Asia Cup 2022: ಪಾಕ್ ಎದುರಿನ ಪಂದ್ಯಕ್ಕೆ ಬಲಿಷ್ಠ ಸಂಭಾವ್ಯ ತಂಡ ಪ್ರಕಟ..!
ದುಬೈ(ಆ.28): ಏಷ್ಯಾಕಪ್ ಟೂರ್ನಿಯ ಬಹುನಿರೀಕ್ಷಿತ ಪಂದ್ಯ ಎನಿಸಿಕೊಂಡಿರುವ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಕಾದಾಟಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಹೈವೋಲ್ಟೇಜ್ ಪಂದ್ಯ ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಪಾಕಿಸ್ತಾನ ಎದುರಿನ ಪಂದ್ಯಕ್ಕೆ ಭಾರತದ ಸಂಭಾವ್ಯ ತಂಡ ಹೀಗಿದೆ ನೋಡಿ

rohit
1. ರೋಹಿತ್ ಶರ್ಮಾ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಟಿ20 ಕ್ರಿಕೆಟ್‌ನಲ್ಲಿ ಎರಡನೇ ಗರಿಷ್ಠ ರನ್ ಬಾರಿಸಿದ ಆಟಗಾರ ಎನಿಸಿಕೊಂಡಿದ್ದು, ಪಾಕಿಸ್ತಾನ ಎದುರಿನ ಪಂದ್ಯದಲ್ಲಿ ಆರಂಭಿಕನಾಗಿ ಹಾಗೂ ನಾಯಕನಾಗಿ ಯಶಸ್ವಿಯಾಗಲು ತುದಿಗಾಲಿನಲ್ಲಿ ನಿಂತಿದ್ದಾರೆ.
2. ಕೆ ಎಲ್ ರಾಹುಲ್: ಜಿಂಬಾಬ್ವೆ ಎದುರಿನ ಸರಣಿ ವೇಳೆ ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡಿರುವ ಕೆ ಎಲ್ ರಾಹುಲ್, ನಿರೀಕ್ಷಿತ ಪ್ರದರ್ಶನ ತೋರಲು ವಿಫಲವಾಗಿದ್ದರು. ಇದೀಗ ಪಾಕ್ ಎದುರಿನ ಪಂದ್ಯದಲ್ಲಿ ಆರಂಭಿಕರಾಗಿ ಮಿಂಚಲು ರಾಹುಲ್ ರೆಡಿಯಾಗಿದ್ದಾರೆ.
Image credit: Getty
3. ವಿರಾಟ್ ಕೊಹ್ಲಿ: ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ, ತಮ್ಮ ವೃತ್ತಿಜೀವನದ 100ನೇ ಅಂತಾರಾಷ್ಟ್ರೀಯ ಪಂದ್ಯವನ್ನಾಡಲು ರೆಡಿಯಾಗಿದ್ದು, ಮಹತ್ವದ ಪಂದ್ಯದಲ್ಲಿ ಸ್ಮರಣೀಯ ಇನಿಂಗ್ಸ್ ಕಟ್ಟಲು ಎದುರು ನೋಡುತ್ತಿದ್ದಾರೆ.
4. ಸೂರ್ಯಕುಮಾರ್ ಯಾದವ್: ಟೀಂ ಇಂಡಿಯಾ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಆಧಾರಸ್ತಂಭ ಎನಿಸಿಕೊಂಡಿರುವ ಸೂರ್ಯಕುಮಾರ್ ಉತ್ತಮ ಫಾರ್ಮ್‌ನಲ್ಲಿ 360 ಡಿಗ್ರಿಯಲ್ಲಿ ರನ್‌ಗಳಿಸುವ ಸಾಮರ್ಥ್ಯ ಹೊಂದಿದ್ದಾರೆ.
Rishabh Pant
5. ರಿಷಭ್ ಪಂತ್: ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ಜಿಂಬಾಬ್ವೆ ಎದುರಿನ ಏಕದಿನ ಸರಣಿಯಿಂದ ಹೊರಗುಳಿದಿದ್ದರು. ಇದೀಗ ಪಾಕ್ ಬೌಲರ್‌ಗಳ ಮೇಲೆ ಸವಾರಿ ಮಾಡಲು ಪಂತ್ ರೆಡಿಯಾಗಿದ್ದಾರೆ.
6. ಹಾರ್ದಿಕ್ ಪಾಂಡ್ಯ: ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ಪಾಂಡ್ಯ, ಭರ್ಜರಿ ಫಾರ್ಮ್‌ನಲ್ಲಿದ್ದು ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಮಿಂಚುವ ಸಾಮರ್ಥ್ಯ ಹೊಂದಿದ್ದಾರೆ.
7. ರವೀಂದ್ರ ಜಡೇಜಾ: ಟೀಂ ಇಂಡಿಯಾದ ಮತ್ತೋರ್ವ ಆಲ್ರೌಂಡರ್ ರವೀಂದ್ರ ಜಡೇಜಾ ಸಂಪೂರ್ಣ ಫಿಟ್ ಆಗಿದ್ದು, ಅಗತ್ಯ ಸಂದರ್ಭದಲ್ಲಿ ವಿಕೆಟ್ ಕಬಳಿಸುವುದರ ಜತೆಗೆ ಫೀಲ್ಡಿಂಗ್ ಹಾಗೂ ಬೌಲಿಂಗ್‌ನಲ್ಲೂ ತಂಡಕ್ಕೆ ಆಸರೆಯಾಗುವ ಕ್ಷಮತೆಯಿದೆ.
8. ರವಿಚಂದ್ರನ್ ಅಶ್ವಿನ್: ಅನುಭವಿ ಆಫ್‌ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ದುಬೈ ಪಿಚ್‌ನಲ್ಲಿ ಪರಿಣಾಮಕಾರಿ ಬೌಲಿಂಗ್ ನಡೆಸುವ ಸಾಮರ್ಥ್ಯ ಹೊಂದಿದ್ದಾರೆ.
Bhuvneshwar Kumar
9. ಭುವನೇಶ್ವರ್ ಕುಮಾರ್: ಟೀಂ ಇಂಡಿಯಾ ಸ್ವಿಂಗ್ ಸ್ಪೆಷಲಿಸ್ಟ್ ಭುವನೇಶ್ವರ್ ಕುಮಾರ್, ಸದ್ಯ ಟೀಂ ಇಂಡಿಯಾದ ಯಶಸ್ವಿ ವೇಗದ ಬೌಲರ್ ಆಗಿ ಹೊರಹೊಮ್ಮಿದ್ದು, ಭಾರತದ ಬೌಲಿಂಗ್ ಪಡೆ ಮುನ್ನಡೆಸುವ ಜವಾಬ್ದಾರಿಯಿದೆ.
Arshdeep Singh
10. ಆರ್ಶದೀಪ್ ಸಿಂಗ್: ಹರ್ಷಲ್ ಪಟೇಲ್ ಅನುಪಸ್ಥಿತಿಯಲ್ಲಿ ಪಂಜಾಬ್ ಮೂಲದ ಎಡಗೈ ವೇಗಿ ಆರ್ಶದೀಪ್ ಡೆತ್ ಓವರ್ ಸ್ಪೆಷಲಿಸ್ಟ್ ಆಗಿ ಹೊರಹೊಮ್ಮುತ್ತಿದ್ದು, ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು
Image credit: PTI
11. ಯುಜುವೇಂದ್ರ ಚಹಲ್: ಟೀಂ ಇಂಡಿಯಾ ಸ್ಟಾರ್ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಲ್ ಕೂಡಾ ಒಳ್ಳೆಯ ಲಯದಲ್ಲಿದ್ದು, ದುಬೈ ಪಿಚ್‌ನಲ್ಲಿ ಪಾಕ್ ಬ್ಯಾಟರ್‌ಗಳಿಗೆ ಶಾಕ್ ನೀಡಲು ರೆಡಿಯಾಗಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.