ಏಷ್ಯಾಕಪ್‌ನಲ್ಲಿ ಭಾರತಕ್ಕೆ ಮತ್ತೊಂದು ಹಿನ್ನಡೆ, ತವರಿಗೆ ಮರಳಿದ ವೇಗಿ ಜಸ್ಪ್ರೀತ್ ಬುಮ್ರಾ!
ಪಾಕಿಸ್ತಾನ ವಿರುದ್ಧದ ಏಷ್ಯಾಕಪ್ ಟೂರ್ನಿ ಪಂದ್ಯ ಮಳೆಯಿಂದ ರದ್ದಾದ ಬೆನ್ನಲ್ಲೇ ಟೀಂ ಇಂಡಿಯಾ ಚಿತ್ತ ಇನ್ನುಳಿದ ಪಂದ್ಯದ ಮೇಲೆ ನೆಟ್ಟಿದೆ. ಆದರೆ ಹೋರಾಟಕ್ಕೂ ಮುನ್ನವೇ ಟೀಂ ಇಂಡಿಯಾಗೆ ಹಿನ್ನಡೆಯಾಗಿದೆ. ತಂಡಕ್ಕೆ ಕಮ್‌ಬ್ಯಾಕ್ ಮಾಡಿದ ವೇಗಿ ಜಸ್ಪ್ರೀತ್ ಬುಮ್ರಾ ತವರಿಗೆ ವಾಪಾಸ್ ಆಗಿದ್ದಾರೆ.

ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ತನ್ನ ಮೊದಲ ಪಂದ್ಯವನ್ನು ಪಾಕಿಸ್ತಾನ ವಿರುದ್ಧ ಆಡಿತ್ತು. ಆದರೆ ಮಳೆಯಿಂದ ಪಂದ್ಯ ರದ್ದಾಯಿತು. ಹೀಗಾಗಿ ಉಭಯ ತಂಡಗಳು ಒಂದೊಂದು ಅಂಕ ಹಂಚಿಕೊಂಡಿದೆ.
ಏಷ್ಯಾಕಪ್ ಟೂರ್ನಿ ಇನ್ನುಳಿದ ಪಂದ್ಯ ಟೀಂ ಇಂಡಿಯಾಗೆ ಅತ್ಯಂತ ಮಹತ್ವದ್ದಾಗಿದೆ. ದ್ವಿತೀಯ ಪಂದ್ಯದಲ್ಲಿ ಟೀಂ ಇಂಡಿಯಾ ನೇಪಾಳ ವಿರುದ್ಧ ಹೋರಾಟ ನಡೆಸಲಿದೆ.
ಈ ಪಂದ್ಯಕ್ಕೂ ಮುನ್ನವೇ ಟೀಂ ಇಂಡಿಯಾಗೆ ಹಿನ್ನಡೆಯಾಗಿದೆ. ಕಾರಣ ಸುದೀರ್ಘ ದಿನಗಳ ಬಳಿಕ ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡಿದ ವೇಗಿ ಜಸ್ಪ್ರೀತ್ ಬುಮ್ರಾ ಇದೀಗ ತವರಿಗೆ ಮರಳಿದ್ದಾರೆ.
ಶ್ರೀಲಂಕಾದ ಪಲ್ಲಕೆಲೆಯಲ್ಲಿ ಭಾರತದ ಪಂದ್ಯಗಳು ನಡೆಯಲಿದೆ. ಆದರೆ ನೇಪಾಳ ವಿರುದ್ಧದ ಪಂದ್ಯಕ್ಕೂ ಮೊದಲು ಜಸ್ಪ್ರೀತ್ ವೇಗಿ, ಮುಂಬೈಗೆ ಮರಳಿದ್ದಾರೆ.
ಫಿಟ್ನೆಸ್, ಇಂಜುರಿ ಕಾರಣದಿಂದ ತಂಡದಿಂದ ಹೊರಗುಳಿದಿದ್ದ ಬುಮ್ರಾ, ಏಷ್ಯಾಕಪ್ ಟೂರ್ನಿ ಮೂಲಕ ಕಮ್‌ಬ್ಯಾಕ್ ಮಾಡಿದ್ದರು. ಇದೀಗ ಬುಮ್ರಾ ತವರಿಗೆ ಮರಳಿರುವುದು ಫಿಟ್ನೆಸ್ ಕಾರಣದಿಂದ ಅಲ್ಲ.
ಸದ್ಯ ಬುಮ್ರಾ ಸಂಪೂರ್ಣ ಫಿಟ್ ಆಗಿದ್ದಾರೆ. ವೈಯುಕ್ತಿಕ ಕಾರಣದಿಂದ ಬುಮ್ರಾ ದಿಢೀರ್ ತವರಿಗೆ ಮರಳಿದ್ದಾರೆ. ಬುಮ್ರಾ ತವರಿಗೆ ವಾಪಸ್ ಆಗಲು ಬಿಸಿಸಿಐ ಅನುಮತಿ ಪಡೆದುಕೊಂಡಿದ್ದಾರೆ.
ನೇಪಾಳ ವಿರುದ್ಧದ ಭರ್ಜರಿ ಗೆಲುವು ದಾಖಲಿಸಿ ಸೂಪರ್ 4 ಹಂತಕ್ಕೆ ಪ್ರವೇಶ ಪಡೆಯಲು ಟೀಂ ಇಂಡಿಯಾ ತಯಾರಾಗಿದೆ. ಸೂಪರ್ 4 ಹಂತದ ಪಂದ್ಯದ ವೇಳೆ ಬುಮ್ರಾ ಟೀಂ ಇಂಡಿಯಾ ಸೇರಿಕೊಳ್ಳಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.