MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Raksha Bandhan Wishes
MLA Vinay Kulkarni
BJP Leaders Meet Siddaramaiah
Nepal Floods Death Toll
Teachers Suspended RSS Pathsanchalan
CM DK Shivakumar
Toxic OTT Release Date
ICC Test Rankings
Mekedatu Project
Nepal-tibet Floods
New Financial Rules September
Bengaluru Airport Gold Smuggling
Bengaluru Development Authority
Mangaluru Railway station
CJ Roy Death Case
Hosapete to Arasikere Train
  • Home
  • Sports
  • Cricket
  • ರೋಹಿತ್ ಶರ್ಮಾ ಬಿಟ್ಟು ಗಿಲ್‌ಗೆ ಒನ್‌ಡೇ ನಾಯಕತ್ವ ಪಟ್ಟ ಕಟ್ಟಿದ್ದೇಕೆ? ಹೊಸ ಬಾಂಬ್ ಸಿಡಿಸಿದ ಅಜಿತ್ ಅಗರ್ಕರ್!

ರೋಹಿತ್ ಶರ್ಮಾ ಬಿಟ್ಟು ಗಿಲ್‌ಗೆ ಒನ್‌ಡೇ ನಾಯಕತ್ವ ಪಟ್ಟ ಕಟ್ಟಿದ್ದೇಕೆ? ಹೊಸ ಬಾಂಬ್ ಸಿಡಿಸಿದ ಅಜಿತ್ ಅಗರ್ಕರ್!

ಮುಂಬೈ: ಆಸ್ಟ್ರೇಲಿಯಾ ಪ್ರವಾಸಕ್ಕೆ ಇದೀಗ ಭಾರತ ಕ್ರಿಕೆಟ್ ತಂಡ ಪ್ರಕಟವಾಗಿದೆ. ಆಸೀಸ್ ಪ್ರವಾಸದಲ್ಲಿ ಭಾರತ ತಂಡವು ಸೀಮಿತ ಓವರ್‌ಗಳ ಸರಣಿಯನ್ನಾಡಲಿದೆ. ಏಕದಿನ ಸರಣಿಗೆ ರೋಹಿತ್ ಕೆಳಗಿಳಿಸಿ ಗಿಲ್‌ಗೆ ನಾಯಕ ಪಟ್ಟ ಕಟ್ಟಿದ್ದೇಕೆ ಎನ್ನುವುದನ್ನು ಆಯ್ಕೆ ಸಮಿತಿ ಮುಖ್ಯಸ್ಥ ಅಗರ್ಕರ್ ವಿವರಿಸಿದ್ದಾರೆ.

2 Min read
Author : Naveen Kodase
Published : Oct 04 2025, 03:44 PM IST
Share this Photo Gallery
  • FB
  • TW
  • Linkdin
  • Whatsapp
18
ಆಸ್ಟ್ರೇಲಿಯಾ ಎದುರಿನ ಏಕದಿನ ಸರಣಿ
Image Credit : ANI

ಆಸ್ಟ್ರೇಲಿಯಾ ಎದುರಿನ ಏಕದಿನ ಸರಣಿ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಇದೇ ಅಕ್ಟೋಬರ್ 19, 23 ಹಾಗೂ 25ರಂದು ಕ್ರಮವಾಗಿ ಪರ್ತ್, ಅಡಿಲೇಡ್ ಹಾಗೂ ಸಿಡ್ನಿಯಲ್ಲಿ ನಡೆಯಲಿದೆ. ಈ ಸರಣಿಗೆ ಇದೀಗ ಭಾರತ ಕ್ರಿಕೆಟ್ ತಂಡ ಪ್ರಕಟವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
28
ಗಿಲ್ ಭಾರತ ಏಕದಿನ ತಂಡದ ನೂತನ ನಾಯಕ
Image Credit : Getty

ಗಿಲ್ ಭಾರತ ಏಕದಿನ ತಂಡದ ನೂತನ ನಾಯಕ

ಭಾರತಕ್ಕೆ ಐಸಿಸಿ ಟಿ20 ವಿಶ್ವಕಪ್ ಹಾಗೂ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದುಕೊಟ್ಟ ನಾಯಕ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಿ, ಶುಭ್‌ಮನ್ ಗಿಲ್‌ಗೆ ಭಾರತ ಏಕದಿನ ತಂಡದ ನಾಯಕ ಪಟ್ಟ ಕಟ್ಟಲಾಗಿದೆ. ಇನ್ನು ಶ್ರೇಯಸ್ ಅಯ್ಯರ್ ಉಪನಾಯಕನಾಗಿ ನೇಮಕವಾಗಿದ್ದಾರೆ.

Related Articles

Related image1
ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತಿಹೆಚ್ಚು ಶತಕ ಸಿಡಿಸಿದ ಟೀಂ ಇಂಡಿಯಾ ಟಾಪ್-6 ಓಪನ್ನರ್ಸ್‌! ಎಲೈಟ್ ಗ್ರೂಪ್ ಸೇರಿದ ರಾಹುಲ್
Related image2
ಆಸ್ಟ್ರೇಲಿಯಾ ಪ್ರವಾಸಕ್ಕೆ ಬಲಿಷ್ಠ ಭಾರತ ತಂಡ ಪ್ರಕಟ; ರೋಹಿತ್ ಶರ್ಮಾಗೆ ಶಾಕ್, ಗಿಲ್ ಹೊಸ ಕ್ಯಾಪ್ಟನ್!
38
ರೋಹಿತ್ ಶರ್ಮಾಗೆ ಶಾಕ್?
Image Credit : Getty

ರೋಹಿತ್ ಶರ್ಮಾಗೆ ಶಾಕ್?

ರೋಹಿತ್ ಶರ್ಮಾ 2027ರವರೆಗೆ ಭಾರತ ಏಕದಿನ ತಂಡದ ನಾಯಕರಾಗಿ ಮುಂದುವರೆಯಲಿದ್ದಾರೆ ಎನ್ನಲಾಗುತ್ತಿತ್ತು. ಈ ಕಾರಣಕ್ಕಾಗಿಯೇ ರೋಹಿತ್ ಶರ್ಮಾ ಟೆಸ್ಟ್ ಹಾಗೂ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು ಎಂದು ವರದಿಯಾಗಿತ್ತು.

48
ರೋಹಿತ್ ಶರ್ಮಾ ನಾಯಕತ್ವದಿಂದ ಕೆಳಗಿಳಿದಿದ್ದು ಏಕೆ?
Image Credit : Getty

ರೋಹಿತ್ ಶರ್ಮಾ ನಾಯಕತ್ವದಿಂದ ಕೆಳಗಿಳಿದಿದ್ದು ಏಕೆ?

ಇದೆಲ್ಲದರ ನಡುವೆ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಲಾಗಿದ್ದು, ಆಸ್ಟ್ರೇಲಿಯಾ ಎದುರಿನ ಸರಣಿಗೆ ಕೇವಲ ಆಟಗಾರನಾಗಿ ಮಾತ್ರ ತಂಡದಲ್ಲಿ ಸ್ಥಾನ ನೀಡಲಾಗಿದೆ. ಈ ಕುರಿತಂತೆ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಹೊಸ ಬಾಂಬ್ ಸಿಡಿಸಿದ್ದಾರೆ.

58
ರೋಹಿತ್-ಕೊಹ್ಲಿ 2027ರ ವಿಶ್ವಕಪ್ ಆಡೋದು ಡೌಟ್
Image Credit : Getty

ರೋಹಿತ್-ಕೊಹ್ಲಿ 2027ರ ವಿಶ್ವಕಪ್ ಆಡೋದು ಡೌಟ್

ನಾಯಕತ್ವ ಬದಲಾವಣೆ ಕುರಿತಂತೆ ನಾವು ರೋಹಿತ್ ಶರ್ಮಾ ಜತೆ ಮಾತನಾಡಿದ್ದೇವೆ. ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ 2027ರ ಏಕದಿನ ವಿಶ್ವಕಪ್ ಆಡುವ ಬಗ್ಗೆ ಇನ್ನೂ ಸ್ಪಷ್ಟ ತೀರ್ಮಾನ ಹೊಂದಿಲ್ಲ ಎಂದು ಅಗರ್ಕರ್ ತಿಳಿಸಿದ್ದಾರೆ.

68
ಗಿಲ್‌ಗೆ ನಾಯಕತ್ವ ಪಟ್ಟ ಕಟ್ಟಿದ್ದು ಏಕೆ?
Image Credit : X

ಗಿಲ್‌ಗೆ ನಾಯಕತ್ವ ಪಟ್ಟ ಕಟ್ಟಿದ್ದು ಏಕೆ?

ಪ್ರಾಕ್ಟಿಕಲ್ ಆಗಿ ಮೂರು ಮಾದರಿಯ ಕ್ರಿಕೆಟ್‌ಗೆ ಮೂವರು ನಾಯಕರಿರುವುದು ಅಷ್ಟೊಂದು ಸೂಕ್ತವಲ್ಲ. ಅದರಲ್ಲೂ ಈಗ ಏಕದಿನ ಕ್ರಿಕೆಟ್‌ ಮಾದರಿಯಲ್ಲಿ ಕಡಿಮೆ ಪಂದ್ಯಗಳು ನಡೆಯುತ್ತಿವೆ. ಏಕದಿನ ಮಾದರಿಯಲ್ಲಿ ಗಿಲ್‌ಗೆ ತಂಡ ಕಟ್ಟಲು ಸಾಕಷ್ಟು ಸಮಯ ನೀಡುವ ಉದ್ದೇಶದಿಂದ ನಾಯಕತ್ವ ಪಟ್ಟ ಕಟ್ಟಲಾಗಿದೆ ಎಂದು ಅಗರ್ಕರ್ ಹೇಳಿದ್ದಾರೆ.

78
ಕೊಹ್ಲಿ-ರೋಹಿತ್ ಯುಗಾಂತ್ತ?
Image Credit : Getty

ಕೊಹ್ಲಿ-ರೋಹಿತ್ ಯುಗಾಂತ್ತ?

ಈ ಮೂಲಕ ಅಜಿತ್ ಅಗರ್ಕರ್, 2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆಯೋದು ಅನುಮಾನ ಎನ್ನುವಂತ ಪರೋಕ್ಷ ಸಂದೇಶವನ್ನು ರವಾನಿಸಿದ್ದಾರೆ.

88
ಆಸ್ಟ್ರೇಲಿಯಾ ಎದುರಿನ ಏಕದಿನ ಸರಣಿಗೆ ಭಾರತ ತಂಡ ಹೀಗಿದೆ:
Image Credit : ANI

ಆಸ್ಟ್ರೇಲಿಯಾ ಎದುರಿನ ಏಕದಿನ ಸರಣಿಗೆ ಭಾರತ ತಂಡ ಹೀಗಿದೆ:

ಶುಭ್‌ಮನ್ ಗಿಲ್(ನಾಯಕ), ಶ್ರೇಯಸ್ ಅಯ್ಯರ್(ಉಪನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್(ವಿಕೆಟ್ ಕೀಪರ್,), ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಶದೀಪ್ ಸಿಂಗ್, ಪ್ರಸಿದ್ದ್ ಕೃಷ್ಣ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಟೀಮ್ ಇಂಡಿಯಾ
ರೋಹಿತ್ ಶರ್ಮಾ
ಬಿಸಿಸಿಐ

Latest Videos
Recommended Stories
Recommended image1
Cricket: ಶ್ರೀಲಂಕಾ ಸರಣಿ ಮುಕ್ತಾಯ; ಮತ್ತೆ ಮೈದಾನಕ್ಕಿಳಿಯುವುದು ಎಂದು ಟೀಮ್ ಇಂಡಿಯಾ? ಡಿಸೆಂಬರ್‌ವರೆಗೆ ಪ್ಯಾಕ್ ಆಗಿದೆ ಶೆಡ್ಯೂಲ್!
Recommended image2
‘ನಂಬರ್ 3’ ಬ್ಯಾಟಿಂಗ್ ಬಗ್ಗೆ ದ್ರಾವಿಡ್ ಹೇಳಿದ್ದ ಆ ಒಂದು ಮಾತು: ಹಳೆಯ ಅಪರೂಪದ ನೆನಪು ಬಿಚ್ಚಿಟ್ಟ ಸೌರವ್ ಗಂಗೂಲಿ
Recommended image3
WTC Points Table: ತಲೆ ಕೆಳಗಾದ ಟೀಂ ಇಂಡಿಯಾ ಲೆಕ್ಕಾಚಾರ; ಫೈನಲ್ ಕನಸು ನನಸಿಗೆ ದಾರಿ ಯಾವುದು?
Related Stories
Recommended image1
ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತಿಹೆಚ್ಚು ಶತಕ ಸಿಡಿಸಿದ ಟೀಂ ಇಂಡಿಯಾ ಟಾಪ್-6 ಓಪನ್ನರ್ಸ್‌! ಎಲೈಟ್ ಗ್ರೂಪ್ ಸೇರಿದ ರಾಹುಲ್
Recommended image2
ಆಸ್ಟ್ರೇಲಿಯಾ ಪ್ರವಾಸಕ್ಕೆ ಬಲಿಷ್ಠ ಭಾರತ ತಂಡ ಪ್ರಕಟ; ರೋಹಿತ್ ಶರ್ಮಾಗೆ ಶಾಕ್, ಗಿಲ್ ಹೊಸ ಕ್ಯಾಪ್ಟನ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved