MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಅವನನ್ನು ಯಾಕೆ ಸೆಲೆಕ್ಟ್ ಮಾಡಿದ್ರು? ಶ್ರೀಲಂಕಾ ಸರಣಿಗೆ ಟೀಂ ಇಂಡಿಯಾದ ಸ್ಟಾರ್ ಆಟಗಾರನ ಆಯ್ಕೆಯ ಬಗ್ಗೆ ಎಬಿ ಡಿವಿಲಿಯರ್ಸ್ ಅಚ್ಚರಿ

ಅವನನ್ನು ಯಾಕೆ ಸೆಲೆಕ್ಟ್ ಮಾಡಿದ್ರು? ಶ್ರೀಲಂಕಾ ಸರಣಿಗೆ ಟೀಂ ಇಂಡಿಯಾದ ಸ್ಟಾರ್ ಆಟಗಾರನ ಆಯ್ಕೆಯ ಬಗ್ಗೆ ಎಬಿ ಡಿವಿಲಿಯರ್ಸ್ ಅಚ್ಚರಿ

ಬೆಂಗಳೂರು: ಕಳೆದ ಮಂಗಳವಾರ ಶ್ರೀಲಂಕಾ ಎದುರಿನ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ 15 ಆಟಗಾರರನ್ನೊಳಗೊಂಡ ಬಲಿಷ್ಠ ಭಾರತ ತಂಡವನ್ನು ಬಿಸಿಸಿಐ ಆಯ್ಕೆ ಸಮಿತಿ ಪ್ರಕಟಿಸಿದೆ. ಈ ಪೈಕಿ ಒಬ್ಬ ಆಟಗಾರನ ಆಯ್ಕೆಯ ಬಗ್ಗೆ ದಕ್ಷಿಣ ಆಫ್ರಿಕಾ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಅಚ್ಚರಿ ವ್ಯಕ್ತಪಡಿಸಿದ್ದಾರೆ.

2 Min read
Author : Naveen Kodase
Published : Jul 30 2026, 01:12 PM IST
Share this Photo Gallery
  • FB
  • TW
  • Linkdin
  • Whatsapp
16
ಆಗಸ್ಟ್‌ 15ರಿಂದ ಭಾರತ ಶ್ರೀಲಂಕಾ ನಡುವಿನ ಟೆಸ್ಟ್ ಸರಣಿ ಆರಂಭ
Image Credit : ANI

ಆಗಸ್ಟ್‌ 15ರಿಂದ ಭಾರತ-ಶ್ರೀಲಂಕಾ ನಡುವಿನ ಟೆಸ್ಟ್ ಸರಣಿ ಆರಂಭ

ಮುಂಬರುವ ಆಗಸ್ಟ್‌ 15ರಿಂದ ದ್ವೀಪರಾಷ್ಟ್ರವಾದ ಶ್ರೀಲಂಕಾದಲ್ಲಿ ಭಾರತ ಕ್ರಿಕೆಟ್ ತಂಡವು ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ. ಈ ಸರಣಿಯು 2025-27ನೇ ಸಾಲಿನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪ್ರವೇಶಿಸುವ ನಿಟ್ಟಿನಲ್ಲಿ ಭಾರತ ತಂಡಕ್ಕೆ ಮಹತ್ವದ್ದಾಗಿದೆ. ಈ ಸರಣಿಗೆ ಈಗಾಗಲೇ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಶುಭ್‌ಮನ್ ಗಿಲ್ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಲಂಕಾ ಎದುರಿನ ಸರಣಿಗೆ ಮೂವರ ಸ್ಟಾರ್ ಕ್ರಿಕೆಟರ್ಸ್ ಕಮ್‌ಬ್ಯಾಕ್
Image Credit : ANI

ಲಂಕಾ ಎದುರಿನ ಸರಣಿಗೆ ಮೂವರ ಸ್ಟಾರ್ ಕ್ರಿಕೆಟರ್ಸ್ ಕಮ್‌ಬ್ಯಾಕ್

ಲಂಕಾ ಎದುರಿನ ಟೆಸ್ಟ್‌ ಸರಣಿಗೆ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ, ಅನುಭವಿ ಆಲ್ರೌಂಡರ್ ರವೀಂದ್ರ ಜಡೇಜಾ, ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಕಮ್‌ಬ್ಯಾಕ್ ಮಾಡಿದ್ದಾರೆ. ಹೀಗಿರುವಾಗಲೇ ದಕ್ಷಿಣ ಆಫ್ರಿಕಾ ತಂಡದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್, ಪಂತ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿದ್ದರ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ.

Related Articles

Related image1
ಟೀಂ ಇಂಡಿಯಾಗೆ ಗುಡ್‌ಬೈ ಹೇಳಿದ 24 ಗಂಟೆಯಲ್ಲೇ ಗೌತಮ್ ಗಂಭೀರ್ ಆಪ್ತನ ಹೆಗಲೇರಿದ ಹೊಸ ಜವಾಬ್ದಾರಿ!
Related image2
ಲಂಕಾ ಎದುರಿನ ಟೆಸ್ಟ್ ಸರಣಿಯಿಂದ ಔಟ್; ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ಗುಡ್ ಬೈ ಹೇಳಿದ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ
36
ರಿಷಭ್ ಪಂತ್ ಬಗ್ಗೆ ಡಿವಿಲಿಯರ್ಸ್ ಅಚ್ಚರಿಯ ಹೇಳಿಕೆ
Image Credit : Getty

ರಿಷಭ್ ಪಂತ್ ಬಗ್ಗೆ ಡಿವಿಲಿಯರ್ಸ್ ಅಚ್ಚರಿಯ ಹೇಳಿಕೆ

ರಿಷಭ್ ಪಂತ್ ಭಾರತ ತಂಡಕ್ಕೆ ಆಯ್ಕೆಯಾಗಿದ್ದು ನನಗೆ ನಿಜಕ್ಕೂ ಅಚ್ಚರಿ ಮೂಡಿಸಿತು. ನಾವೆಲ್ಲರೂ ಅವರ ಫಿಟ್ನೆಸ್ ಹೇಗಿದೆ ಎನ್ನುವುದನ್ನು ನೋಡಿದ್ದೇವೆ. ಅವರು ಐಪಿಎಲ್ ವೇಳೆಯಲ್ಲಿಯೇ ಅವರು ತಮ್ಮ ಆತ್ಮವಿಶ್ವಾಸ ಕಳೆದುಕೊಂಡಿರುವುದನ್ನು ನಾವೆಲ್ಲರೂ ನೋಡಿದ್ದೇವೆ. ಆದರೆ ದೇಶವನ್ನು ಪ್ರತಿನಿಧಿಸುವಾಗ ಎಲ್ಲಾ ಅಡೆತಡೆಗಳನ್ನು ಮೆಟ್ಟಿನಿಲ್ಲಬಲ್ಲರು. ಅವರು ಲಂಕಾ ಎದುರಿನ ಸರಣಿಯಲ್ಲಿ ಹೇಗೆ ಆಡಲಿದ್ದಾರೆ ಎನ್ನುವ ಕುತೂಹಲವಿದೆ ಎಂದು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಎಬಿಡಿ ಹೇಳಿದ್ದಾರೆ.

46
ಜಡೇಜಾ, ಬುಮ್ರಾ ಕಮ್‌ಬ್ಯಾಕ್ ಬಗ್ಗೆ ಎಬಿಡಿ ಮೆಚ್ಚುಗೆ
Image Credit : bcci

ಜಡೇಜಾ, ಬುಮ್ರಾ ಕಮ್‌ಬ್ಯಾಕ್ ಬಗ್ಗೆ ಎಬಿಡಿ ಮೆಚ್ಚುಗೆ

ಇನ್ನು ಇದೇ ವೇಳೆ ರವೀಂದ್ರ ಜಡೇಜಾ, ಭಾರತ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದರ ಬಗ್ಗೆ ಎಬಿಡಿ ಸಂತಸ ವ್ಯಕ್ತಪಡಿಸಿದ್ದಾರೆ. 'ತಂಡದಲ್ಲಿ ಜಡೇಜಾ ಹೆಸರಿರುವುದು ನಿಜಕ್ಕೂ ಒಳ್ಳೆಯ ಸಂಗತಿಯಾಗಿದೆ. ಅವರು ಇತ್ತೀಚಿನ ದಿನಗಳಲ್ಲಿ ಯಾವಾಗ ಆಡುತ್ತಾರೆ, ಯಾವಾಗ ಆಡುವುದಿಲ್ಲ ಎನ್ನುವುದೇ ಗೊತ್ತಾಗುತ್ತಿಲ್ಲ. ಇನ್ನು ಬುಮ್ರಾ ಕೂಡಾ ಕಮ್‌ಬ್ಯಾಕ್ ಮಾಡಿರುವುದರಿಂದ ಎದುರಾಳಿ ಬ್ಯಾಟರ್‌ಗಳು ಅವರ ಎದುರು ಎಚ್ಚರಿಕೆಯಿಂದ ಆಡಬೇಕು. ಯಾಕೆಂದರೆ ಅವರೊಬ್ಬ ವಿಶ್ವದರ್ಜೆ ಬೌಲರ್ ಎಂದು ಬುಮ್ರಾರನ್ನು ಕೊಂಡಾಡಿದ್ದಾರೆ.

56
ಲಂಕಾ ಎದುರು ಎರಡು ಪಂದ್ಯಗಳ ಟೆಸ್ಟ್ ಸರಣಿ ಆಡಲಿರುವ ಭಾರತ
Image Credit : X/BCCI

ಲಂಕಾ ಎದುರು ಎರಡು ಪಂದ್ಯಗಳ ಟೆಸ್ಟ್ ಸರಣಿ ಆಡಲಿರುವ ಭಾರತ

ಭಾರತ ತಂಡವು ಮೊದಲು ಗಾಲೆಯಲ್ಲಿ ಆ ಬಳಿಕ ಎರಡನೇ ಟೆಸ್ಟ್ ಪಂದ್ಯವನ್ನು ಕೊಲಂಬೊದಲ್ಲಿ ಆಡಲಿದೆ. ಸದ್ಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಭಾರತ ತಂಡವು ಐದನೇ ಸ್ಥಾನದಲ್ಲಿದೆ. ಲಂಕಾ ಎದುರು ಉತ್ತಮ ಪ್ರದರ್ಶನ ತೋರಿ ಟೆಸ್ಟ್ ವಿಶ್ವಕಪ್ ಫೈನಲ್ ಕನಸನ್ನು ಜೀವಂತವಾಗಿಟ್ಟುಕೊಳ್ಳಲು ಭಾರತ ತಂಡ ಎದುರು ನೋಡುತ್ತಿದೆ. ಇನ್ನೊಂದೆಡೆ ಶ್ರೀಲಂಕಾ ಆರನೇ ಸ್ಥಾನದಲ್ಲಿದ್ದು, ತವರಿನಲ್ಲಿ ಗಿಲ್ ಪಡೆಗೆ ಶಾಕ್ ನೀಡಲು ಎದುರು ನೋಡುತ್ತಿದೆ.

66
ಶ್ರೀಲಂಕಾ ಎದುರಿನ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡ ಹೀಗಿದೆ:
Image Credit : Getty

ಶ್ರೀಲಂಕಾ ಎದುರಿನ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡ ಹೀಗಿದೆ:

ಶುಭ್‌ಮನ್ ಗಿಲ್(ನಾಯಕ), ಕೆ ಎಲ್ ರಾಹುಲ್(ಉಪನಾಯಕ), ಯಶಸ್ವಿ ಜೈಸ್ವಾಲ್, ರಿಷಭ್ ಪಂತ್(ವಿಕೆಟ್ ಕೀಪರ್), ಸಾಯಿ ಸುದರ್ಶನ್*, ಧ್ರುವ್ ಜುರೆಲ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮಾನವ್ ಸುತಾರ್, ಜಸ್ಪ್ರೀತ್ ಬುಮ್ರಾ*, ಮೊಹಮ್ಮದ್ ಸಿರಾಜ್, ಪ್ರಸಿದ್ದ್ ಕೃಷ್ಣ, ಗುರ್ನೂರ್ ಬ್ರಾರ್, ದೇವದತ್ ಪಡಿಕ್ಕಲ್, ಸಾರಾನ್ಶ್‌ ಜೈನ್.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಟೀಮ್ ಇಂಡಿಯಾ
ಟೆಸ್ಟ್ ಕ್ರಿಕೆಟ್
ಶ್ರೀಲಂಕಾ
Latest Videos
Recommended Stories
Recommended image1
ಯಾವ ಬೌಲರ್‌ ಎದುರಿಸೋದು ಕಷ್ಟ? - ವೈಭವ್ ಸೂರ್ಯವಂಶಿ ಕೊಟ್ಟ 4 ಪದಗಳ ಖಡಕ್ ಉತ್ತರ ವೈರಲ್!
Recommended image2
ಲಂಕಾ ಎದುರಿನ ಟೆಸ್ಟ್ ಸರಣಿಯಿಂದ ಔಟ್; ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ಗುಡ್ ಬೈ ಹೇಳಿದ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ
Recommended image3
Vaibhav Sooryavanshi: 3 ಪಂದ್ಯ, 2 ಫಿಫ್ಟಿ, 151 ರನ್!: ಜಿಂಬಾಬ್ವೆಯಲ್ಲಿ ಕೇವಲ 4 ದಿನದಲ್ಲಿ ವೈಭವ್ ಸೂರ್ಯವಂಶಿ ಗಳಿಸಿದ ಹಣವೆಷ್ಟು ಗೊತ್ತಾ?
Related Stories
Recommended image1
ಟೀಂ ಇಂಡಿಯಾಗೆ ಗುಡ್‌ಬೈ ಹೇಳಿದ 24 ಗಂಟೆಯಲ್ಲೇ ಗೌತಮ್ ಗಂಭೀರ್ ಆಪ್ತನ ಹೆಗಲೇರಿದ ಹೊಸ ಜವಾಬ್ದಾರಿ!
Recommended image2
ಲಂಕಾ ಎದುರಿನ ಟೆಸ್ಟ್ ಸರಣಿಯಿಂದ ಔಟ್; ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ಗುಡ್ ಬೈ ಹೇಳಿದ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved