ಅರ್ಜುನ್ ತೆಂಡೂಲ್ಕರ್ ಮದುವೆ ಡೇಟ್ ಫಿಕ್ಸ್; ಹಸೆಮಣೆ ಏರಲು ರೆಡಿಯಾದ ಸಚಿನ್ ಪುತ್ರ!
ಬೆಂಗಳೂರು: ಭಾರತ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಮದುವೆ ಡೇಟ್ ಫಿಕ್ಸ್ ಆಗಿದೆ ಎಂದು ವರದಿಯಾಗಿದೆ.

ಅರ್ಜುನ್ ತೆಂಡೂಲ್ಕರ್ ಮದುವೆ
ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಮುಂಬರುವ ಮಾರ್ಚ್ 05ರಂದು ಸಾನಿಯಾ ಚಾಂದೋಕ್ ಅವರನ್ನು ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ.
ಮಾರ್ಚ್ 03ರಿಂದಲೇ ಮದುವೆ ಸಂಭ್ರಮಾಚರಣೆ ಆರಂಭ
ಅರ್ಜುನ್ ತೆಂಡೂಲ್ಕರ್ ಹಾಗೂ ಸಾನಿಯಾ ಚಾಂದೋಕ್ ಅವರ ಮದುವೆ ಕಾರ್ಯಕ್ರಮವು ಮಾರ್ಚ್ 03ರಿಂದಲೇ ಆರಂಭವಾಗಲಿದ್ದು, ಮಾರ್ಚ್ 05ರಂದು ಪ್ರಮುಖ ಮದುವೆ ಕಾರ್ಯಕ್ರಮ ನಡೆಯಲಿದೆ ಎಂದು ವರದಿಯಾಗಿದೆ.
2025ರ ಆಗಸ್ಟ್‌ನಲ್ಲಿ ಎಂಗೇಜ್‌ಮೆಂಟ್
2025ರ ಆಗಸ್ಟ್‌ನಲ್ಲಿ ಅರ್ಜುನ್ ತೆಂಡೂಲ್ಕರ್ ಹಾಗೂ ಸಾನಿಯಾ ಚಾಂದೋಕ್ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದರು. ಈ ಎಂಗೇಜ್‌ಮೆಂಟ್ ನಲ್ಲಿ ಕುಟುಂಬಸ್ಥರು ಹಾಗೂ ಆಪ್ತ ಸ್ನೇಹಿತರಷ್ಟೇ ಪಾಲ್ಗೊಂಡಿದ್ದರು.
ಅರ್ಜುನ್ ಮದುವೆಯಲ್ಲಿ ಹಲವು ಸೆಲಿಬ್ರಿಟಿಗಳು ಭಾಗಿ
ಅರ್ಜುನ್ ತೆಂಡೂಲ್ಕರ್ ಅವರ ಮದುವೆ ಕಾರ್ಯಕ್ರಮವು ಮುಂಬೈನಲ್ಲಿ ನಡೆಯಲಿದ್ದು, ಕುಟುಂಬಸ್ಥರು, ಕ್ರಿಕೆಟ್ ತಾರೆಯರು ಹಾಗೂ ಬಾಲಿವುಡ್ ಸೆಲಿಬ್ರಿಟಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.
ದೇಶಿ ಕ್ರಿಕೆಟ್‌ನಲ್ಲಿ ಗೋವಾ ಪ್ರತಿನಿಧಿಸುತ್ತಿರುವ ಸಚಿನ್ ಪುತ್ರ
ಇನ್ನು ಅರ್ಜುನ್ ತೆಂಡೂಲ್ಕರ್ ಕ್ರಿಕೆಟ್ ವೃತ್ತಿಜೀವನದ ಬಗ್ಗೆ ಹೇಳುವುದಾದರೇ, ಬೌಲಿಂಗ್ ಆಲ್ರೌಂಡರ್ ಆಗಿರುವ ಅವರು ದೇಶಿ ಕ್ರಿಕೆಟ್‌ನಲ್ಲಿ ಗೋವಾ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
2026ರಲ್ಲಿ ಲಖನೌ ಸೂಪರ್ ಜೈಂಟ್ಸ್ ಪ್ರತಿನಿಧಿಸಲಿರುವ ಅರ್ಜುನ್
ಇನ್ನು ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿದ್ದ ಅರ್ಜುನ್ ತೆಂಡೂಲ್ಕರ್ ಮುಂಬರುವ 2026ರ ಐಪಿಎಲ್ ಟೂರ್ನಿಯಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡವನ್ನು ಪ್ರತಿನಿಧಿಸಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.
