- Home
- Sports
- Cricket
- ಚೊಚ್ಚಲ ವಿಶ್ವಕಪ್ ಗೆಲ್ಲುತ್ತಿದ್ದಂತೆಯೇ ಭಾರತ ಮಹಿಳಾ ತಂಡಕ್ಕೆ ಬಂಪರ್ ಬಹುಮಾನ ಘೋಷಿಸಿದ BCCI! ಸಿಕ್ಕಿದ ನಗದು ಬಹುಮಾನ ಎಷ್ಟು?
ಚೊಚ್ಚಲ ವಿಶ್ವಕಪ್ ಗೆಲ್ಲುತ್ತಿದ್ದಂತೆಯೇ ಭಾರತ ಮಹಿಳಾ ತಂಡಕ್ಕೆ ಬಂಪರ್ ಬಹುಮಾನ ಘೋಷಿಸಿದ BCCI! ಸಿಕ್ಕಿದ ನಗದು ಬಹುಮಾನ ಎಷ್ಟು?
ಮುಂಬೈ: ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್ ತಂಡವು ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇದರ ಬೆನ್ನಲ್ಲೇ ಬಿಸಿಸಿಐ ಬಂಪರ್ ಬಹುಮಾನ ಘೋಷಿಸಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ

ಟ್ರೋಫಿ ಜತೆಗೆ ಭಾರತ ತಂಡಕ್ಕೆ 39.78 ಕೋಟಿ ರೂಪಾಯಿ ಬಹುಮಾನ
ಮೊದಲ ವಿಶ್ವಕಪ್ ಗೆಲುವಿನ ಜೊತೆಗೆ ಭಾರತ ತಂಡಕ್ಕೆ 39.78 ಕೋಟಿ ರೂಪಾಯಿ ಬಹುಮಾನ ಸಿಕ್ಕಿದೆ. ಇದು ವಿಶ್ವಕಪ್ ಇತಿಹಾಸದಲ್ಲೇ ಅತಿ ಹೆಚ್ಚು ಬಹುಮಾನದ ಮೊತ್ತವಾಗಿದೆ. ಎರಡನೇ ಸ್ಥಾನ ಪಡೆದ ದಕ್ಷಿಣ ಆಫ್ರಿಕಾಗೆ 19.88 ಕೋಟಿ ರೂಪಾಯಿ ಬಹುಮಾನ ಸಿಕ್ಕಿದೆ.
ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್‌ಗೆ ತಲಾ 9.94 ಕೋಟಿ ಬಹುಮಾನ
ಸೆಮಿಫೈನಲ್‌ನಲ್ಲಿ ಸೋತ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್‌ಗೆ ತಲಾ 9.94 ಕೋಟಿ ರೂಪಾಯಿ ಸಿಗಲಿದೆ. ಅಷ್ಟೇ ಅಲ್ಲ, ಬಿಸಿಸಿಐ ಕಡೆಯಿಂದಲೂ ಭಾರತ ತಂಡಕ್ಕೆ ದೊಡ್ಡ ಬಹುಮಾನದ ಮೊತ್ತ ಸಿಕ್ಕಿದೆ.
51 ಕೋಟಿ ರುಪಾಯಿ ನಗದು ಬಹುಮಾನ ಘೋಷಣೆ
ಬಿಸಿಸಿಐ 51 ಕೋಟಿ ರೂಪಾಯಿ ಬಹುಮಾನ ಘೋಷಿಸಿದೆ. ಕಳೆದ ವರ್ಷ ಟಿ20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಪ್ರಶಸ್ತಿ ಗೆದ್ದಿದ್ದ ರೋಹಿತ್ ಶರ್ಮಾ ನಾಯಕತ್ವದ ಭಾರತೀಯ ಪುರುಷರ ತಂಡಕ್ಕೆ ಬಿಸಿಸಿಐ 125 ಕೋಟಿ ರೂಪಾಯಿ ಬಹುಮಾನ ನೀಡಿತ್ತು.
ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಬಹುಮಾನ ಘೋಷಣೆ
ವಿಶ್ವಕಪ್ ಪ್ರಶಸ್ತಿ ಗೆಲ್ಲುವ ಮುನ್ನ ಬಹುಮಾನ ಘೋಷಿಸುವುದು ಸರಿಯಲ್ಲ ಎಂಬ ಕಾರಣಕ್ಕೆ ಬಹುಮಾನದ ಮೊತ್ತವನ್ನು ಅಧಿಕೃತವಾಗಿ ಘೋಷಿಸಿರಲಿಲ್ಲ. ಗೆಲುವಿನ ನಂತರ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಬಹುಮಾನದ ಮೊತ್ತವನ್ನು ಘೋಷಿಸಿದರು.
2017ರಲ್ಲಿ ಫೈನಲ್‌ನಲ್ಲಿ ಮುಗ್ಗರಿಸಿದ್ದ ಭಾರತ
2017ರ ಮಹಿಳಾ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಗೆಲುವಿನ ಸಮೀಪ ಬಂದು 9 ರನ್‌ಗಳಿಂದ ಸೋತಿದ್ದರೂ, ತಂಡದ ಸದಸ್ಯರು ಮತ್ತು ಸಹಾಯಕ ಸಿಬ್ಬಂದಿಗೆ ಬಿಸಿಸಿಐ 50 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು.
ಬಹುಮಾನ ಮೊತ್ತದಲ್ಲಿ 10 ಪಟ್ಟು ಹೆಚ್ಚಳ
ಎಂಟು ವರ್ಷಗಳ ನಂತರ ವಿಶ್ವಕಪ್‌ನಲ್ಲಿ ಮೊದಲ ಪ್ರಶಸ್ತಿ ಗೆಲುವಿನ ಬೆನ್ನಲ್ಲೇ ಇದೀಗ ಆಟಗಾರ್ತಿಯರಿಗೆ ಅದರ ಹತ್ತು ಪಟ್ಟು ಹೆಚ್ಚು ಹಣ ಸಿಗಲಿದೆ.
ಸ್ಮರಣೀಯ ಗೆಲುವು ದಾಖಲಿಸಿದ ಭಾರತ
ಕಳೆದೆರಡು ಬಾರಿ ಫೈನಲ್‌ನಲ್ಲಿ ಮುಗ್ಗರಿಸಿದ್ದ ಭಾರತ ಮಹಿಳಾ ಕ್ರಿಕೆಟ್ ತಂಡವು, ಕೊನೆಗೂ ತವರಿನಲ್ಲಿ ನಡೆದ ಮಹಿಳಾ ವಿಶ್ವಕಪ್ ಫೈನಲ್‌ನಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಸ್ಮರಣೀಯವಾಗಿಸಿಕೊಂಡಿತ್ತು.
ಫೈನಲ್‌ನಲ್ಲಿ 52 ರನ್ ಅಂತರದ ಸೋಲು
ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು 52 ರನ್‌ಗಳಿಂದ ಸೋಲಿಸಿ ಭಾರತ ಚೊಚ್ಚಲ ಪ್ರಶಸ್ತಿ ಗೆದ್ದುಕೊಂಡಿತು. ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ 299 ರನ್‌ಗಳ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 45.3 ಓವರ್‌ಗಳಲ್ಲಿ 246 ರನ್‌ಗಳಿಗೆ ಆಲೌಟ್ ಆಯಿತು.
ಲಾರಾ ವೊಲ್ವಾರ್ಟ್ ಹೋರಾಟ ವ್ಯರ್ಥ
ನಾಯಕಿ ಲಾರಾ ವೊಲ್ವಾರ್ಟ್ (98 ಎಸೆತಗಳಲ್ಲಿ 101) ಅವರ ಶತಕವೂ ದಕ್ಷಿಣ ಆಫ್ರಿಕಾವನ್ನು ಸೋಲಿನಿಂದ ಪಾರುಮಾಡಲು ಸಾಧ್ಯವಾಗಲಿಲ್ಲ. ಐದು ವಿಕೆಟ್ ಪಡೆದ ದೀಪ್ತಿ ಶರ್ಮಾ ದಕ್ಷಿಣ ಆಫ್ರಿಕಾವನ್ನು ಕಟ್ಟಿಹಾಕಿದರು.