹಾಗೆ ಯಾವ ತಂಡವು ತವರಿನಲ್ಲಿ ನಡೆದ ಟಿ20 ವಿಶ್ವಕಪ್ ಟ್ರೋಫಿಯನ್ನು ಜಯಿಸಿಲ್ಲ. ಹೀಗಾಗಿ ಸಹಜವಾಗಿಯೇ ಭಾರತ ತಂಡವು ಹೊಸ ಮೈಲಿಗಲ್ಲು ನೆಡಲು ತುದಿಗಾಲಿನಲ್ಲಿ ನಿಂತಿದೆ. ಪ್ರತಿಷ್ಠಿತ ಟೂರ್ನಿಗೆ ಈಗಾಗಲೇ 15 ಆಟಗಾರರನ್ನೊಳಗೊಂಡ ಭಾರತ ತಂಡವನ್ನು ಪ್ರಕಟಿಸಲಾಗಿದೆ.
ಟಿ20 ವಿಶ್ವಕಪ್ ಟೂರ್ನಿಗೆ ಭಾರತದ ಎಕ್ಸ್ ಫ್ಯಾಕ್ಟರ್ ಯಾರು?
ಹೀಗಿರುವಾಗಲೇ ದಕ್ಷಿಣ ಆಫ್ರಿಕಾ ತಂಡದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್, ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ಎಕ್ಸ್ ಫ್ಯಾಕ್ಟರ್ ಆಟಗಾರ ಯಾರಾಗಬಹುದು ಎನ್ನುವುದರ ಬಗ್ಗೆ ಭವಿಷ್ಯ ನುಡಿದಿದ್ದಾರೆ.
ಎಕ್ಸ್‌ಫ್ಯಾಕ್ಟರ್ ಬುಮ್ರಾ, ಅಭಿಷೇಕ್ ಶರ್ಮಾ ಅಲ್ಲ
ಆದರೆ ಅದು ಅಭಿಷೇಕ್ ಶರ್ಮಾ ಅಥವಾ ಜಸ್ಪ್ರೀತ್ ಬುಮ್ರಾ ಅಲ್ಲ ಎನ್ನುವುದು ಮತ್ತಷ್ಟು ಅಚ್ಚರಿ ಮೂಡಿಸಿದೆ.
ಪಾಂಡ್ಯ ನಿರ್ಣಾಯಕ ಪಾತ್ರವಹಿಸಲಿದ್ದಾರೆ.
ಹೌದು, ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ಎಬಿ ಡಿವಿಲಿಯರ್ಸ್ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ಪಾಂಡ್ಯ ಭಾರತದ ಪಾಲಿಗೆ ಪ್ರಮುಖ ಹಾಗೂ ನಿರ್ಣಾಯಕ ಆಟಗಾರನಾಗಿ ಹೊರಹೊಮ್ಮಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಭಾರತ ಕ್ರಿಕೆಟ್ ತಂಡ ಬಲಿಷ್ಠವಾಗಿದೆಒ
ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಭಾರತ ಟಿ20 ವಿಶ್ವಕಪ್ ತಂಡದ ವಿಶ್ಲೇಷಣೆ ಮಾಡುವ ವೇಳೆಯಲ್ಲಿ, ಟೀಂ ಇಂಡಿಯಾ ಅತ್ಯಂತ ಸಮತೋಲನದಿಂದ ಕೂಡಿದೆ. ತಂಡದಲ್ಲಿ ಸಾಕಷ್ಟು ಆಟಗಾರರು ಬ್ಯಾಟಿಂಗ್ ಹಾಗೂ ಬೌಲಿಂಗ್ ಮೂಲಕ ತಂಡದ ಗೆಲುವಿಗೆ ಕೊಡುಗೆ ನೀಡಬಲ್ಲವರಾಗಿದ್ದಾರೆ ಎಂದು ಡಿವಿಲಿಯರ್ಸ್ ಅಭಿಪ್ರಾಯಪಟ್ಟಿದ್ದಾರೆ.
ಗಿಲ್ ಇಲ್ಲದಿರುವುದು ದುರಾದೃಷ್ಟಕರ
ಅಗ್ರಕ್ರಮಾಂಕದಲ್ಲಿ ಅಭಿಷೇಕ್ ಶರ್ಮಾ, ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಇದ್ದಾರೆ. ಆದರೆ ತಂಡದಲ್ಲಿ ಪಂತ್, ಗಿಲ್ ಹಾಗೂ ಜೈಸ್ವಾಲ್ ಹಾಗೂ ಜಿತೇಶ್ ಶರ್ಮಾ ಇಲ್ಲದಿರುವುದು ನಿಜಕ್ಕೂ ದುರಾದೃಷ್ಟವೇ ಸರಿ ಎಂದು ಎಬಿಡಿ ಅಭಿಪ್ರಾಯಪಟ್ಟಿದ್ದಾರೆ.
ಪಾಂಡ್ಯ ಗುಣಗಾನ ಮಾಡಿದ ಎಬಿಡಿ
ಈ ಬಾರಿಯ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹಾರ್ದಿಕ್ ಪಾಂಡ್ಯ ಭಾರತದ ಪಾಲಿಗೆ ನಿರ್ಣಾಯಕ ಪಾತ್ರ ನಿಭಾಯಿಸಲಿದ್ದಾರೆ. ಪಾಂಡ್ಯ ಬ್ಯಾಟಿಂಗ್ ಹಾಗೂ ಬೌಲಿಂಗ್ ಮೂಲಕ ಏಕಾಂಗಿಯಾಗಿ ಪಂದ್ಯ ಗೆಲ್ಲಿಸುವ ಸಾಮರ್ಥ್ಯ ಹೊಂದಿದ್ದಾರೆ. ಅವರು ಯಾವುದೇ ಸಂದರ್ಭದಲ್ಲಿ ಬೇಕಿದ್ದರೂ ಬೌಲಿಂಗ್ ಮಾಡುತ್ತಾರೆ ಹಾಗೂ ಯಾವುದೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಇಳಿದು ಪಂದ್ಯ ಗೆಲ್ಲಿಸಬಲ್ಲರು ಎಂದು ಎಬಿಡಿ, ಪಾಂಡ್ಯ ಗುಣಗಾನ ಮಾಡಿದ್ದಾರೆ.
ಹಾರ್ದಿಕ್ ಪಾಂಡ್ಯ ಬಗ್ಗೆ ಎಚ್ಚರಿಕೆ ಕೊಟ್ಟ ಎಬಿಡಿ
ಹಾರ್ದಿಕ್ ಪಾಂಡ್ಯ ಎದುರಾಳಿ ಪಡೆಯಲ್ಲಿ ಒಂದು ರೀತಿಯ ಭಯ ಹುಟ್ಟಿಸುವಂತಹ ಆಟಗಾರರಾಗಿದ್ದಾರೆ. ಅವರನ್ನು ಮೂರ್ನಾಲ್ಕು ಓವರ್‌ನಲ್ಲಿ ಔಟ್ ಮಾಡಬೇಕಾಗುತ್ತದೆ. ಅದು ಸಾಧ್ಯವಾಗದಿದ್ದರೇ ಎದುರಾಳಿ ಪಡೆ ಪಂದ್ಯ ಕೈಚೆಲ್ಲಬೇಕಾಗಿ ಬರಬಹುದು ಎಂದು ಎಬಿಡಿ ಅಭಿಪ್ರಾಯಪಟ್ಟಿದ್ದಾರೆ.
ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಪಾಂಡ್ಯ ಅಬ್ಬರದ ಬ್ಯಾಟಿಂಗ್
ಇತ್ತೀಚೆಗೆ ಹಾರ್ದಿಕ್ ಪಾಂಡ್ಯ, ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಬರೋಡ ಪರ ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿಳಿದು 92 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 11 ಸಿಕ್ಸರ್ ಸಹಿತ ಸ್ಪೋಟಕ 133 ರನ್ ಸಿಡಿಸಿ ಮಿಂಚಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

