ಅಶ್ವಿನ್ ಜತೆ ಸೇರಿ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಬರೆದ ರವಿಚಂದ್ರನ್ ಅಶ್ವಿನ್..!
ಹೈದರಾಬಾದ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಭರ್ಜರಿಯಾಗಿಯೇ ಸಾಗುತ್ತಿದೆ. ಮೊದಲ ಪಂದ್ಯದ ಮೊದಲ ಇನಿಂಗ್ಸ್‌ನಲ್ಲೇ ಭಾರತದ ಕಿಲಾಡಿ ಜೋಡಿ ಎನಿಸಿಕೊಂಡಿರುವ ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಅಪರೂಪದ ದಾಖಲೆ ಬರೆದಿದ್ದಾರೆ. ಏನದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯವು ಹೈದರಾಬಾದ್‌ನ ಶ್ರೀ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಮೈದಾನದಲ್ಲಿ ಆರಂಭವಾಗಿದೆ.
ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್‌ಗೆ ಶಾಕ್ ನೀಡುವಲ್ಲಿ ಭಾರತದ ಕಿಲಾಡಿ ಸ್ಪಿನ್ ಜೋಡಿಯಾಗಿರುವ ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಯಶಸ್ವಿಯಾಗಿದ್ದಾರೆ.
ಹೌದು, ಇದೀಗ ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಜೋಡಿಯ ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ಪರ ಗರಿಷ್ಠ ವಿಕೆಟ್ ಕಬಳಿಸಿದ ಬೌಲಿಂಗ್ ಜೋಡಿ ಎನ್ನುವ ದಾಖಲೆ ಬರೆಯುವಲ್ಲಿ ಯಶಸ್ವಿಯಾಗಿದೆ.
ಅಶ್ವಿನ್-ಜಡೇಜಾ ಜೋಡಿಯು ಇದೀಗ ಭಾರತದ ಸ್ಪಿನ್ ದಂತಕಥೆಗಳೆನಿಸಿರುವ ಅನಿಲ್ ಕುಂಬ್ಳೆ ಹಾಗೂ ಹರ್ಭಜನ್ ಸಿಂಗ್ ಜೋಡಿಯ ದಾಖಲೆ ಮುರಿದಿದ್ದಾರೆ. ಕುಂಬ್ಳೆ ಹಾಗೂ ಭಜ್ಜಿ ಜೋಡಿಯು ಒಟ್ಟಾಗಿ ಭಾರತ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ 501 ಬಲಿ ಪಡೆದಿದ್ದರು.
501 ಟೆಸ್ಟ್ ವಿಕೆಟ್‌ಗಳ ಪೈಕಿ ಕನ್ನಡಿಗ ಅನಿಲ್ ಕುಂಬ್ಳೆ 281 ವಿಕೆಟ್ ಕಬಳಿಸಿದರೆ, ಅನುಭವಿ ಆಫ್‌ಸ್ಪಿನ್ನರ್ ಎನಿಸಿಕೊಂಡಿದ್ದ ಹರ್ಭಜನ್ ಸಿಂಗ್ 220 ಟೆಸ್ಟ್ ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದರು.
ಇದೀಗ ರವಿಚಂದ್ರನ್ ಅಶ್ವಿನ್ ಹಾಗೂ ಹರ್ಭಜನ್ ಸಿಂಗ್ ಜೋಡಿಯು ಕೇವಲ 50 ಟೆಸ್ಟ್ ಪಂದ್ಯಗಳನ್ನಾಡಿ ಭಜ್ಜಿ-ಕುಂಬ್ಳೆ ರೆಕಾರ್ಡ್ ಮುರಿದಿದ್ದಾರೆ. ಇನ್ನು ಅಶ್ವಿನ್ ಇದೀಗ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ 150 ವಿಕೆಟ್ ಕಬಳಿಸಿದ ಭಾರತದ ಮೊದಲ ಬೌಲರ್ ಎನಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.