ಸಡನ್ನಾಗಿ ಮೆಟ್ರೋದಲ್ಲಿ ಪ್ರಯಾಣ ಮಾಡಿದ ABD, ಮಿ.360 ಸರಳತೆ ಕಂಡು ಅಭಿಮಾನಿಗಳು ಫುಲ್ ಖುಷ್
ದಕ್ಷಿಣ ಆಫ್ರಿಕಾದ ಕ್ರಿಕೆಟ್ ದಿಗ್ಗಜ ಎಬಿಡಿ ವಿಲಿಯರ್ಸ್ ಮುಂಬೈ ಮೆಟ್ರೋದಲ್ಲಿ ಪ್ರಯಾಣಿಸಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ. ಪ್ರಚಾರ ಕಾರ್ಯಕ್ರಮಕ್ಕಾಗಿ ಮುಂಬೈಗೆ ಬಂದಿದ್ದ ಅವರು, ಸಾಮಾನ್ಯರಂತೆ ಮೆಟ್ರೋದಲ್ಲಿ ಪ್ರಯಾಣಿಸಿ ತಮ್ಮ ಸರಳತೆಯಿಂದ ಅಭಿಮಾನಿಗಳ ಮನಗೆದ್ದಿದ್ದಾರೆ.

ದಕ್ಷಿಣ ಆಫ್ರಿಕಾ ಕ್ರಿಕೆಟ್‌ನ ದಿಗ್ಗಜ, ಮಾಜಿ ನಾಯಕ ಹಾಗೂ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡದ ಸ್ಟಾರ್ ಪ್ಲೇಯರ್ ಎನಿಸಿಕೊಂಡಿದ್ದ ಎಬಿಡಿ ವಿಲಿಯರ್ಸ್ ಶುಕ್ರವಾರ ಮೆಟ್ರೋದಲ್ಲಿ ಪ್ರಯಾಣ ಮಾಡುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.
ಪ್ರಮೋಷನ್ ಕಾರ್ಯಕ್ಕಾಗಿ ಶುಕ್ರವಾರ ಮುಂಬೈಗೆ ಆಗಮಿಸಿದ್ದ ಮಿ.360 ಖ್ಯಾತಿಯ ಎಬಿಡಿ ವಿಲಿಯರ್ಸ್, ಸಂಜೆಯ ವೇಳೆಗೆ ಮುಂಬೈ ಮೆಟ್ರೋ ಅಕ್ವಾಲೈನ್ 3ಯಲ್ಲಿ ಪ್ರಯಾಣ ಮಾಡುವ ಮೂಲಕ ಗಮನಸೆಳೆದರು.
ಮುಂಬೈ ಮೆಟ್ರೋನ ಅಂಡರ್‌ಗ್ರೌಂಡ್ ಮಾರ್ಗವಾದ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ (ಬಿಕೆಸಿ) ಕಡೆಯಿಂದ ಚರ್ಚ್‌ಗೇಟ್‌ವರೆಗೆ ಅವರು ಪ್ರಯಾಣ ಮಾಡಿದರು. ಈ ವೇಳೆ ಮೆಟ್ರೋ ಅಧಿಕಾರಿಗಳು, ಭದ್ರತಾ ಸಿಬ್ಬಂದಿ ಹಾಗೂ ಅಭಿಮಾನಿಗಳು ಅವರೊಂದಿಗೆ ಫೋಟೋ ತೆಗೆಸಿಕೊಂಡು ಸಂಭ್ರಮಿಸಿದ್ದಾರೆ.
ಮೆಟ್ರೋ ಐನಾಕ್ಸ್ ಬಳಿಯ ದಿ ಚಾಂಪಿಯನ್ ಸ್ಪೋರ್ಟ್ಸ್‌ನಲ್ಲಿ ಆಯೋಜಿಸಲಾದ ಪ್ರಚಾರ ಉತ್ಪನ್ನ ಬಿಡುಗಡೆ ಮತ್ತು ಅಭಿಮಾನಿಗಳ ಭೇಟಿ ಮತ್ತು ಸ್ವಾಗತ ಕಾರ್ಯಕ್ರಮಕ್ಕಾಗಿ ಡಿವಿಲಿಯರ್ಸ್ ಶುಕ್ರವಾರ ಮುಂಬೈಗೆ ಭೇಟಿ ನೀಡಿದ್ದರು. ಈ ವೇಳೆ ಸ್ಥಳೀಯ ಮೈದಾನದಲ್ಲಿ ಅವರು ಹುಡುಗರೊಂದಿಗೆ ಟೆನ್ನಿಸ್ ಬಾಲ್ ಕ್ರಿಕೆಟ್ ಆಡಿರುವ ವಿಡಿಯೋ ಕೂಡ ವೈರಲ್ ಆಗಿದೆ.
ಅವರ ಪ್ರಯಾಣದ ವೀಡಿಯೊಗಳು ಮತ್ತು ಚಿತ್ರಗಳು ಸೋಶಿಯಲ್ ಮೀಡಿಯಾದಲ್ಲಿ ಅತ್ಯಂತ ಕ್ವಿಕ್ ಆಗಿ ವೈರಲ್ ಆದವು. ಪ್ರಯಾಣಿಕರೊಂದಿಗೆ ಸಂವಹನ ನಡೆಸುವಾಗ ಅವರ ಸರಳತೆಯನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.
ಟಿ ಶರ್ಟ್ ಹಾಗೂ ಶಾರ್ಟ್ಸ್ ಧರಿಸಿದ್ದ ಎಬಿಡಿ ವಿಲಿಯರ್ಸ್ ಕೈಯಲ್ಲಿ ಬಟ್ಟೆಯ ಬ್ಯಾಗ್‌ನಲ್ಲಿ ಏನನ್ನೂ ತುಂಬಿಕೊಂಡಿದ್ದರು. ಸರಳವಾಗಿ ಅವರು ಎಲ್ಲರೊಂದಿಗೂ ಬೆರೆತು ಮೆಟ್ರೋ ಪ್ರಯಾಣವನ್ನು ಎಂಜಾಯ್ ಮಾಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

