- Home
- Sports
- Cricket
- Asia Cup 2022: ಲಂಕಾ ಎದುರಿನ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ: ಸ್ಟಾರ್ ಆಟಗಾರನ ಕೈಬಿಡುತ್ತಾ ಟೀಂ ಇಂಡಿಯಾ?
Asia Cup 2022: ಲಂಕಾ ಎದುರಿನ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ: ಸ್ಟಾರ್ ಆಟಗಾರನ ಕೈಬಿಡುತ್ತಾ ಟೀಂ ಇಂಡಿಯಾ?
ದುಬೈ: ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಪಂದ್ಯದಲ್ಲಿ ಭಾರತ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿಯಾಗುತ್ತಿವೆ. ಈಗಾಗಲೇ ಪಾಕಿಸ್ತಾನ ವಿರುದ್ದ ರೋಚಕ ಸೋಲು ಕಂಡಿರುವ ಟೀಂ ಇಂಡಿಯಾ, ಫೈನಲ್ ಪ್ರವೇಶಿಸಬೇಕಿದ್ದರೇ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಹೀಗಾಗಿ ಲಂಕಾ ಎದುರಿನ ಪಂದ್ಯಕ್ಕೆ ರೋಹಿತ್ ಶರ್ಮಾ ಪಡೆ ಕೆಲ ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

1. ಕೆ ಎಲ್ ರಾಹುಲ್: ಟೀಂ ಇಂಡಿಯಾ ಉಪನಾಯಕ ಕೆ ಎಲ್ ರಾಹುಲ್ ದೊಡ್ಡ ಮೊತ್ತ ಗಳಿಸಲು ಪರದಾಡುತ್ತಿದ್ದಾರೆ. ಹೀಗಿದ್ದೂ ಕಳೆದ ಪಂದ್ಯದಲ್ಲಿ ಚುರುಕಾಗಿ ರನ್ ಗಳಿಸಿ ಗಮನ ಸೆಳೆದಿದ್ದರು.
Image credit: Getty
2. ರೋಹಿತ್ ಶರ್ಮಾ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂದ ಕೂಡಾ ದೊಡ್ಡ ಮೊತ್ತ ಮೂಡಿಬರುತ್ತಿಲ್ಲ. ಲಂಕಾ ವಿರುದ್ದ ಒಳ್ಳೆಯ ಟ್ರ್ಯಾಕ್ ರೆಕಾರ್ಡ್ ಹೊಂದಿರುವ ರೋಹಿತ್ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ
3. ವಿರಾಟ್ ಕೊಹ್ಲಿ: ಮಾಜಿ ನಾಯಕ ವಿರಾಟ್ ಕೊಹ್ಲಿ ಏಷ್ಯಾಕಪ್ ಟೂರ್ನಿಯಲ್ಲಿ ಭರ್ಜರಿ ಫಾರ್ಮ್‌ನಲ್ಲಿದ್ದು, ಕಳೆದೆರಡು ಪಂದ್ಯಗಳಲ್ಲೂ ಆಕರ್ಷಕ ಅರ್ಧಶತಕ ಸಿಡಿಸಿದ್ದಾರೆ. ಕೊಹ್ಲಿ ಮೂರು ಪಂದ್ಯಗಳಿಂದ ಒಟ್ಟು 154 ರನ್ ಬಾರಿಸಿ ಟೂರ್ನಿಯಲ್ಲಿ ಎರಡನೇ ಗರಿಷ್ಠ ಸ್ಕೋರರ್ ಎನಿಸಿಕೊಂಡಿದ್ದಾರೆ.
Image credit: Getty
4. ಸೂರ್ಯಕುಮಾರ್ ಯಾದವ್: ಹಾಂಕಾಂಗ್ ಎದುರು ಅಬ್ಬರಿಸಿದ್ದ ಸೂರ್ಯ, ಅದೇ ಪ್ರದರ್ಶನವನ್ನು ಪಾಕಿಸ್ತಾನ ಎದುರು ಮರುಕಳಿಸುವಲ್ಲಿ ವಿಫಲವಾಗಿದ್ದರು. ಸೂರ್ಯಕುಮಾರ್ ಅಬ್ಬರಿಸಿದರೇ ಟೀಂ ಇಂಡಿಯಾಗೆ ಯಾವುದೇ ಗುರಿ ಕಷ್ಟವಾಗಲಾರದು.
5. ಹಾರ್ದಿಕ್ ಪಾಂಡ್ಯ: ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ಪಾಕಿಸ್ತಾನ ಎದುರು ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ವೈಫಲ್ಯ ಅನುಭವಿಸಿದ್ದರು. ಇದೀಗ ಪಾಂಡ್ಯ ಲಂಕಾ ಎದುರು ಜವಾಬ್ದಾರಿಯುತ ಪ್ರದರ್ಶನ ತೋರಬೇಕಿದೆ
6. ದಿನೇಶ್ ಕಾರ್ತಿಕ್: ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್, ಏಷ್ಯಾಕಪ್ ಟೂರ್ನಿಯಲ್ಲಿ ಘರ್ಜಿಸಲು ಸಾಧ್ಯವಾಗಿಲ್ಲ. ಹೀಗಾಗಿ ಲಂಕಾ ಎದುರಿನ ಪಂದ್ಯದಲ್ಲಿ ಡಿಕೆಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆಯಿದೆ.
7. ಅಕ್ಷರ್ ಪಟೇಲ್: ರವೀಂದ್ರ ಜಡೇಜಾ ಗಾಯಕ್ಕೆ ತುತ್ತಾಗಿ ಸರಣಿಯಿಂದ ಹೊರಬಿದ್ದಿರುವುದರಿಂದ ಎರಡನೇ ಆಲ್ರೌಂಡರ್ ಆಲ್ರೌಂಡರ್ ರೂಪದಲ್ಲಿ ಇಂದು ಅಕ್ಷರ್ ಪಟೇಲ್‌ಗೆ ಸ್ಥಾನ ದೊರೆಯುವ ಸಾಧ್ಯತೆಯಿದೆ. ಹೀಗಾದಲ್ಲಿ ದೀಪಕ್ ಹೂಡಾ ಹೊರಗುಳಿಯಬೇಕಾಗುತ್ತದೆ.
8. ರವಿಚಂದ್ರನ್ ಅಶ್ವಿನ್: ಅನುಭವಿ ಆಫ್‌ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಕಳೆದ ಮೂರು ಪಂದ್ಯಗಳಲ್ಲಿ ಬೆಂಚ್ ಕಾಯಿಸಿದ್ದರು. ಇದೇ ವೇಳೆ ಚಹಲ್ ವಿಕೆಟ್ ಕಬಳಿಸಲು ವಿಫಲವಾಗುತ್ತಿರುವ ಹಿನ್ನೆಲೆಯಲ್ಲಿ ಅಶ್ವಿನ್‌ಗೆ ಮಣೆ ಹಾಕುವ ಸಾಧ್ಯತೆಯಿದೆ.
9. ಭುವನೇಶ್ವರ್ ಕುಮಾರ್: ಅನುಭವಿ ವೇಗಿ ಭುವಿ ಕಳೆದ ಪಂದ್ಯದಲ್ಲಿ ಪಾಕಿಸ್ತಾನ ಎದುರು ದುಬಾರಿಯಾಗಿದ್ದರು. ಹೀಗಿದ್ದೂ ಟೀಂ ಇಂಡಿಯಾ, ಲಂಕಾ ಎದುರು ಗೆಲ್ಲಬೇಕಿದ್ದರೇ ಭುವನೇಶ್ವರ್ ಕುಮಾರ್ ಜವಾಬ್ದಾರಿಯುತ ಪ್ರದರ್ಶನ ತೋರಬೇಕಿದೆ.
10. ಆರ್ಶದೀಪ್ ಸಿಂಗ್:
ಚಂಡೀಗಢ ಮೂಲದ ಯುವ ವೇಗಿ ಆರ್ಶದೀಪ್ ಸಿಂಗ್ ಶಿಸ್ತುಬದ್ದ ದಾಳಿ ನಡೆಸುವ ಮೂಲಕ ಗಮನ ಸೆಳೆಯುತ್ತಿದ್ದಾರೆ. ಹೀಗಾಗಿ ಬಹುತೇಕ ಆರ್ಶದೀಪ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವುದು ಖಚಿತ ಎನಿಸಿದೆ.
Image credit: Getty
11. ರವಿ ಬಿಷ್ಣೋಯಿ: ಯುವ ಲೆಗ್‌ಸ್ಪಿನ್ನರ್ ಬಿಷ್ಣೋಯಿ ಕಳೆದ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿ ಕೇವಲ 26 ರನ್ ನೀಡಿ ಒಂದು ವಿಕೆಟ್ ಕಬಳಿಸಿದ್ದರು. ಬಿಷ್ಣೋಯಿ ಮತ್ತೆ ಕಣಕ್ಕಿಳಿಯುವುದು ಬಹುತೇಕ ಖಚಿತ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.